ಬುಕ್ಕಿಂಗ್‌ನಲ್ಲಿ ಅಬ್ಬರಿಸಿದ ಹೊಸ ಕಿಯಾ ಕಾರು.. ಪೆಟ್ರೋಲ್ ಮಾಡೆಲ್‌ಗಳಿಗೆ ಮುಗಿಬಿದ್ದ ಗ್ರಾಹಕರು!

ಕಿಯಾ ಮೋಟಾರ್ಸ್ (Kia Motors), ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಸೋನೆಟ್ ಮತ್ತು ಸೆಲ್ಟೋಸ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತದೆ. ಡಿಸೆಂಬರ್ 19 ರಂದು ಕಂಪನಿಯು ಹೊಚ್ಚ ಹೊಸ 'ಸೈರಸ್' ಎಸ್‌ಯುವಿಯನ್ನು ಅನಾವರಣಗೊಳಿಸಿತ್ತು. ಇತ್ತೀಚೆಗೆ, ಕಂಪನಿಯು ಈ ಕಾರಿಗಾಗಿ ಬುಕ್ಕಿಂಗ್‌ನ್ನು ಪಡೆಯುವುದಕ್ಕೂ ಶುರು ಮಾಡಿತ್ತು. ನೂತನ ಕಿಯಾ ಸೈರಸ್ ಎಸ್‌ಯುವಿಗಳನ್ನು ಖರೀದಿದಾರರು ಕೂಡ ದಾಖಲೆ ಸಂಖ್ಯೆಯಲ್ಲಿ ಆರ್ಡರ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಕಿಯಾ ಸೈರಸ್ (Kia Syros) ಎಸ್‌ಯುವಿ ಬರೋಬ್ಬರಿ 10,000 ಬುಕ್ಕಿಂಗ್‌ಗಳನ್ನು ಪಡೆದುಕೊಂಡಿದೆ. ಅದರಲ್ಲಿ ಸರಿ ಸುಮಾರು ಶೇಕಡ 60%ಗೂ ಅಧಿಕ ಗ್ರಾಹಕರು ಪೆಟ್ರೋಲ್ ಚಾಲಿತ ಮಾಡೆಲ್‌ಗಳನ್ನು ಆರ್ಡರ್ ಮಾಡಿದ್ದಾರೆ. ಉಳಿದ ಖರೀದಿದಾರರು ಡೀಸೆಲ್ ಚಾಲಿತ ಮಾಡೆಲ್‌ಗಳನ್ನು ತಮ್ಮ ಆಯ್ಕೆಯ ಕಾರಾಗಿ ಆಯ್ದುಕೊಂಡಿದ್ದಾರೆ.

Kia Syros Petrol Suv Get Huge Number Of Bookings Details

ಈಗಾಗಲೇ, ಜನವರಿ 17 ರಿಂದಲೇ ಹೊಸ ಕಿಯಾ ಸೈರಸ್ ಎಸ್‌ಯುವಿಗಳ ಉತ್ಪಾದನೆ ಶುರುವಾಗಿದ್ದು, ಫೆಬ್ರವರಿ 1 ರಂದು ಬೆಲೆ ಘೋಷಣೆ ಮಾಡಲಾಗುತ್ತದೆ. ಅಂದೇ ದೇಶೀಯವಾಗಿ ಮಾರುಕಟ್ಟೆಯಲ್ಲಿಯೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರು, ರೂ.9 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

ಹೊಸ ಕಾರು ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್ & ಹೆಚ್‌ಟಿಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಾಟ್ ಟೈಲ್‌ಗೇಟ್, ಅಲಾಯ್ ವೀಲ್‌ಗಳು (17-ಇಂಚು) ಮತ್ತು ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ.

Kia Syros Petrol Suv Get Huge Number Of Bookings Details

ನೂತನ ಕಿಯಾ ಸೈರಸ್ ಎಸ್‌ಯುವಿ, 2 ಪವರ್‌ಟ್ರೇನ್‌ನೊಂದಿಗೆ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 6-ಸ್ಪೀಡ್ ಎಂಟಿ (ಮ್ಯಾನುವಲ್), 6-ಸ್ಪೀಡ್ ಎಟಿ (ಆಟೋಮೆಟಿಕ್) ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಆದರೆ, ಈ ಕಾರಿನ ಮೈಲೇಜ್ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ವಿವರಗಳನ್ನು ಬಹಿರಂಗಪಡಿಸಿಲ್ಲ.

ಈ ಕಿಯಾ ಸೈರಸ್ ಕಾರು 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್, ಡುಯಲ್ ಜೋನ್ ಎಸಿ, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ & ರೇರ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೊರೊಮಿಕ್ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Kia Syros Petrol Suv Get Huge Number Of Bookings Details

ಈ ಕಿಯಾ ಸೈರಸ್ ಎಸ್‌ಯುವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ನೂತನ ಕಾರಿಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಹಾಗೂ ಹ್ಯುಂಡೈ ಕ್ರೆಟಾ ಎಸ್‌ಯುವಿಗಳು ಪ್ರಬಲವಾದ ಎದುರಾಳಿಯಾಗಿವೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, January 21, 2025, 14:54 [IST]
English summary
Kia syros petrol suv get huge number of bookings details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+