ಮಹೀಂದ್ರಾ ಕಂಪನಿ ತಾಕತ್ತು.. ಕಲ್ಲು ಬಂಡೆಯಂತಿರುವ ಈ ಹೊಸ ಎಲೆಕ್ಟ್ರಿಕ್ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್!

ಮಹೀಂದ್ರಾ & ಮಹೀಂದ್ರಾ (Mahindra & Mahindra) ಸುರಕ್ಷಿತ ಕಾರು ತಯಾರಿಕೆ ಹೆಸರುವಾಸಿಯಾಗಿದೆ. ಕಳೆದ 2024ರ ನವೆಂಬರ್‌ನಲ್ಲಿ ಚೆನ್ನೈನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹೊಚ್ಚ ಹೊಸ 'ಬಿಇ 6' ಹೆಸರಿನ ಎಲೆಕ್ಟ್ರಿಕ್ ಕಾರನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ನೂತನ 'ಮಹೀಂದ್ರಾ ಬಿಇ 6'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ನೂತನ ಮಹೀಂದ್ರಾ ಬಿಇ 6 (Mahindra BE 6) ಎಲೆಕ್ಟ್ರಿಕ್ ಎಸ್‌ಯುವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 31.97 ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.

Mahindra BE 6 Achieve 5 Star Safety Rating In Bharat Ncap Test Details

ಇದು ಮಾತ್ರವಲ್ಲದೆ, ಈ ಕಾರಿನ ಮುಂಭಾಗವನ್ನು ತಡೆಗೋಡೆಯೊಂದಕ್ಕೆ ಡಿಕ್ಕಿಯೊಡೆಸಿಯೂ ಪರೀಕ್ಷಿಸಲಾಯಿತು. ಅದರಲ್ಲಿ 16ಕ್ಕೆ 15.97 ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿತು. ಜೊತೆಗೆ ಕಾರಿನ ಎರಡು ಬದಿಗಳನ್ನು ಕೂಡ ಗುದ್ದಿಸಲಾಯಿತು. ಆ ಪರೀಕ್ಷೆಯಲ್ಲಿಯೂ 16ಕ್ಕೆ 16 ಅಂಕಗಳನ್ನು ಗಳಿಸಿತು. ಇದರೊಂದಿಗೆ ಈ 'ಮಹೀಂದ್ರಾ ಬಿಇ' 6 ಅತ್ಯಂತ ಗಟ್ಟಿಮುಟ್ಟಾದ ಕಾರೆಂದು ಸಾಬೀತಾದಂತಾಯಿತು.

ಹೊಸ ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360 ಡಿಗ್ರಿ ಕ್ಯಾಮೆರಾದಂತಹ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Mahindra BE 6 Achieve 5 Star Safety Rating In Bharat Ncap Test Details

ಈ ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಕಾರು, ರೂ.18.90 ಲಕ್ಷದಿಂದ ರೂ.26.90 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ವಿನೂತನವಾದ ಹೆಡ್‌ಲ್ಯಾಂಪ್‌ಗಳು, 'ಜೆ' ಅಕ್ಷರದ ರೀತಿಯಲ್ಲಿರುವ ಡಿಆರ್‌ಎಲ್‌ಗಳು, 20-ಇಂಚಿನ ವೀಲ್‌ಗಳು, ಫ್ಲಶ್-ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ನೂತನ ಬಿಇ 6 ಎಲೆಕ್ಟ್ರಿಕ್ ಎಸ್‌ಯುವಿ, ಶಕ್ತಿಯುತವಾದ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದು 59 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 535 ರಿಂದ
682 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

Mahindra BE 6 Achieve 5 Star Safety Rating In Bharat Ncap Test Details

ಹೊಸ ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಕಾರು, ಯಾವುದೇ ಐಷಾರಾಮಿ ಕಾರುಗಳಿಗೆ ಕಮ್ಮಿಯಿಲ್ಲದ ರೀತಿಯಲ್ಲಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್, ಟೂ-ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ ಫಾಬ್‌ಗಳು, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು ಹಾಗೂ 16-ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 16, 2025, 15:58 [IST]
English summary
Mahindra be 6 achieve 5 star safety rating in bharat ncap test details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+