7-ಸೀಟರ್.. 'ಐರಾವತ'ದಂತಹ ವೈಶಿಷ್ಟ್ಯಗಳು.. ಹೊಸ Kia Carens Clavis ಎಂಪಿವಿಯ ಕನ್ನಡ ವಿಡಿಯೋ ರಿವ್ಯೂ
ಇತ್ತೀಚೆಗೆ ಹೊಚ್ಚ ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಎಂಪಿವಿಯನ್ನು ಅನಾವರಣಗೊಳಿಸಲಾಗಿತ್ತು. ಇದೇ 23ರಂದು ಈ ಕಾರನ್ನು ಮಾರಾಟಕ್ಕೂ ತರಲಾಗುತ್ತದೆ. ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಗೂ ಚಾಲನೆ ನೀಡಲಾಗಿದ್ದು, ಆಸಕ್ತ ಖರೀದಿದಾರರು ನಿರ್ದಿಷ್ಟ ಮೊತ್ತವನ್ನು ಪಾವತಿ ಮಾಡಿ, ಆರ್ಡರ್ ಮಾಡಬಹುದು. ನೂತನ ಕ್ಲಾವಿಸ್ ಎಂಪಿವಿ ರೂ.11 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಕೆಲವೇ ದಿನಗಳ ಹಿಂದೆ, ನಮ್ಮ ತಂಡದ ಸದಸ್ಯರು ಇದೇ ಕಾರನ್ನು ಟೆಸ್ಟ್ ಡ್ರೈವ್ ಕೂಡ ನಡೆಸಿದ್ದರು. ನಿಮಗಾಗಿ ಇಲ್ಲಿದೆ ಕನ್ನಡ ವಿಡಿಯೋ ರಿವ್ಯೂ..
ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ಉತ್ತಮವಾಗಿರುವ ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 7-ಇಂಚಿನ ಡೈಮಂಡ್ ಕಟ್ ಡುಯಲ್ ಟೋನ್ ಅಲಾಯ್ ವೀಲ್‌ಗಳು ಹಾಗೂ ರೂಫ್ ರೈಲ್‌ಗಳನ್ನು ಪಡೆದಿದೆ. ಈ ಕಾರಿನ ಒಳಭಾಗ ಕೂಡ ತುಂಬಾ ಚೆನ್ನಾಗಿದೆ.

ಹೊಸ ಎಂಪಿವಿಯು ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಕೆ ಪ್ಲಸ್ (ಒ), ಹೆಚ್‌ಟಿಎಕ್ಸ್ & ಹೆಚ್‌ಟಿಎಕ್ಸ್ ಪ್ಲಸ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ. ಜೊತೆಗೆ ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್ ಮತ್ತು ಕ್ಲಿಯರ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 16 ರಿಂದ 21 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎನ್ನಲಾಗಿದೆ. ಜೊತೆಗೆ 6/ 7 ಆಸನಗಳನ್ನು ಪಡೆದಿದೆ.
ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಬೋಸ್ ಸೌಂಡ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ.
ಹೊಸ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








