Mahindra: ಆಗಲೇ 6,500 ಕಾರುಗಳು ಉಡೀಸ್: ಸೆಲೆಬ್ರಿಟಿಗಳಿಂದ ಸಾಮಾನ್ಯರವರೆಗೆ ಮುಗಿಬಿದ್ದು ಖರೀದಿ!

ಮಹೀಂದ್ರಾದ ಇತ್ತೀಚಿನ ಹೊಸ ಎಲೆಕ್ಟ್ರಿಕ್ ಎಸ್‌ಯುವಿಗಳಾದ ಎಕ್ಸ್‌ಇವಿ 9ಇ (Mahindra XEV 9e) ಮತ್ತು ಬಿಇ 6 (Mahindra BE 6) ಮಾರಾಟದಲ್ಲಿ ಧೂಳೆಬ್ಬಿಸುತ್ತಿವೆ. ಭಾರತೀಯ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಹೊಸ ಅಲೆ ಎಬ್ಬಿಸಿವೆ. ಕಡಿಮೆ ಬೆಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಎಲೆಕ್ಟ್ರಿಕ್ ಕಾರುಗಳನ್ನು ನೀಡುತ್ತಿದ್ದು, ದಾಖಲೆಯ ಡೆಲಿವರಿಗಳನ್ನು ಇದುವರೆಗೆ ನೀಡಿರುವುದಾಗಿ ಮಹೀಂದ್ರಾ ತಿಳಿಸಿದೆ. ಈ ಕಾರುಗಳು ಕಳೆದ ನವೆಂಬರ್ 2024 ರಲ್ಲಿ ಬಿಡುಗಡೆಯಾಗಿದ್ದು, ಮಾರ್ಚ್ 2025ರ ವೇಳೆಗೆ 6,500 ಕ್ಕೂ ಹೆಚ್ಚು ಯುನಿಟ್ ಎಸ್‌ಯುವಿಗಳನ್ನು ಡೆಲಿವರಿ ನೀಡಿ ದಾಖಲೆ ನಿರ್ಮಿಸಿದೆ.

ವಿಶೇಷವೆಂದರೆ, ಟಾಪ್-ಸ್ಪೆಕ್ ಪ್ಯಾಕ್ ತ್ರೀ ಆವೃತ್ತಿಯನ್ನು ಮಾತ್ರ ಇಲ್ಲಿಯವರೆಗೆ ಡೆಲಿವರಿ ನೀಡಲಾಗಿದೆ. ಎಸ್‌ಯುವಿಗಳ ಇತರ ಎರಡು ವೇರಿಯೆಂಟ್‌ಗಳು ಜೂನ್ 2025 ರ ವೇಳೆಗೆ ಡೆಲಿವರಿ ನೀಡಲಾಗುವುದು. ಟ್ರೆಂಡ್‌ಗಳ ಪ್ರಕಾರ, ಸಣ್ಣ ಬಿಇ 6 ಗೆ ಹೋಲಿಸಿದರೆ ಎಕ್ಸ್‌ಇವಿ 9 ಇ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಈ ಎರಡೂ ಕಾರುಗಳನ್ನು ಈಗ ಬುಕ್ ಮಾಡಿದರೆ ಡೆಲಿವರಿಗಾಗಿ 6 ತಿಂಗಳವರೆಗೆ ಕಾಯುವ ಅವಧಿಯನ್ನು ಹೊಂದಿವೆ.

mahindra-be-6-and-xev-9e-6500-cars-delivered-till-now

ಮಹೀಂದ್ರಾ ಬಿಇ 6 ವಿಶೇಷತೆಗಳು: ಎಲೆಕ್ಟ್ರಿಕ್ ಕಾರು, ರೂ.18.90 ಲಕ್ಷದಿಂದ ರೂ.26.90 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದ್ದು, ಒಂದು 59 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು ಇನ್ನೊಂದು 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಫುಲ್‌ ಚಾರ್ಜ್‌ನಲ್ಲಿ 535 ರಿಂದ 682 ಕಿ.ಮೀವರೆಗೆ ರೇಂಜ್ ನೀಡುತ್ತದೆ.

ಹೊಸ ಮಹೀಂದ್ರಾ ಬಿಇ 6 ಕಾರು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಸ್ಕ್ರೀನ್, ವೈರ್‌ಲೆಸ್ ಚಾರ್ಜರ್‌ಗಳು ಹಾಗೂ 16-ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ಟೂ-ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಸೀಟ್‌ಗಳಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾಗಳನ್ನು ಪಡೆದಿದೆ.

mahindra-be-6-and-xev-9e-6500-cars-delivered-till-now

ಮಹೀಂದ್ರಾ ಎಕ್ಸ್ಇವಿ 9ಇ ವಿಶೇಷತೆಗಳು: ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e) ಎಲೆಕ್ಟ್ರಿಕ್ ಎಸ್‌ಯುವಿ, ರೂ.21.90 ಲಕ್ಷದಿಂದ ರೂ.30.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಈ 'ಎಕ್ಸ್ಇವಿ 9ಇ' ಎಲೆಕ್ಟ್ರಿಕ್ ಕಾರು, 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 656 ಕಿಲೋಮೀಟರ್‌ವರೆಗೆ ರೇಂಜ್ ನೀಡುತ್ತದೆ.

ಹೊಸ ಎಕ್ಸ್ಇವಿ 9ಇ ಎಲೆಕ್ಟ್ರಿಕ್ ಎಸ್‌ಯುವಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಪ್ಯಾಸೆಂಜರ್-ಸೈಡ್ ಡಿಸ್‌ಪ್ಲೇಗಾಗಿ 12.3-ಇಂಚಿನ ಸ್ಕ್ರೀನ್ ಆಯ್ಕೆಯನ್ನು ಹೊಂದಿದೆ. ವೈರ್‌ಲೆಸ್ ಚಾರ್ಜರ್ ಸೇರಿದಂತೆ ಮಲ್ಟಿ-ಝೋನ್ ಆಟೋ ಎಸಿ, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

mahindra-be-6-and-xev-9e-6500-cars-delivered-till-now

ಸುರಕ್ಷತೆಗಾಗಿ EBD, ಟ್ರಾಕ್ಷನ್ ಕಂಟ್ರೋಲ್ ಮತ್ತು ISOFIX ಚೈಲ್ಡ್ ಸೀಟ್ ಮೌಂಟಿಂಗ್ ಪಾಯಿಂಟ್‌ಗಳೊಂದಿಗೆ ABS ಅನ್ನು ಪ್ರಮಾಣಿತವಾಗಿ ನೀಡಲಾಗಿದೆ. ಹೆಚ್ಚುವರಿ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, EPB, 360-ಡಿಗ್ರಿ ಕ್ಯಾಮೆರಾ ಮತ್ತು ಏಳು ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ. ಈ ಎರಡೂ ಕಾರುಗಳು ಉತ್ತಮ ನಿರ್ಮಾಣ ಗುಣಮಟ್ಟವನ್ನು ಹೊಂದಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, May 6, 2025, 17:22 [IST]
English summary
Mahindra be 6 and xev 9e 6500 cars delivered till now
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+