5-ಸೀಟರ್.. ಜನಮೆಚ್ಚಿದ Kia Syros ಎಲೆಕ್ಟ್ರಿಕ್ ರೂಪದಲ್ಲಿ, ಮೊದಲ ಬಾರಿಗೆ ಕಾಣಿಸಿಕೊಂಡೆ ಬಿಡ್ತು.. ಬೆಲೆಯೂ ಅಗ್ಗವೇ?

ಕಿಯಾ ಮೋಟಾರ್ಸ್ (Kia Motors), ಇದೇ ಫೆಬ್ರವರಿಯಲ್ಲಿ ಹೊಚ್ಚ ಹೊಸ 'ಸೈರಸ್' ಎಸ್‌ಯುವಿಯನ್ನು ಮಾರಾಟಕ್ಕೆ ತಂದಿತ್ತು. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕನಿಷ್ಠ ರೂ.9.50 ಲಕ್ಷ ಹಾಗೂ ಗರಿಷ್ಠ ರೂ.17.80 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಸದ್ಯ ಈ ಸೈರಸ್ ಎಸ್‌ಯುವಿಯು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಎಂಬ ವಿಚಾರವು ಬಹುತೇಕ ದೃಢಪಟ್ಟಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಇದೇ ಮೊದಲ ಬಾರಿಗೆ ನೂತನ ಕಿಯಾ ಸೈರಸ್ ಇವಿ (Kia Syros EV) ಚಾರ್ಜಿಂಗ್ ಸ್ಟೇಷನ್‌ನಲ್ಲಿ ನಿಂತಿದ್ದಾಗ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದ್ದು, 'ಕಾರ್‌ವಾಲೆ' ಕೂಡ ವರದಿ ಪ್ರಕಟಿಸಿದೆ. ಈ ಕಾರನ್ನು ಬ್ಯ್ಲಾಕ್ ಕವರ್‌ನಿಂದ ಮುಚ್ಚಲಾಗಿತ್ತು. ಹೀಗಾಗಿ, ವಿನ್ಯಾಸದ ಕುರಿತಂತೆ ಯಾವುದೇ ಪ್ರಮುಖ ಅಂಶಗಳು ಅಷ್ಟಾಗಿ ಬಹಿರಂಗಗೊಂಡಿಲ್ಲ.

Kia Syros Electric Suv Spied First Time Expected Price Design Range And Features Details

ಹೊಸ ಕಿಯಾ ಸೈರಸ್ ಇವಿಯು ಸಾಮಾನ್ಯ ಇಂಧನ ಚಾಲಿತ 'ಸೈರಸ್'ನಂತೆ ವಿನ್ಯಾಸವನ್ನು ಹೊಂದಿರಲಿದೆ ಎನ್ನಲಾಗಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 'ಎಲ್' ಆಕಾರಕ್ಕೆ ಹೋಲುವ ಎಲ್ಇಡಿ ಟೈಲ್ ಲೈಟ್‌ಗಳು, ಫ್ಲಶ್ ಟೈಪ್ ಡೋರ್ ಹ್ಯಾಂಡಲ್‌ಗಳು ಮತ್ತು 17-ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.

ನೂತನ ಕಿಯಾ ಸೈರಸ್ ಎಲೆಕ್ಟ್ರಿಕ್ ಎಸ್‌ಯುವಿಯು ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಪ್ಯೂಟರ್ ಆಲಿವ್, ಸ್ಪಾರ್ಕ್ಲಿಂಗ್ ಸಿಲ್ವರ್ ಮತ್ತು ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುವ ನೀರಿಕ್ಷೆಯಿದೆ. 3,995 ಎಂಎಂ ಉದ್ದ, 1,800 ಎಂಎಂ ಅಗಲ & 1,665 ಎಂಎಂ ಎತ್ತರವು ಇರಬಹುದು ಎಂದು ಅಂದಾಜಿಸಲಾಗಿದೆ.

Kia Syros Electric Suv Spied First Time Expected Price Design Range And Features Details

ಈ ಕಿಯಾ ಸೈರಸ್ ಇವಿ ಬಲಿಷ್ಠವಾದ ಪವರ್‌ಟ್ರೇನ್ ಒಳಗೊಂಡಿರುವ ಸಾಧ್ಯತೆಯಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 300 ರಿಂದ 355 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ಇದು ಸಹ 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದಾಗಿದೆ. ಇಂಧನ ಚಾಲಿತ 'ಸೈರಸ್' ರೀತಿಯಲ್ಲಿಯೇ ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್ (12.3-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ - ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎನ್ನಲಾಗಿದೆ.

ಹೊಸ ಕಿಯಾ ಸೈರಸ್ ಇವಿಯು ಗರಿಷ್ಠ ಸುರಕ್ಷತಾ ವೈಶಿಷ್ಟ್ಯವನ್ನು ಹೊಂದಿರುವ ನಿರೀಕ್ಷೆಯಿದೆ. 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 3-ಪಾಯಿಂಟ್ ಸೀಟ್‌ ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ಎಲ್ಲ ಲಕ್ಷಣಗಳಿವೆ.

ಈ ಕಿಯಾ ಸೈರಸ್ ಇವಿಯು 2026ರ ಮೊದಲರ್ಧದಲ್ಲಿ ಅದ್ದೂರಿಯಾಗಿಯೂ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ರೂ.14 ಲಕ್ಷದಿಂದ ರೂ 20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಎಂಜಿ ವಿಂಡ್ಸರ್ ಇವಿ, ಟಾಟಾ ಹ್ಯಾರಿಯರ್ ಇವಿ ಹಾಗೂ ಟಾಟಾ ನೆಕ್ಸಾನ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಬಲ್ಲವು.

ಇತ್ತೀಚೆಗೆ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV) ಕೂಡ ಮಾರಾಟಕ್ಕೆ ಬಂದಿದೆ:

ಇದು ರೂ.17.99 ಲಕ್ಷದಿಂದ ರೂ. 24.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 404 ರಿಂದ 490 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 7 ಆಸನಗಳನ್ನು ಪಡೆದಿದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 6-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Tuesday, August 12, 2025, 13:02 [IST]
English summary
Kia syros electric suv spied first time expected price design range and features details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+