Kia: ಶೋರೂಂ ಮುಂದೆ ಗ್ರಾಹಕರು ಸಾಲು ಕಟ್ಟುವರು.. ಈ ದೀಪಾವಳಿಗೆ ಕಿಯಾ ಕಾರುಗಳಿಗೆ 1.60 ಲಕ್ಷವರೆಗೆ ಆಫರ್ ಘೋಷಣೆ!
ಕಿಯಾ ಇಂಡಿಯಾ (Kia India) ಜನ ಮೆಚ್ಚಿದ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಈ ದೀಪಾವಳಿ ಹಬ್ಬಕ್ಕೆ ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಸೋನೆಟ್, ಸೈರಸ್, ಸೆಲ್ಟೋಸ್, ಕ್ಯಾರೆನ್ಸ್ ಹಾಗೂ ಕ್ಯಾರೆನ್ಸ್ ಕ್ಲಾವಿಸ್ ಕಾರುಗಳ ಖರೀದಿ ಮೇಲೆ ದೊಡ ಮಟ್ಟದ ಹಣಕಾಸಿನ ಪ್ರಯೋಜನವನ್ನು ಘೋಷಣೆ ಮಾಡಿದೆ. ಬನ್ನಿ, ಯಾವ ಕಾರಿಗೆ ಎಷ್ಟು ಆಫರ್ ಇದೆ.. ಜೊತೆಗೆ ಎಕ್ಸ್-ಶೋರೂಂ ದರವೆಷ್ಟು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಕಿಯಾ ಸೋನೆಟ್ (Kia Sonet):
ಇದೊಂದು ಎಸ್‌ಯುವಿಯಾಗಿದೆ. ರೂ.1.03 ಲಕ್ಷವರೆಗೆ ಹಬ್ಬದ ಕೊಡುಗೆಗಳು ಲಭ್ಯವಿದ್ದು, ಕನಿಷ್ಠ ರೂ.7.30 ಲಕ್ಷ ಹಾಗೂ ಗರಿಷ್ಠ ರೂ.14.09 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಗ್ಲೇಸಿಯರ್ ವೈಟ್ ಪರ್ಲ್, ಕ್ಲಿಯರ್ ವೈಟ್, ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಪ್ಯೂಟರ್ ಆಲಿವ್, ಅರೋರಾ ಬ್ಲ್ಯಾಕ್ ಪರ್ಲ್, ಇಂಟೆನ್ಸ್ ರೆಡ್ ಹಾಗೂ ಇಂಪೀರಿಯಲ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಸೋನೆಟ್' 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಬೃಹತ್ ಗಾತ್ರದ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್ & ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಕಿಯಾ ಸೈರಸ್ (Kia Syros):
ಈ ಎಸ್‌ಯುವಿಯು ದೀಪಾವಳಿ ಹಬ್ಬಕ್ಕೆ ರೂ.1.60 ಲಕ್ಷವರೆಗೆ ಹಣಕಾಸು ಪ್ರಯೋಜನಗಳನ್ನು ಹೊಂದಿದೆ. ರೂ.8.67 ಲಕ್ಷದಿಂದ ರೂ.15.94 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಸ್ಪಾರ್ಕ್ಲಿಂಗ್ ಸಿಲ್ವರ್, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್ ಹಾಗೂ ಪ್ಯೂಟರ್ ಆಲಿವ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ಸೈರಸ್' 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 21 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್ ಸೆಟಪ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಹಾಗೂ ಪನೊರೊಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಕಿಯಾ ಸೆಲ್ಟೋಸ್ (Kia Seltos):
ಇದಕ್ಕೆ ರೂ.1.47 ಲಕ್ಷವರೆಗೆ ಹಬ್ಬದ ಕೊಡುಗೆಗಳು ಸಿಗುತ್ತಿದ್ದು, ಕನಿಷ್ಠ ರೂ.10.79 ಲಕ್ಷ ಹಾಗೂ ಗರಿಷ್ಠ ರೂ.19.81 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 21 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

ಕಿಯಾ ಕ್ಯಾರೆನ್ಸ್ (Kia Carens):
ಈ ಎಂಪಿವಿಯು ರೂ.83,000 ವರೆಗೆ ಹಣಕಾಸು ಪ್ರಯೋಜನವನ್ನು ಪಡೆದಿದೆ. ರೂ.10.99 ಲಕ್ಷದಿಂದ ರೂ.12.77 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 12.6 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):
ಇದೊಂದು ಎಂಪಿವಿಯಾಗಿದೆ. ರೂ.1.42 ಲಕ್ಷವರೆಗೆ ಹಬ್ಬದ ಕೊಡುಗೆಗಳು ದೊರೆಯುತ್ತಿದ್ದು, ಕನಿಷ್ಠ ರೂ.11.08 ಲಕ್ಷ ಮತ್ತು ಗರಿಷ್ಠ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಹೊಂದಿದೆ.


Click it and Unblock the Notifications








