20 Km ಮೈಲೇಜ್.. ಜನಪ್ರಿಯ Kia Syros ಬೆಲೆ ರೂ.1.86 ಲಕ್ಷ ಇಳಿಕೆ.. ಹೊಸ ಆನ್-ರೋಡ್ ದರವೆಷ್ಟು, EMI ಇಷ್ಟೇನಾ?

ಕಿಯಾ ಸೈರಸ್ (Kia Syros) ಜನಪ್ರಿಯ ಎಸ್‌ಯುವಿಯಾಗಿದೆ. ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಯಾಗಿವೆ. ಈ ಕಾರಿನ ದರವು ರೂ.1.86 ಲಕ್ಷ ಇಳಿಕೆಯಾಗಿದೆ. ಕನಿಷ್ಠ ರೂ.8.67 ಲಕ್ಷ ಹಾಗೂ ಗರಿಷ್ಠ ರೂ.15.94 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಸೈರಸ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಇದೇ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ನೂತನ 'ಕಿಯಾ ಸೈರಸ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ಹೆಚ್‌ಟಿಕೆ ಟರ್ಬೋ (ಪೆಟ್ರೋಲ್) ರೂಪಾಂತರ, ರೂ.10.26 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.7.25 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.15,000 ವರೆಗೆ ಇಎಂಐ ಕಟ್ಟಬೇಕು.

Kia Syros Suv New On Road Price And Emi Details

ಇನ್ನೊಂದು ಹೆಚ್‌ಟಿಕೆ (ಡೀಸೆಲ್) ರೂಪಾಂತರ, ರೂ.12.46 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.9.46 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.19,000 ವರೆಗೆ ಇಎಂಐ ಪಾವತಿ ಮಾಡಬೇಕು.

ಮತ್ತೊಂದು ಹೆಚ್‌ಟಿಕೆ ಪ್ಲಸ್ (ಡೀಸೆಲ್) ರೂಪಾಂತರ, ರೂ.14.06 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.11.06 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.22,000 ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ ಹೆಚ್‌ಟಿಎಕ್ಸ್ ಟರ್ಬೋ (ಪೆಟ್ರೋಲ್) ರೂಪಾಂತರ, ರೂ.14.78 ಲಕ್ಷವರೆಗೆ ಆನ್-ರೋಡ್ ಬೆಲೆಯನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.11.78 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.24,000 ವರೆಗೆ ಇಎಂಐ ಪಾವತಿಸಬೇಕು.

ಕಿಯಾ ಸೈರಸ್ ವಿಶೇಷತೆಗಳೇನು:

ಈ ಕಾರು ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು, ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಗ್ಲೇಸಿಯರ್ ವೈಟ್ ಪರ್ಲ್, ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಅರೋರಾ ಬ್ಲ್ಯಾಕ್ ಪರ್ಲ್, ಪ್ಯೂಟರ್ ಆಲಿವ್ ಹಾಗೂ ಫ್ರಾಸ್ಟ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಕಿಯಾ ಸೈರಸ್ 3,995 ಎಂಎಂ ಉದ್ದ, 1,805 ಎಂಎಂ ಅಗಲ ಮತ್ತು 1,680 ಎಂಎಂ ಎತ್ತರವಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,550 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 1,350 ಕೆಜಿ ತೂಕವಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 465 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಇದು 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20.75 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8 ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Wednesday, October 1, 2025, 13:33 [IST]
English summary
Kia syros suv new on road price and emi details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+