8.99 ಲಕ್ಷ.. 5-ಸೀಟರ್, 20 Km ಮೈಲೇಜ್.. ಕಿಯಾಗೆ ವರವಾದ ಸೈರಸ್ ಎಸ್‌ಯುವಿ.. ಭಾರೀ ಸಂಖ್ಯೆಯಲ್ಲಿ ಮಾರಾಟ!

ಕಿಯಾ ಮೋಟಾರ್ಸ್ (Kia Motors), ಪ್ರಮುಖ ವಾಹನ ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯವಾಗಿ ಕಂಪನಿ ಮಾರಾಟಗೊಳಿಸುವ ಕಾರುಗಳು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಸಹ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಿಯಾ ಕಂಪನಿಯು ಫೆಬ್ರವರಿ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಫೆಬ್ರವರಿ - 2025) ಕಿಯಾ ಮೋಟಾರ್ಸ್ ಬರೋಬ್ಬರಿ 25,026 ಯುನಿಟ್‌ ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 20,200 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 23.8% ಬೆಳವಣಿಗೆಯನ್ನು ಸಾಧಿಸಲಾಗಿದೆ.

Kia February 2025 Sales Report 23 Percent Growth Syros Suv Become Game Changer

ಕಿಯಾ ಕಂಪನಿ ಈ ಪರಿಪ್ರಮಾಣದಲ್ಲಿ ಪ್ರಗತಿ ಹೊಂದಲು ಸೈರಸ್ (Syros) ಎಸ್‌ಯುವಿ ಬಹುಮುಖ್ಯ ಕಾರಣವಾಗಿದೆ. ಹೋದ ತಿಂಗಳು ಸರಿ ಸುಮಾರು 5,425 ಯುನಿಟ್‌ ಸೈರಸ್ ಕಾರುಗಳನ್ನು ಮಾರಾಟಗೊಳಿಸಿದೆ. ಫೆಬ್ರವರಿ 1ರಂದು ನೂತನ ಕಿಯಾ ಸೈರಸ್ ಎಸ್‌ಯುವಿಯನ್ನು ಆದ್ದೂರಿಯಾಗಿ ಬಿಡುಗಡೆ ಮಾಡಲಾಗಿತ್ತು. ಈವರೆಗೆ 20,000ಕ್ಕೂ ಅಧಿಕ ಗ್ರಾಹಕರು ಬುಕ್ಕಿಂಗ್‌ನ್ನು ಮಾಡಿದ್ದಾರೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಕಿಯಾ ಸೈರಸ್ (Kia Syros) ಎಸ್‌ಯುವಿ ರೂ.8.99 ಲಕ್ಷದಿಂದ ರೂ.17.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್, ಹೆಚ್‌ಟಿಎಕ್ಸ್ ಪ್ಲಸ್ (ಒ) ಎಂಬ ಅತ್ಯಾಧುನಿಕ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಸ್ಪಾರ್ಕ್ಲಿಂಗ್ ಸಿಲ್ವರ್, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್ ಮತ್ತು ಪ್ಯೂಟರ್ ಆಲಿವ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಾಗುತ್ತದೆ.

Kia February 2025 Sales Report 23 Percent Growth Syros Suv Become Game Changer

ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು, ಅಲಾಯ್ ವೀಲ್‌ಗಳು ಹಾಗೂ ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳನ್ನು ಹೊಂದಿದೆ. ಜೊತೆಗೆ 3,995 ಎಂಎಂ ಉದ್ದ, 1,800 ಎಂಎಂ ಅಗಲ ಹಾಗೂ 1,665 ಎಂಎಂ ಎತ್ತರವೂ ಇದೆ.

ನೂತನ ಕಿಯಾ ಸೈರಸ್ ಎಸ್‌ಯುವಿ 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.65 ರಿಂದ 20.75 ಕೆಎಂಪಿಎಲ್‌ವರೆಗೂ ಮೈಲೇಜ್ ಕೂಡ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

Kia February 2025 Sales Report 23 Percent Growth Syros Suv Become Game Changer

ಹೊಸ ಸೈರಸ್ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಪ್ರಮುಖವಾಗಿ ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಜೋನ್ ಎಸಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೊರೊಮಿಕ್ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ನೂತನ ಸೈರಸ್ ಎಸ್‌ಯುವಿಗೆ ಟಾಟಾ ನೆಕ್ಸಾನ್, ಹ್ಯುಂಡೈ ಕ್ರೆಟಾ ಹಾಗೂ ಮಾರುತಿ ಗ್ರ್ಯಾಂಡ್ ವಿಟಾರಾ ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, March 2, 2025, 9:00 [IST]
English summary
Kia february 2025 sales report 23 percent growth syros suv become game changer
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+