Mumbai: ಮುಂಬೈನಲ್ಲಿ ಪೆಟ್ರೋಲ್ & ಡೀಸೆಲ್ ವಾಹನಗಳು ಬ್ಯಾನ್ ಆಗುತ್ತಾ?

ದೇಶದ ವಾಣಿಜ್ಯ ರಾಜಧಾನಿ ಎಂದೇ ಹೆಸರುವಾಸಿಯಾಗಿರುವ ಮುಂಬೈನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಪ್ರಯಾಣ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ (Maharashtra Government) ದಿಟ್ಟ ಹೆಜ್ಜೆ ಇಟ್ಟಿದೆ. ಮುಂಬೈ ಮಹಾನಗರ (Mumbai Metropolitan) ಪದೇಶದ ವ್ಯಾಪ್ತಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬಳಕೆಯನ್ನು ನಿಷೇಧಿಸಿ, ಪರಿಸರ ಸ್ನೇಹಿ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡುವ ಸಂಬಂಧ ಅಧ್ಯಯನ ನಡೆಸಲು 7 ಜನ ಸದಸ್ಯರ ಸಮಿತಿಯನ್ನು ರಚಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಶ್ರೀವಾಸ್ತವ ನೇತೃತ್ವದ ಈ ಸಮಿತಿಗೆ ವಿವಿಧ ಮಜಲುಗಳಲ್ಲಿ ಅಧ್ಯಯನ ನಡೆಸಿ, 3 ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ. ಈ ಸಮಿತಿಯಲ್ಲಿ ಮಹಾರಾಷ್ಟ್ರ ಸಾರಿಗೆ ಆಯುಕ್ತರು, ಮುಂಬೈ ಜಂಟಿ ಪೊಲೀಸ್ ಆಯುಕ್ತರು (ಸಂಚಾರ) ಹಾಗೂ ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ನಿಗಮದ ಯೋಜನಾ ವ್ಯವಸ್ಥಾಪಕರು ಸೇರಿ ಇತರರು ಸದಸ್ಯರಾಗಿರುತ್ತಾರೆ.

Maharashtra Government Moves To Explore Ban On Petrol And Diesel Vehicles In Mumbai Region Details

ಮಹಾರಾಷ್ಟ್ರ ಸಾರಿಗೆ ಇಲಾಖೆ ಅಧಿಕಾರಿಗಳ ಪ್ರಕಾರ, 2024ರ ಡಿಸೆಂಬರ್ ಅಂತ್ಯದವರೆಗೆ ಮುಂಬೈ ಮಹಾನಗರ ಪ್ರದೇಶದ ವ್ಯಾಪ್ತಿಗೆ ಒಳಪಡುವ 9 ಪ್ರಾದೇಶಿಕ ಸಾರಿಗೆ ಆಯುಕ್ತರ ಕಛೇರಿಗಳಲ್ಲಿ (ಆರ್‌ಟಿಒ) ಬರೋಬ್ಬರಿ 1.20 ಕೋಟಿ ವಾಹನಗಳನ್ನು ನೋಂದಣಿ ಮಾಡಲಾಗಿದೆ. ಅದರಲ್ಲಿ ಮುಂಬೈ ನಗರದಲ್ಲಿ 50 ಲಕ್ಷ, ಥಾಣೆ 57 ಲಕ್ಷ ಹಾಗೂ ರಾಯಗಢ ಜಿಲ್ಲೆಯ ವ್ಯಾಪ್ತಿಯಲ್ಲಿ 13 ಲಕ್ಷ ವಾಹನಗಳು ನೋಂದಣಿಯಾಗಿವೆ.

ಮುಂಬೈ ಮಹಾನಗರ ಪ್ರದೇಶದ ವ್ಯಾಪ್ತಿಯು 6,640 ಚದರ ಕಿಲೋಮೀಟರ್‌ವರೆಗೂ ವ್ಯಾಪಿಸಿದೆ. ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ), ಥಾಣೆ, ಕಲ್ಯಾಣ್, ಡೊಂಬಿವ್ಲಿ, ನವಿ ಮುಂಬೈ, ಉಲ್ಹಾಸ್‌ನಗರ, ಭಿವಂಡಿ ನಿಜಾಮ್‌ಪುರ, ವಸಾಯಿ ವಿರಾರ್, ಮೀರಾ ಭಯಂದರ್ ಹಾಗೂ ಪನ್ವೇಲ್ ಪ್ರದೇಶಗಳನ್ನು ಕೂಡ ಒಳಗೊಂಡಿದೆ.

Maharashtra Government Moves To Explore Ban On Petrol And Diesel Vehicles In Mumbai Region Details

ಜ.9ರಂದು ಬಾಂಬೆ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತ್ತು. ಈ ವೇಳೆ, ಮುಂಬೈನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ಹಾಗೂ ಮಾಲಿನ್ಯ ಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಇದು ಜನರ ಜೀವನ ಗುಣಮಟ್ಟ, ಪರಿಸರ ಹಾಗೂ ಸುಸ್ಥಿರತೆಯ ಮೇಲೆ ಋಣಾತ್ಮಕವಾದ ಪರಿಣಾಮ ಬೀರುತ್ತದೆ ಎಂದು ತಿಳಿಸಿತ್ತು.

ಮುಂಬೈನಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ಕಡಿಮೆಗೊಳಿಸಲು, ಸೂಕ್ತ ಕ್ರಮ ಕೈಗೊಳ್ಳುವಂತೆ ಬಾಲಿವುಡ್ ನಟಿ & ವಕೀಲೆಯಾಗಿರುವ ದಿಯಾ ಮಿರ್ಜಾ ಅವರು ಸಹ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಮನವಿ ಮಾಡಿದ್ದಾರೆ. ಜ.27ರಂದು ಈ ಬಗ್ಗೆ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದ ದಿಯಾ, ವಾಯುಮಾಲಿನ್ಯ ಸೂಚ್ಯಂಕವನ್ನು ತೋರಿಸುವ ಮುಂಬೈನ ನಕ್ಷೆಯನ್ನು ಹಂಚಿಕೊಂಡಿದ್ದರು.

ಅದಕ್ಕೆ 'ಸರ್.. ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ವಾಯುಮಾಲಿನ್ಯದ ಮಟ್ಟವು ನಮ್ಮ ಮಕ್ಕಳ ಶ್ವಾಸಕೋಶ ಹಾಗೂ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತಿದೆ. ಒಬ್ಬ ತಾಯಿಯಾಗಿ ನಾನು ನಿಮ್ಮನ್ನು ಕೋರುತ್ತಿದ್ದೇನೆ.. ದಯವಿಟ್ಟು ಈ ಸಮಸ್ಯೆಯನ್ನು ಬಗೆಹರಿಸಿ' ಎಂಬ ಶೀರ್ಷಿಕೆಯನ್ನು ಕೂಡ ದಿಯಾ ಮಿರ್ಜಾ ಅವರು ಬರೆದುಕೊಂಡಿದ್ದಾರೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, January 29, 2025, 10:31 [IST]
English summary
Maharashtra government moves to explore ban on petrol and diesel vehicles in mumbai region details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+