ಭಾರತದಲ್ಲಿ ಬೆಸ್ಟ್ ಕಾರಿದು.. ವಿದೇಶದಲ್ಲಿ ಕಳಪೆ ಪ್ರದರ್ಶನ, ಬರೀ 1-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಭಾರತದಲ್ಲಿ ತಯಾರಾಗುವ ಈ ಕಾರನ್ನು ಜಾಗತಿಕವಾಗಿ 'ಸುಜುಕಿ ಫ್ರಾಂಕ್ಸ್' ಹೆಸರಿನಲ್ಲಿ ಯಶಸ್ವಿಯಾಗಿ ಮಾರಾಟಗೊಳಿಸಲಾಗುತ್ತದೆ. ಸೋಮವಾರ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ನ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ 'ಆಸ್ಟ್ರೇಲಿಯಾ ಎನ್‌ಸಿಎಪಿ' ಇದೇ ಫ್ರಾಂಕ್ಸ್ ಕಾರಿಗಾಗಿ ಸೇಫ್ಟಿ ರೇಟಿಂಗ್‌ನ್ನು ಪ್ರಕಟಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

'ಆಸ್ಟ್ರೇಲಿಯಾ ಎನ್‌ಸಿಎಪಿ' ನೂತನ 'ಸುಜುಕಿ ಫ್ರಾಂಕ್ಸ್'ನ್ನು ವಿವಿಧ ಕಠಿಣ ಮಾನದಂಡಗಳ ಅನ್ವಯ ಪರೀಕ್ಷಿಸಿದೆ. ಈ ಎಸ್‌ಯುವಿಯು ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) ಶೇಕಡ 100ಕ್ಕೆ 48% ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 40% ಅಂಕಗಳನ್ನು ಗಳಿಸಿದೆ. ಈ ಮೂಲಕ 1-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ.

Made In India Suzuki Fronx Achieve 1-star safety rating in ANCAP Crash Test Details

ಹೊಚ್ಚ ಹೊಸ 'ಸುಜುಕಿ ಫ್ರಾಂಕ್ಸ್'ನ್ನು ಇದೇ ವರ್ಷದ ಜೂನ್‌ನಲ್ಲಿ ನ್ಯೂಜಿಲೆಂಡ್‌ ಹಾಗೂ ಆಗಸ್ಟ್‌ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ಮಾರಾಟಕ್ಕೆ ತರಲಾಯಿತು. ಕೆಲವೇ ತಿಂಗಳಲ್ಲಿ ಅಲ್ಲಿನ ಜನರು ಈ ಕಾರಿಗೆ ಮನಸೊತ್ತಿದ್ದಾರೆ. ಈವರೆಗೆ ಒಟ್ಟು 2,300 ಯುನಿಟ್ ಫ್ರಾಂಕ್ಸ್ ಕಾರುಗಳನ್ನು ಕಂಪನಿಯು ಯಶಸ್ವಿಯಾಗಿ ಮಾರಾಟಗೊಳಿಸಿದೆ.

ಈ ಕಾರಿನಲ್ಲಿರುವ ಸುರಕ್ಷತಾ ವೈಶಿಷ್ಟ್ಯಗಳೇನು:

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

Made In India Suzuki Fronx Achieve 1-star safety rating in ANCAP Crash Test Details

ಭಾರತದಲ್ಲಿ ಸಿಗುವ 'ಮಾರುತಿ ಸುಜುಕಿ ಫ್ರಾಂಕ್ಸ್' ವಿಶೇಷತೆಗಳೇನು:

ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಅರ್ಥನ್ ಬ್ರೌನ್ ಹಾಗೂ ಆಫ್ಯುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಫ್ರಾಂಕ್ಸ್' ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ತನ್ನದಾಸಿಕೊಂಡಿದೆ. 1-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್ ಅಪ್ ಡಿಸ್‌ಪ್ಲೇ, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಮತ್ತು ಕ್ರೂಸ್ ಕಂಟ್ರೋಲ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಬಹುಮುಖ್ಯವಾಗಿ, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ 'ಮಾರುತಿ ಸುಜುಕಿ ಫ್ರಾಂಕ್ಸ್'ನ್ನು ಕಂಪನಿಯು ತಯಾರಿಕಾ ಮಾನದಂಡಗಳ ಪ್ರಕಾರವೇ ಸಿದ್ಧಪಡಿಸಿದೆ. ಈವರೆಗೆ ಗ್ಲೋಬಲ್ ಎನ್‌ಸಿಎಪಿ ಅಥವಾ ಭಾರತ್ ಎನ್‌ಸಿಎಪಿ ಪರೀಕ್ಷೆಗೆ ಒಳಪಡಿಸಲ್ಲ. ಒಂದೊಮ್ಮೆ ಇಲ್ಲಿ ಟೆಸ್ಟ್ ಮಾಡಿದರೆ, ಗರಿಷ್ಠ ರೇಟಿಂಗ್ ಪಡೆಯುವ ನಿರೀಕ್ಷೆಯಿದೆ.

More from DriveSpark

Article Published On: Tuesday, December 23, 2025, 13:14 [IST]
English summary
Made in india suzuki fronx achieve 1 star safety rating in ancap crash test details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+