7-ಸೀಟರ್.. ಲಕ್ಷುರಿ ಫೀಚರ್ಸ್‌ನ ಹೊಸ 'Kia Mpv'ಗೆ ಅನಧಿಕೃತ ಬುಕ್ಕಿಂಗ್ ಶುರು, ಇದೇ 8ಕ್ಕೆ ಪರಿಚಯ.. 11 ಲಕ್ಷ ಬೆಲೆ?

ಕಿಯಾ ಇಂಡಿಯಾ (Kia India) ಪ್ರಮುಖ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಕಳೆದ ತಿಂಗಳು (ಏಪ್ರಿಲ್-2025) ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಸರಿ ಸುಮಾರು 23,623 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿತ್ತು. 2024ರ ಇದೇ ಅವಧಿಯಲ್ಲಿ 19,968 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 18.3% ಬೆಳವಣಿಗೆಯಾಗಿದೆ. ಇತ್ತೀಚೆಗೆ ಬಿಡುಗಡೆಗೊಂಡ ನೂತನ 'ಸೈರಸ್' ಎಸ್‌ಯುವಿ ಕೂಡ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, ಕಂಪನಿಯು ಹೊಚ್ಚ ಹೊಸ ಫ್ಯಾಮಿಲಿ ಕಾರೊಂದನ್ನು ಮಾರಾಟಕ್ಕೆ ತರಲು ಭರ್ಜರಿಯಾಗಿ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಇದೇ 8 ರಂದು ನೂತನ ಕಿಯಾ ಕ್ಲಾವಿಸ್ (Kia Clavis) ಎಂಪಿವಿಯನ್ನು ಅದ್ದೂರಿಯಾಗಿ ಪರಿಚಯಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಈಗಾಗಲೇ, ದೇಶಾದ್ಯಂತ ಆಯ್ದ ಡೀಲರ್‌ಶಿಪ್‌ಗಳಲ್ಲಿ ಹೊಸ ಕಾರಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ತೆಗೆದುಕೊಳ್ಳುವುದಕ್ಕೂ ಶುರು ಮಾಡಲಾಗಿದೆ. ಈ ಸಂಬಂಧ ವಿವಿಧ ಮಾಧ್ಯಮಗಳು ಸಹ ವರದಿ ಮಾಡಿವೆ.

Kia Clavis Unofficial Bookings Open May 8 Debut Expected Price And Features Details

ಈ ಕಿಯಾ ಕ್ಲಾವಿಸ್ ಎಂಪಿವಿ ವಿನ್ಯಾಸ ಇವಿ6 ಮತ್ತು ಸೈರಸ್ ಕಾರುಗಳಿಗೆ ಹೋಲಿಕೆಯಾಗುತ್ತದೆ. ಇದು ನೋಡುಗರನ್ನು ಸೆಳೆಯಬಲ್ಲ 3-ಪಾಡ್ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲೈಟ್‌ಗಳು, ತ್ರೈ-ಅಂಗುಲರ್ ಎಲ್ಇಡಿ ಡಿಆರ್‌ಎಲ್‌ಗಳು, ಕ್ಲೋಸ್ಡ್-ಆಫ್ ಫ್ರಂಟ್ ಗ್ರಿಲ್, ಸಿಲ್ವರ್ ಸ್ಕಿಡ್ ಪ್ಲೇಟ್‌ಗಳು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಗಟ್ಟಿಮುಟ್ಟಾದ ಬಂಪರ್‌ಗಳು ಮತ್ತು ಕನೆಕ್ಟ್ಡ್ ಎಲ್ಇಡಿ ಟೈಲ್-ಲೈಟ್‌ಗಳನ್ನು ಹೊಂದಿರುವುದು ಬಹುತೇಕ ಖಚಿತವಾಗಿದೆ.

ನೂತನ ಕಿಯಾ ಕ್ಲಾವಿಸ್ ಎಂಪಿವಿ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದು 1.5 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿರಬಹುದು ಎನ್ನಲಾಗಿದೆ.

Kia Clavis Unofficial Bookings Open May 8 Debut Expected Price And Features Details

ಹೊಸ ಕಿಯಾ ಕ್ಲಾವಿಸ್ ಎಂಪಿವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. 12.3-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಡುಯಲ್-ಜೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಪ್ರೀಮಿಯಂ ಬೋಸ್ ಆಡಿಯೊ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಬಹುದು. ಎಂದು ಹೇಳಲಾಗಿದೆ.

ಈ ಕ್ಲಾವಿಸ್ ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಲಿದೆ ಎಂದು ಹೇಳಲಾಗಿದೆ. ಇದು ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಮುಂಭಾಗ (ಫ್ರಂಟ್) - ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸಾರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

Kia Clavis Unofficial Bookings Open May 8 Debut Expected Price And Features Details

ನೂತನ ಕಿಯಾ ಕ್ಲಾವಿಸ್ ಎಂಪಿವಿ 7 ಆಸನಗಳನ್ನು ಹೊಂದಿರುವ ನಿರೀಕ್ಷೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಜೊತೆಗೆ ಈ ಕಾರು ರೂ.11 ಲಕ್ಷದಿಂದ ರೂ.21 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಬಹುದು. ಇದಕ್ಕೆ ಮಾರುತಿ ಸುಜುಕಿ ಎರ್ಟಿಗಾ ಮತ್ತು ಟೊಯೊಟಾ ರೂಮಿಯನ್ ಎಂಪಿವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, May 5, 2025, 10:31 [IST]
English summary
Kia clavis unofficial bookings open may 8 debut expected price and features details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+