Kia: ಕಿಯಾ ಕಾರುಗಳಿಗೆ ಕ್ಯೂ ನಿಂತ ಗ್ರಾಹಕರು.. ಭಾರೀ ಸಂಖ್ಯೆಯಲ್ಲಿ ಮಾರಾಟ, ಕಾರಣವೇನು?
ಕಿಯಾ ಇಂಡಿಯಾ (Kia India) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಆಂಧ್ರ ಪ್ರದೇಶದ ಅನಂತಪುರದಲ್ಲಿ ಕಂಪನಿಯು ಬೃಹತ್ ಉತ್ಪಾದನಾ ಘಟಕವನ್ನು ಹೊಂದಿದ್ದು, ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳು ಹೆಚ್ಚು ಆಕರ್ಷಕವಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಏಪ್ರಿಲ್ ತಿಂಗಳಲ್ಲೂ ಕಿಯಾ ಕಂಪನಿಯ ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಕಳೆದ ತಿಂಗಳು (ಏಪ್ರಿಲ್ - 2025) ಕಿಯಾ ಇಂಡಿಯಾ ಬರೋಬ್ಬರಿ 23,623 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 19,968 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 18.3% ಪ್ರಗತಿಯಾಗಿದೆ.

ಕಿಯಾ ಕಂಪನಿಯ ಒಟ್ಟಾರೆ ಮಾರಾಟದಲ್ಲಿ 8,068 ಯುನಿಟ್‌ಗಳೊಂದಿಗೆ ಸೋನೆಟ್ ಎಸ್‌ಯುವಿ ಮೊದಲ ಸ್ಥಾನದಲ್ಲಿದೆ. ಅದೇ ರೀತಿಯಲ್ಲಿ ಎರಡನೇ ಸ್ಥಾನದಲ್ಲಿ ಸೆಲ್ಟೋಸ್ (6,135 ಯುನಿಟ್), ಮೂರನೇ ಸ್ಥಾನದಲ್ಲಿ ಕ್ಯಾರೆನ್ಸ್ (5,259 ಯುನಿಟ್) ಮತ್ತು ನಾಲ್ಕನೇ ಸ್ಥಾನದಲ್ಲಿ ಸೈರಸ್ (4,000 ಯುನಿಟ್) ಹಾಗೂ ಐದನೇ ಸ್ಥಾನದಲ್ಲಿ ಕಾರ್ನಿವಲ್ (161 ಯುನಿಟ್) ಕಾರಿದೆ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಹಲವು ಸ್ವದೇಶಿ ಹಾಗೂ ವಿದೇಶಿ ಕಂಪನಿ ಕಾರುಗಳಿದ್ದರೂ ಕಿಯಾ ಕಾರುಗಳ ಮಾರಾಟ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದಕ್ಕೆ ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಕಂಪನಿಯ ಕಾರುಗಳು ಬಜೆಟ್ ಬೆಲೆಯಲ್ಲಿ ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ಇದರಿಂದಲೇ ಮಾರಾಟ ಸಂಖ್ಯೆ ಅಧಿಕಗೊಳ್ಳುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಕಿಯಾ ಮಾರಾಟಗೊಳಿಸುವ ಪ್ರಮುಖ ಕಾರುಗಳ ಕುರಿತ ಸಂಕ್ಷಿಪ್ತ ವಿವರ..
ಕಿಯಾ ಸೋನೆಟ್ (Kia Sonet): ಇದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.8 ಲಕ್ಷದಿಂದ ರೂ.15.60 ಲಕ್ಷ ಎಕ್ಸ್-ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 18.7 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಪ್ರಯಾಣ ಮಾಡಬಹುದು.
ಕಿಯಾ ಸೆಲ್ಟೋಸ್ (Kia Seltos): ಈ ಕಾರು ರೂ.11.19 ಲಕ್ಷದಿಂದ ರೂ.20.51 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್‌ಪ್ಲೇಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಕಿಯಾ ಸೈರಸ್ (Kia Syros): ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿ ಹೊರಹೊಮ್ಮಿದೆ. ರೂ.8.99 ಲಕ್ಷದಿಂದ ರೂ.17.80 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








