ಭಾರತದಲ್ಲಿ ತಯಾರಿಸಿದ ಈ ಮಾರುತಿ ಕಾರಿಗೆ ಸ್ವಂತ ದೇಶದಲ್ಲಿ 4-ಸ್ಟಾರ್ ಸೇಫ್ಟಿ ರೇಟಿಂಗ್.. ಯಾವುದು?

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಭಾರತದಲ್ಲಿ ತಯಾರಿಸಿದ ಇದೇ ಎಸ್‌ಯುವಿಯನ್ನು 'ಮಾರುತಿ ಸುಜುಕಿ' ಮಾತೃ ಸಂಸ್ಥೆ ಸುಜುಕಿ ಮೋಟಾರ್ ಕಾರ್ಪೊರೇಷನ್ (Suzuki Motor Corporation), ಜಪಾನ್ ಮಾರುಕಟ್ಟೆಯಲ್ಲಿಯೂ ಮಾರಾಟಗೊಳಿಸುತ್ತಿದೆ. ಅಲ್ಲಿಯೂ ಈ ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, 'ಸುಜುಕಿ ಫ್ರಾಂಕ್ಸ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಜಪಾನ್ ಎನ್‌ಸಿಎಪಿ (Japan NCAP), ಸುಜುಕಿ ಫ್ರಾಂಕ್ಸ್ (Suzuki Fronx) ಎಸ್‌ಯುವಿಯನ್ನು ವಿವಿಧ ಸುರಕ್ಷಿತ ಮಾನದಂಡಗಳ ಅನ್ವಯ ಪರೀಕ್ಷೆಗೆ ಒಳಪಡಿಸಿದೆ. ಈ ಮೂಲಕ ಈ ಕಾರಿಗೆ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ಸುಜುಕಿ ಫ್ರಾಂಕ್ಸ್ ಒಟ್ಟು 193.8 ಅಂಕಗಳಿಗೆ 163.75 ಅಂಕಗಳನ್ನು ಗಳಿಸಿದೆ.

Made in india Suzuki Fronx 4 Star Safety Rating In Japan NCAP Details

ನೂತನ 'ಸುಜುಕಿ ಫ್ರಾಂಕ್ಸ್' ಕೂಡ ಭಾರತದಲ್ಲಿ ಖರೀದಿಗೆ ದೊರೆಯುವ ಮಾಡೆಲ್‌ನಂತೆ ಎಲ್ಲ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಹೆಚ್ಚುವರಿಯಾಗಿ ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಸಹ ಒಳಗೊಂಡಿದೆ.

ಭಾರತದಲ್ಲಿ ಲಭ್ಯವಿರುವ 'ಮಾರುತಿ ಸುಜುಕಿ ಫ್ರಾಂಕ್ಸ್' ವಿಶೇಷತೆಗಳೇನು..

ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.7.54 ಲಕ್ಷದಿಂದ ರೂ.13.03 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

Made in india Suzuki Fronx 4 Star Safety Rating In Japan NCAP Details

ಈ ಮಾರುತಿ ಫ್ರಾಂಕ್ಸ್ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಜೊತೆಗೆ ಯಾವ ಸಾಮಾನ್ಯ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ ಸರಿ ಸುಮಾರು 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್‌ ಕೊಡುತ್ತದೆ.

ನೂತನ 'ಫ್ರಾಂಕ್ಸ್' ಎಸ್‌ಯುವಿ ಸಿಗ್ಮಾ, ಡೆಲ್ಟಾ ಮತ್ತು ಜಿಟಾ ಸೇರಿದಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ. ಜೊತೆಗೆ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್ ಹಾಗೂ ಗ್ರ್ಯಾಂಡ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

Take a Poll

ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್ ಮತ್ತು ಟೈಪ್ ಸಿ ಚಾರ್ಜ‌ರ್‌ನ್ನು ಹೊಂದಿದೆ. ಇದೇ ಮಾರುತಿ ಫ್ರಾಂಕ್ಸ್ ಎಸ್‌ಯುವಿಗೆ ಟಾಟಾ ಪಂಚ್, ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಮತ್ತು ಕಿಯಾ ಸೋನೆಟ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 14, 2025, 18:51 [IST]
English summary
Made in india suzuki fronx 4 star safety rating in japan ncap details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+