Kia: 6 & 7-ಸೀಟರ್, ಕಣ್ಣು ಕುಕ್ಕುವ ಫೀಚರ್ಸ್.. ಅಗ್ಗದ ದರಕ್ಕೆ ಹೊಸ 'ಕಿಯಾ ಕ್ಯಾರೆನ್ಸ್ ಕ್ಲಾವಿಸ್' ಎಂಪಿವಿ ಬಿಡುಗಡೆ!
ಭಾರತದಲ್ಲಿನ ಮಧ್ಯಮ ವರ್ಗದ ಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ಕಿಯಾ ಮೋಟಾರ್ಸ್ (Kia Motors), ಈಚೆಗೆ ಹೊಚ್ಚ ಹೊಸ ಕ್ಯಾರೆನ್ಸ್ ಕ್ಲಾವಿಸ್ (Carens Clavis) ಎಂಪಿವಿಯನ್ನು ಅದ್ದೂರಿಯಾಗಿ ಅನಾವರಣಗೊಳಿಸಿತ್ತು. ಇದು ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಸದ್ಯ, ಈ ಕಾರನ್ನು ಬಿಡುಗಡೆ ಮಾಡಲಾಗಿದ್ದು, ಬೆಲೆಯನ್ನು ಕೂಡ ಘೋಷಣೆ ಮಾಡಲಾಗಿದೆ. ಬನ್ನಿ, ನೂತನ ಎಂಪಿವಿ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಎಂಪಿವಿ ಅತಿ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಇದು ರೂ.11.49 ಲಕ್ಷ ಆರಂಭಿಕ ದರವನ್ನು (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈಗಾಗಲೇ, ಈ ಕಾರಿನ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಖರೀದಿದಾರರು ರೂ.25,000 ಟೋಕನ್ ಮೊತ್ತವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು.

ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರನ್ನು ಒಮ್ಮೆಲೇ ತನ್ನತ್ತ ಆಕರ್ಷಿಸಿ ಬಿಡುತ್ತದೆ. ಹೊಸ ಎಂಪಿವಿಯು ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, 'ಎಲ್' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 17-ಇಂಚಿನ ಡೈಮಂಡ್ ಕಟ್ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಮತ್ತು ಅರೋರಾ ಬ್ಲ್ಯಾಕ್ ಪರ್ಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ಹೊಚ್ಚ ಹೊಸ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಕೆ ಪ್ಲಸ್ (ಒ), ಹೆಚ್‌ಟಿಎಕ್ಸ್ & ಹೆಚ್‌ಟಿಎಕ್ಸ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಇದರಲ್ಲಿ 6 & 7 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 216 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಕ್ಲಾವಿಸ್ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಈ ಎಂಪಿವಿ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಫ್ಲಾಟ್-ಬಾಟಮ್ ಸ್ಟೀರಿಂಗ್ ವೀಲ್, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿದೆ.

ಹೊಸ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್, ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








