ಭಾರತದಲ್ಲಿ ತಯಾರಾಗುವ ಮಾರುತಿ ಕಾರಿದು.. ವಿದೇಶದಲ್ಲಿ ಮುಗ್ಗರಿಸಿತು.. ಬರೀ 1-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಭಾರತದಲ್ಲಿ ತಯಾರಾಗುವ ಇದೇ ಕಾರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ 'ಸುಜುಕಿ ಬಲೆನೊ' ಹೆಸರಿನಲ್ಲಿ ಯಶಸ್ವಿಯಾಗಿ ಮಾರಾಟಗೊಳಿಸಲಾಗುತ್ತದೆ. ಗುರುವಾರ, ಲ್ಯಾಟಿನ್ ಅಮೆರಿಕದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ 'ಲ್ಯಾಟಿನ್ ಎನ್‌ಸಿಎಪಿ' ಬಲೆನೊಗೆ ಸೇಫ್ಟಿ ರೇಟಿಂಗ್‌ನ್ನು ಪ್ರಕಟಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಲ್ಯಾಟಿನ್ ಎನ್‌ಸಿಎಪಿಯು 'ಸುಜುಕಿ ಬಲೆನೊ' ಕಾರನ್ನು ವಿವಿಧ ಮಾನದಂಡಗಳ ಅನ್ವಯ ಪರೀಕ್ಷಿಸಿದೆ. 2 ಏರ್‌ಬ್ಯಾಗ್‌ಗಳನ್ನು ಹೊಂದಿರುವ ಮಾಡೆಲ್, ವಯಸ್ಕರ ರಕ್ಷಣೆ ವಿಭಾಗದಲ್ಲಿ ಶೇಕಡ 100ಕ್ಕೆ 42% ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 65% ಅಂಕಗಳನ್ನು ಪಡೆದಿದೆ. ಈ ಮೂಲಕ 1-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ.

ಅದೇ ರೀತಿಯಲ್ಲಿ 'ಸುಜುಕಿ ಬಲೆನೊ'ದ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿರುವ ಮಾಡೆಲ್, ವಯಸ್ಕರ ರಕ್ಷಣೆ ವಿಭಾಗದಲ್ಲಿ ಶೇಕಡ 100ಕ್ಕೆ 79% ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 65% ಅಂಕಗಳನ್ನು ಹೊಂದಿದೆ. ಇದರೊಂದಿಗೆ 2-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಸಫಲವಾಗಿದೆ.
ಭಾರತದಲ್ಲಿ ಬಲೆನೊಗೆ 4-ಸ್ಟಾರ್ ಸೇಫ್ಟಿ ರೇಟಿಂಗ್:
ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ 'ಭಾರತ್ ಎನ್‌ಸಿಎಪಿ' ಮಾರುತಿ ಸುಜುಕಿ ಬಲೆನೊಗೆ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 26.52ಕ್ಕೆ ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 34.81 ಅಂಕಗಳನ್ನು ಪಡೆದಿದೆ.

ಈ ಕಾರಿನಲ್ಲಿರುವ ಸುರಕ್ಷಿತ ವೈಶಿಷ್ಟ್ಯಗಳೇನು:
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಭಾರತದಲ್ಲಿ ಲಭ್ಯವಿರುವ ಬಲೆನೊದ ಎಲ್ಲ ಮಾಡೆಲ್‌ಗಳು, ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3 ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿವೆ.
ದೇಶೀಯವಾಗಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಬಲೆನೊ ವಿಶೇಷತೆಗಳೇನು:
ಹೊಸ 'ಬಲೆನೊ' ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ.

ಈ ಕಾರು ಹೆಚ್ಚು ವಿಶಾಲವಾಗಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಲಕ್ಸ್ ಬೀಜ್, ಒಪುಲೆಂಟ್ ರೆಡ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಎಂಬ ಆಕರ್ಷಕವಾದ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್ & 5-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್) ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಬಲೆನೊ' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ರೇರ್-ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪವರ್ ಸ್ಟೀರಿಂಗ್ ಹಾಗೂ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








