Mahindra: ಫುಲ್ ಡಿಮ್ಯಾಂಡ್.. ಮುಗಿಬಿದ್ದ ಜನ, ಕೇವಲ 135 ಸೆಕೆಂಡುಗಳಲ್ಲಿ ಎಲ್ಲ 999 ಕಾರುಗಳು ಸೋಲ್ಡ್ ಔಟ್!
ಈಚೆಗೆ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ (Mahindra BE 6 Batman Edition) ಕಾರನ್ನು ಮಾರಾಟಕ್ಕೆ ತರಲಾಗಿತ್ತು. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಸ್ಟ್ಯಾಂಡರ್ಡ್ 'ಬಿಇ 6'ಗೆ ಹೋಲಿಸಿದರೆ, ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಅದರ ಹೊರತಾಗಿ ವೈಶಿಷ್ಟ್ಯಗಳು ಹೆಚ್ಚು-ಕಮ್ಮಿ ಹಾಗೆಯೇ ಇವೆ. ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಸದ್ಯ, ಇದೇ ಕಾರಿನ ಬುಕ್ಕಿಂಗ್‌ನಲ್ಲಿ ಹೊಸದೊಂದು ಇತಿಹಾಸ ನಿರ್ಮಾಣವಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ನೂತನ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಎಸ್‌ಯುವಿಗೆ ಖರೀದಿದಾರರಿಂದ ನಿರೀಕ್ಷೆಗೂ ಮೀರಿದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಗಸ್ಟ್ 23ರಂದು ಬೆಳಗ್ಗೆ 11 ಗಂಟೆಯಿಂದ 'ಬ್ಯಾಟ್‌ಮ್ಯಾನ್ ಎಡಿಷನ್'ಗಾಗಿ ಬುಕ್ಕಿಂಗ್‌ನ್ನು ಶುರು ಮಾಡಲಾಗಿತ್ತು. ಕೇವಲ 135 ಸೆಕೆಂಡುಗಳಲ್ಲಿ ಕಂಪನಿಯು ಹೊರತರಲು ನಿರ್ಧರಿಸಿದ್ದ ಎಲ್ಲ ಕಾರುಗಳು ಸೋಲ್ಡ್ ಔಟ್ ಆಗಿವೆ.

ಈ ಮೊದಲು 'ಬ್ಯಾಟ್‌ಮ್ಯಾನ್ ಎಡಿಷನ್' ಕಾರಿಗೆ ಭಾರೀ ಬೇಡಿಕೆ ಸೃಷ್ಟಿಯಾದ ಹಿನ್ನೆಲೆ, ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲಾಗಿತ್ತು. ಒಟ್ಟು 999 ಯುನಿಟ್‌ಗಳನ್ನು ತಯಾರಿಸಲು ಕಂಪನಿಯು ತೀರ್ಮಾನಿಸಿತ್ತು. ಆರಂಭದಲ್ಲಿ ಕೇವಲ 300 ಯುನಿಟ್‌ಗಳನ್ನು ಮಾತ್ರ ಉತ್ಪಾದನೆ ಮಾಡುವುದಾಗಿ ತಿಳಿಸಿತ್ತು. ಸೆಪ್ಟೆಂಬರ್ 20 ರಂದು ವಿತರಣೆಗಳು ಪ್ರಾರಂಭವಾಗಲಿವೆ.
ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ವಿಶೇಷತೆಗಳೇನು:
ಈ ಕಾರು ದುಬಾರಿ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ರೂ.27.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಹೀಂದ್ರಾ ಹಾಗೂ ಕಾಮಿಕ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ವಾರ್ನರ್ ಬ್ರದರ್ಸ್ ಮಧ್ಯೆ ಒಪ್ಪಂದ ಏರ್ಪಟ್ಟಿದೆ. ಹಾಗಾಗಿ ನೂತನ ಎಸ್‌ಯುವಿಯ ಹೊರಭಾಗದಲ್ಲಿ ಬ್ಯಾಟ್‌ಮ್ಯಾನ್ ಸಿನಿಮಾ ಹಾಗೂ ಕಾಮಿಕ್ಸ್‌ಗಳಲ್ಲಿ ಕಂಡುಬರುವ ಅಂಶಗಳನ್ನು ಹೆಚ್ಚಾಗಿ ನೋಡಬಹುದು.

ಇದು ಕಸ್ಟಮ್ ಸ್ಯಾಟಿನ್ ಬ್ಲ್ಯಾಕ್ ಬಾಡಿ ಕಲರ್, ಫ್ರಂಟ್ ಡೋರ್‌ನಲ್ಲಿ ಕಸ್ಟಮ್ ಬ್ಯಾಟ್‌ಮ್ಯಾನ್ ಡೆಕಲ್‌ಗಳು ಹಾಗೂ ಟೈಲ್‌ಗೇಟ್‌ನಲ್ಲಿ ಡಾರ್ಕ್ ನೈಟ್ ಬ್ಯಾಡ್ಜ್‌ನ್ನು ಹೊಂದಿದೆ. ಜೊತೆಗೆ ಸ್ಟ್ಯಾಂಡರ್ಡ್ ಬಿಇ 6' ಕಾರಿನಂತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಂಕಿ ಸ್ಪಾಯ್ಲರ್, ಟೈಲ್ ಲ್ಯಾಂಪ್‌ಗಳು ಮತ್ತು 20-ಇಂಚಿನ ವೀಲ್‌ಗಳನ್ನು ಪಡೆದಿದೆ.
ನೂತನ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಸಾಧ್ಯವಾಗುವಂತೆ 455 ಲೀಟರ್ ಬೂಟ್ ಸ್ಪೇಸ್‌ನ್ನು ಪಡೆದಿದೆ. 4,371 ಎಂಎಂ ಉದ್ದ, 1,907 ಎಂಎಂ ಅಗಲ ಮತ್ತು 1,627 ಎಂಎಂ ಎತ್ತರ ಕೂಡ ಇದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,775 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 682 ರೇಂಜ್ (ಮೈಲೇಜ್) ನೀಡಬಲ್ಲದು. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 285 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ.
ಹೊಸ ಬ್ಯಾಟ್‌ಮ್ಯಾನ್ ಎಡಿಷನ್ ಆಲ್ ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ & ಇನ್ಸ್ಟ್ರುಮೆಂಟೇಶನ್ ಸ್ಕ್ರೀನ್‌ಗಳು ಕಸ್ಟಮ್ ಬ್ಯಾಟ್‌ಮ್ಯಾನ್ ಅನಿಮೇಷನ್‌ನ್ನು ಹೊಂದಿವೆ. ಟೂ-ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ ಫಾಬ್‌ಗಳು, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು ಹಾಗೂ ಹರ್ಮನ್ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








