ಟಾಟಾ & ಮಾರುತಿ ಅಲ್ಲ.. ಬಜಾರ್‌ನಲ್ಲಿ ಅಗ್ಗದ ಹೊಸ ಕಿಯಾ ಎಸ್‌ಯುವಿಗೆ ಫುಲ್ ಡಿಮ್ಯಾಂಡ್, 15,000 ಯುನಿಟ್ ಸೇಲ್!

ದಕ್ಷಿಣ ಕೊರಿಯಾ ಮೂಲದ ಕಿಯಾ ಮೋಟಾರ್ಸ್ (Kia Motors), 2019ರಲ್ಲಿ ದೇಶೀಯ ಕಾರು ಮಾರುಕಟ್ಟೆಯನ್ನು ಪ್ರವೇಶಿಸಿತ್ತು. ಸದ್ಯ, ನಿಧಾನಗತಿಯಲ್ಲಿ ಯಶಸ್ಸನ್ನು ಗಳಿಸುತ್ತಿದೆ. 2024-25ನೇ ಹಣಕಾಸು ವರ್ಷದಲ್ಲಿ ಕಿಯಾ ಇಂಡಿಯಾ ಬರೊಬ್ಬರಿ 2,55,207 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ. 2023-24ನೇ ಹಣಕಾಸು ವರ್ಷದಲ್ಲಿ 2,45,634 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 4% ಪ್ರಗತಿ ಸಾಧಿಸಲಾಗಿದೆ.

ಕಿಯಾ ಕಂಪನಿ ದೇಶೀಯವಾಗಿಯೂ ಉತ್ತಮ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸಿದೆ. ಕಳೆದ ತಿಂಗಳು (ಮಾರ್ಚ್-2025) ಸರಿ ಸುಮಾರು 25,525 ಯುನಿಟ್‌ ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 21,400 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 19.3% ಬೆಳವಣಿಯಾಗಿದೆ.

Kia Syros Suv 15 000 Units Sales Details

ಭಾರತದಲ್ಲಿ ಕಿಯಾ ಕಂಪನಿಯು ಈ ಪರಿಪ್ರಮಾಣದಲ್ಲಿ ಯಶಸ್ಸು ಕಾಣಲು ಸೋನೆಟ್, ಸೆಲ್ಟೋಸ್ ಹಾಗೂ ಕ್ಯಾರೆನ್ಸ್ ಕಾರುಗಳು ಪ್ರಮುಖವಾದ ಕಾರಣವಾಗಿವೆ. ಇವುಗಳೊಂದಿಗೆ ಹೊಸ ಸೇರ್ಪಡೆಯಾಗಿ ಸೈರಸ್ (Syros) ಎಸ್‌ಯುವಿ ಕೂಡ ಸೇರಿದೆ. ಪ್ರಸ್ತುತ ಈ ಕಾರಿನ ಮಾರಾಟದಲ್ಲಿ ಹೊಸದೊಂದು ದಾಖಲೆ ಸೃಷ್ಟಿಯಾಗಿದ್ದು, ಬಿಡುಗಡೆಯಾದಾಗಿನಿಂದ ಈವರೆಗೆ 15,986 ಯುನಿಟ್ ಸೈರಸ್ ಎಸ್‌ಯುವಿಗಳನ್ನು ಮಾರಾಟ ಮಾಡಲಾಗಿದೆ. ಕೇವಲ 2 ತಿಂಗಳಲ್ಲಿ ಇದು ಸಾಧ್ಯವಾಗಿದೆ.

ಕಿಯಾ ಸೈರಸ್ (Kia Syros) ಎಸ್‌ಯುವಿ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.8.99 ಲಕ್ಷ ಹಾಗೂ ಗರಿಷ್ಠ ರೂ.17.80 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಸಿಗುತ್ತದೆ. ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಅಲಾಯ್ ವೀಲ್‌ಗಳು ಮತ್ತು ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳನ್ನು ಒಳಗೊಂಡಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Kia Syros Suv 15 000 Units Sales Details

ಈ ಕಾರು 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಕಿಯಾ ಸೈರಸ್ ಎಸ್‌ಯುವಿ ವಿಶಾಲವಾಗಿರುವ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗದುಕೊಂಡು ಹೋಗಲು 390 ರಿಂದ 465 ಲೀಟರ್ ಸಾಮರ್ಥ್ಯದ ಬೂಟ್ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.

Kia Syros Suv 15 000 Units Sales Details

ಈ ಕಾರು ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಪನೊರೊಮಿಕ್ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಇನ್ನು, ಹೊಸ ಕಿಯಾ ಸೈರಸ್ ಎಸ್‌ಯುವಿ ಹೆಚ್ಚು ಆಕರ್ಷಕವಾಗಿರುವುದರೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಕಾರಿಗೆ ಸ್ಕೋಡಾ ಕೈಲಾಕ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್ ಹಾಗೂ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, April 3, 2025, 10:46 [IST]
English summary
Kia syros suv 15000 units sales details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+