Kia: ಕಿಯಾ ಕಾರುಗಳಿಗೆ ಮುಗಿಬಿದ್ದ ಗ್ರಾಹಕರು.. ಫುಲ್ ಡಿಮ್ಯಾಂಡ್, ರೆಕಾರ್ಡ್ ಸಂಖ್ಯೆಯಲ್ಲಿ ಮಾರಾಟ!
ಕಿಯಾ ಮೋಟಾರ್ಸ್ (Kia Motors) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಸೆಲ್ಟೋಸ್, ಸೋನೆಟ್ ಮತ್ತು ಸೈರಸ್ ಒಳಗೊಂಡಂತೆ ಹಲವು ಕಾರುಗಳನ್ನು ಯಶಸ್ವಿಯಾಗಿಯೂ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಕಂಪನಿಯು 'ಮೇ' ತಿಂಗಳ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಮೇ - 2025) ದೇಶೀಯ ಮಾರುಕಟ್ಟೆಯಲ್ಲಿ 'ಕಿಯಾ ಮೋಟಾರ್ಸ್' ಬರೋಬ್ಬರಿ 22,315 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ. 2024ರ ಮೇ ತಿಂಗಳಲ್ಲಿ 19,500 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 14.43% ಬೆಳವಣಿಗೆಯಾಗಿದೆ.

ಕಿಯಾ ಮೋಟಾರ್ಸ್ ಒಟ್ಟಾರೆ ಮಾರಾಟದಲ್ಲಿ ಈ ಮಟ್ಟದ ಅಧಿವೃದ್ದಿ ಸಾಧಿಸಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಕಂಪನಿಯ ಕಾರುಗಳು ಹೆಚ್ಚು ಆಕರ್ಷಕವಾಗಿರುವ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಸಿಗುವುದರಿಂದ ಖರೀದಿದಾರರು ಸಹ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಕಿಯಾ ಮಾರಾಟಗೊಳಿಸುತ್ತಿರುವ ಕಾರುಗಳ ವಿಶೇಷತೆಗಳೇನು..
ಕಿಯಾ ಸೆಲ್ಟೋಸ್ (Kia Seltos): ಈ ಎಸ್‌ಯುವಿಯು ರೂ.11 ಲಕ್ಷದಿಂದ ರೂ.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 10.25-ಇಂಚಿನ ಡುಯಲ್ ಡಿಸ್‌ಪ್ಲೇ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಕಿಯಾ ಸೋನೆಟ್ (Kia Sonet): ಇದು ಪ್ರಮುಖ ಎಸ್‌ಯುವಿಯಾಗಿದೆ. ರೂ.8 ಲಕ್ಷದಿಂದ ರೂ.16 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಸಿಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಒಳಗೊಂಡಿದ್ದು, 18 ರಿಂದ 22 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿಯೂ 5 ಜನರು ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಕಿಯಾ ಸೈರಸ್ (Kia Syros): ಈ ಎಸ್‌ಯುವಿಯು ಅಗ್ಗದ ದರದಲ್ಲೂ ಲಭ್ಯವಾಗುತ್ತದೆ. ಇದು ರೂ.9.50 ಲಕ್ಷದಿಂದ ರೂ.18 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಸಿಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು.
ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಎಂಪಿವಿಯು ಬಿಡುಗಡೆಯಾಗಿದೆ..
ಇದು ರೂ.11.49 ಲಕ್ಷ ಆರಂಭಿಕ ಬೆಲೆಯನ್ನು (ಎಕ್ಸ್-ಶೋರೂಂ) ಒಳಗೊಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಈ ಕಾರಿನಲ್ಲಿ 6 ಮತ್ತು 7 ಆಸನಗಳಿದ್ದು, ಒಂದು ತುಂಬು ಕುಂಟುಂಬ ಸುಲಭವಾಗಿ ಪ್ರಯಾಣ ಮಾಡಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








