Mahindra: ಭೂಲೋಕದ ಅರಮನೆಯಂತಿದೆ.. ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಮಹೀಂದ್ರಾ & ಮಹೀಂದ್ರಾ (Mahindra & Mahindra) ಹಾಗೂ ಡಿಸಿ ಕಾಮಿಕ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ವಾರ್ನರ್ ಬ್ರದರ್ಸ್ (Warner Bros) ಒಪ್ಪಂದ ಮಾಡಿಕೊಂಡಿವೆ. ಅದರ ಭಾಗವಾಗಿ ಗುರುವಾರ ನೂತನ 'ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಕಾರು ಬೇರೆ 'ಡಾರ್ಕ್ ಎಡಿಷನ್'ಗಳಿಗಿಂತ ವಿಭಿನ್ನವಾಗಿದೆ. ಇದರ ವಿನ್ಯಾಸದಲ್ಲಿ ಬ್ಯಾಟ್‌ಮ್ಯಾನ್ ಸಿನಿಮಾ & ಕಾಮಿಕ್ಸ್‌ಗಳಲ್ಲಿ ಕಂಡುಬರುವ ಅಂಶಗಳನ್ನು ಹೆಚ್ಚಾಗಿ ನೋಡಬಹುದು.

ಹೊಚ್ಚ ಹೊಸ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ (Mahindra BE 6 Batman Edition) ಎಲೆಕ್ಟ್ರಿಕ್ ಎಸ್‌ಯುವಿ, ರೂ.27.79 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಆಗಸ್ಟ್ 23 ರಿಂದ ಬುಕ್ಕಿಂಗ್ ಶುರುವಾಗಲಿದ್ದು, ಸೆಪ್ಟೆಂಬರ್ 20 ರಂದು ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಕೇವಲ 300 ಯುನಿಟ್‌ಗಳನ್ನು ಮಾತ್ರ ಉತ್ಪಾದಿಸಲಾಗುತ್ತದೆ.

Mahindra BE 6 Batman Edition Launched In India Rs 27 79 Lakh Price Details

ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ಸ್ಟ್ಯಾಂಡರ್ಡ್ 'ಬಿಇ 6' ಮಾಡೆಲ್‌ನಂತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 'ಜೆ' ಆಕಾರಕ್ಕೆ ಹೋಲುವ ಡಿಆರ್‌ಎಲ್‌ಗಳು, 20-ಇಂಚಿನ ವೀಲ್‌ಗಳು, ಫ್ಲಶ್ ಪಾಪ್ ಔಟ್ ಡೋರ್ ಹ್ಯಾಂಡಲ್‌ಗಳು, ಫಂಕಿ ಸ್ಪಾಯ್ಲರ್ ಹಾಗೂ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ.

ವಿಶೇಷವಾಗಿ ನೂತನ 'ಬ್ಯಾಟ್‌ಮ್ಯಾನ್ ಎಡಿಷನ್' ಕಸ್ಟಮ್ ಸ್ಯಾಟಿನ್ ಬ್ಲ್ಯಾಕ್ ಬಾಡಿ ಕಲರ್ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದರೊಂದಿಗೆ ಫ್ರಂಟ್ ಡೋರ್‌ನಲ್ಲಿ ಕಸ್ಟಮ್ ಬ್ಯಾಟ್‌ಮ್ಯಾನ್ ಡೆಕಲ್‌ಗಳು, ಟೈಲ್‌ಗೇಟ್‌ನಲ್ಲಿ ಡಾರ್ಕ್ ನೈಟ್ ಬ್ಯಾಡ್ಜ್, ಫೆಂಡರ್‌ ಹಾಗೂ ವೀಲ್ ಹಬ್ ಕ್ಯಾಪ್‌ಗಳಲ್ಲಿ ಬ್ಯಾಟ್‌ಮ್ಯಾನ್ ಲೋಗೋವನ್ನು ಒಳಗೊಂಡಿದೆ.

ನೂತನ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಒಳಾಂಗಣವು ತುಂಬಾ ಚೆನ್ನಾಗಿದೆ. ಆಲ್ ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಹೊಂದಿದೆ. ಡ್ಯಾಶ್‌ಬೋರ್ಡ್‌ನಲ್ಲಿ ಆಲ್ಕೆಮಿ ಗೋಲ್ಡ್ ಎಲಿಮೆಂಟ್‌ಗಳು ಇದ್ದು, ಇನ್ಫೋಟೈನ್‌ಮೆಂಟ್ & ಇನ್ಸ್ಟ್ರುಮೆಂಟೇಶನ್ ಸ್ಕ್ರೀನ್ ಕಸ್ಟಮ್ ಬ್ಯಾಟ್‌ಮ್ಯಾನ್ ಅನಿಮೇಷನ್ ಆಯ್ಕೆಯನ್ನು ಪಡೆದಿವೆ. ಜೊತೆಗೆ ಟೂ-ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ-ಫಾಬ್‌ಗಳು, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು ಹಾಗೂ 16-ಸ್ಪೀಕರ್ ಹರ್ಮನ್ ಮ್ಯೂಸಿಕ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 682 ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 285 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 455 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 4,371 ಎಂಎಂ ಉದ್ದ, 1,907 ಎಂಎಂ ಅಗಲ ಮತ್ತು 1,627 ಎಂಎಂ ಎತ್ತರವು ಕೂಡ ಇದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,775 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ಒದಗಿಸುತ್ತದೆ. ಅದಕ್ಕಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ನು ನೂತನ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಮಾರಾಟಕ್ಕೆ ಬಂದಿದ್ದು, ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಡಿದೆ. ಈ ಕಾರಿಗೆ ಮುಂಬರುವ ದಿನಗಳಲ್ಲಿ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

More from DriveSpark

Article Published On: Friday, August 15, 2025, 9:20 [IST]
English summary
Mahindra be 6 batman edition launched in india rs 27 79 lakh price details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+