ಭಾರತದ ನಿರ್ಮಿತ Suzuki e Vitaraಗೆ 4-ಸ್ಟಾರ್ ಸೇಫ್ಟಿ ರೇಟಿಂಗ್ ಘೋಷಣೆ.. ಎಲ್ಲಿ?
ಮಾರುತಿ ಸುಜುಕಿ (Maruti Suzuki) ಕಂಪನಿಯು ಸ್ವದೇಶಿ ನಿರ್ಮಿತ 'ಇ-ವಿಟಾರಾ'ವನ್ನು ಯೂರೋಪ್ ಮಾರುಕಟ್ಟೆಯಲ್ಲಿ ಸುಜುಕಿ ಇ-ವಿಟಾರಾ (Suzuki e Vitara) ಹೆಸರಿನಲ್ಲಿ ಬಿಡುಗಡೆಗೊಳಿಸಲು ಹಣಿಯಾಗಿದೆ. ರಫ್ತು ಕೂಡ ಪ್ರಾರಂಭವಾಗಿದೆ. ಗುಜರಾತ್ ರಾಜ್ಯದ ಹಂಸಲ್‌ಪುರದಲ್ಲಿರುವ ಕಂಪನಿಯ ಉತ್ಪಾದನಾ ಘಟಕದಿಂದ 2,900ಕ್ಕೂ ಅಧಿಕ ಕಾರುಗಳನ್ನು ರವಾನಿಸಲಾಗಿದೆ. ಇಂಗ್ಲೆಂಡ್, ಜರ್ಮನಿ, ನಾರ್ವೆ, ಫ್ರಾನ್ಸ್, ಡೆನ್ಮಾರ್ಕ್, ಸ್ವಿಟ್ಜರ್‌ಲ್ಯಾಂಡ್ ಹಾಗೂ ನೆದರ್‌ಲ್ಯಾಂಡ್‌ನ ಗ್ರಾಹಕರಿಗೆ ಖರೀದಿಗೂ ಲಭ್ಯವಾಗಲಿದೆ.
ಯೂರೋಪ್‌ನಲ್ಲಿ ಮಾರಾಟವಾಗುವ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಯುರೋ ಎನ್‌ಸಿಎಪಿ (Euro NCAP) ನೂತನ 'ಸುಜುಕಿ ಇ-ವಿಟಾರಾ'ವನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ವಿವಿಧ ಹಂತಗಳಲ್ಲಿ ನಾನಾ ಪರೀಕ್ಷೆಗಳನ್ನು ನಡೆಸಿ, 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಘೋಷಣೆ ಮಾಡಿದೆ.

ಸುಜುಕಿ ಇ-ವಿಟಾರಾದ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಜಿಎಲ್ಎಕ್ಸ್ ಲೆಫ್ಟ್-ಹ್ಯಾಂಡ್ ಡ್ರೈವ್ ಮಾಡೆಲ್‌ನ್ನು ಯುರೋ ಎನ್‌ಸಿಎಪಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಕಾರು ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 40ಕ್ಕೆ 31 ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 42 ಅಂಕಗಳನ್ನು ಗಳಿಸಿದೆ.
ಹೊಸ ಸುಜುಕಿ ಇ-ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ನೂತನ ಇ-ವಿಟಾರಾ ವಿನ್ಯಾಸವು ತುಂಬಾ ಚೆನ್ನಾಗಿದೆ. ಅದು ನೋಡುಗರನ್ನು ಸೆಳೆಯುತ್ತದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಈ ಕಾರು 1,700 ಕೆಜಿ ತೂಕವಿದೆ.
ಹೊಸ ಇ-ವಿಟಾರಾ ಕ್ಯಾಬಿನ್ ವಿನ್ಯಾಸವನ್ನು ಸಹ ಅತ್ಯುತ್ತಮವಾಗಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಆಟೋ ಎಸಿ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಇದು ದೊಡ್ಡ ಗಾತ್ರದಲ್ಲಿದೆ. 4,275 ಎಂಎಂ ಉದ್ದ, 4,275 ಎಂಎಂ ಅಗಲ ಹಾಗೂ 1,800 ಎಂಎಂ ಎತ್ತರವು ಇದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆವನ್ನು ಹೊಂದಿದೆ. 398 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿರಲಿದೆ ಎಂಬ ವಿವರಗಳು ಲಭ್ಯವಾಗಿವೆ.
ಸದ್ಯ ಭಾರತವು ಸೇರಿದಂತೆ ಯೂರೋಪ್ ಮಾರುಕಟ್ಟೆಯಲ್ಲಿ ಈ ಕಾರು ಬಿಡುಗಡೆಗೊಂಡಿಲ್ಲ. ಹೀಗಾಗಿ, ಪವರ್‌ಟ್ರೇನ್ ಕುರಿತಂತೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹದು ಎಂದು ಅಂದಾಜಿಸಲಾಗಿದೆ.
ಭಾರತದಲ್ಲೂ ಮಾರಾಟಕ್ಕೆ ಬರಲಿದೆ:
ಎಲ್ಲವು ಅಂದುಕೊಂಡಂತೆ ನಡೆದರೆ, ದೇಶೀಯವಾಗಿ ಡಿಸೆಂಬರ್ ತಿಂಗಳಲ್ಲಿ 'ಸುಜುಕಿ ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಯು 'ಮಾರುತಿ ಸುಜುಕಿ ಇ-ವಿಟಾರಾ' ರೂಪದಲ್ಲಿ ಬಿಡುಗಡೆಯಾಗಲಿದೆ. ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ 3 ರೂಪಾಂತರಗಳೊಂದಿಗೂ ಸಿಗುತ್ತದೆ. ಈ ಕಾರಿಗೆ ಟಾಟಾ ಹ್ಯಾರಿಯರ್ ಇವಿ, ಟಾಟಾ ಕರ್ವ್ ಇವಿ ಮತ್ತು ಎಂಜಿ ವಿಂಡ್ಸರ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications








