ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿದೆ.. ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಕುರಿತ ಪ್ರಮುಖಾಂಶಗಳಿವು, ಯಾರು ಹೇಳಲ್ಲ!
ಇತ್ತೀಚೆಗೆ ಹೊಚ್ಚ ಹೊಸ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ (Mahindra BE 6 Batman Edition) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ನಾವಿಲ್ಲಿ ಈ ನೂತನ 'ಬ್ಯಾಟ್‌ಮ್ಯಾನ್ ಎಡಿಷನ್' ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price):
ಹೊಸ ಬ್ಯಾಟ್‌ಮ್ಯಾನ್ ಎಡಿಷನ್ ರೂ.27.79 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಮಾರಾಟಕ್ಕೆ ಬಂದಿದೆ. ಆಗಸ್ಟ್ 23 ರಿಂದ ಬುಕ್ಕಿಂಗ್ ಆರಂಭವಾಗಲಿದೆ. ಸೆಪ್ಟೆಂಬರ್ 20 ರಂದು ವಿತರಣೆಗಳು ಶುರುವಾಗಲಿದೆ. ಈ ಕಾರನ್ನು ಸೀಮಿತ ಅವಧಿವರೆಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಅದಕ್ಕಾಗಿ ಕೇವಲ 300 ಯುನಿಟ್‌ಗಳನ್ನು ಮಾತ್ರ ತಯಾರಿಸಲಾಗುತ್ತದೆ.

ವಿನ್ಯಾಸ (Design):
ಮಹೀಂದ್ರಾ & ಮಹೀಂದ್ರಾ ಹಾಗೂ ಡಿಸಿ ಕಾಮಿಕ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ವಾರ್ನರ್ ಬ್ರದರ್ಸ್ ಒಪ್ಪಂದ ಮಾಡಿಕೊಂಡಿವೆ. ಹೀಗಾಗಿ, ಹೊಸ 'ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್' ಹೊರಭಾಗದ ವಿನ್ಯಾಸದಲ್ಲಿ ಬ್ಯಾಟ್‌ಮ್ಯಾನ್ ಸಿನಿಮಾ ಮತ್ತು ಕಾಮಿಕ್ಸ್‌ಗಳಲ್ಲಿ ಕಂಡುಬರುವ ಅಂಶಗಳನ್ನು ಹೆಚ್ಚಾಗಿ ಕಾಣಬಹುದಾಗಿದೆ. ಕಸ್ಟಮ್ ಸ್ಯಾಟಿನ್ ಬ್ಲ್ಯಾಕ್ ಬಾಡಿ ಕಲರ್, ಫ್ರಂಟ್ ಡೋರ್‌ನಲ್ಲಿ ಕಸ್ಟಮ್ ಬ್ಯಾಟ್‌ಮ್ಯಾನ್ ಡೆಕಲ್‌ಗಳು ಹಾಗೂ ಟೈಲ್‌ಗೇಟ್‌ನಲ್ಲಿ ಡಾರ್ಕ್ ನೈಟ್ ಬ್ಯಾಡ್ಜ್‌ನ್ನು ಪಡೆದಿದೆ.
ಇದು ಮಾತ್ರವಲ್ಲದೇ ಸ್ಟ್ಯಾಂಡರ್ಡ್ 'ಬಿಇ 6' ಮಾಡೆಲ್‌ನಂತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 'ಜೆ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ - ಡಿಆರ್‌ಎಲ್‌ಗಳು, 20-ಇಂಚಿರುವ ವೀಲ್‌ಗಳು, ಫ್ಲಶ್-ಪಾಪ್ ಔಟ್ ಡೋರ್ ಹ್ಯಾಂಡಲ್‌ಗಳು, ಫಂಕಿ ಸ್ಪಾಯ್ಲರ್ ಮತ್ತು ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ.
ಸುತ್ತಳತೆ (Dimensions):
ನೂತನ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ವಿಶಾಲ ಗಾತ್ರದ ಕಾರಾಗಿದೆ. 4,371 ಎಂಎಂ ಉದ್ದ, 1,907 ಎಂಎಂ ಅಗಲ ಹಾಗೂ 1,627 ಎಂಎಂ ಎತ್ತರವಿದೆ. ಜೊತೆಗೆ 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 455 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಕಾರ್ಯಕ್ಷಮತೆ (Performance):
ಹೊಸ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 682 ರೇಂಜ್ (ಮೈಲೇಜ್) ಕೊಡುತ್ತದೆ. ಇದು ಪಡೆದುಕೊಂಡಿರುವ ಎಲೆಕ್ಟ್ರಿಕ್ ಮೋಟಾರ್, 285 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ವೈಶಿಷ್ಟ್ಯಗಳು (Features):
ನೂತನ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ಒಳಭಾಗದಲ್ಲಿ ಆಲ್-ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಹಾಗೂ ಇನ್ಸ್ಟ್ರುಮೆಂಟೇಶನ್ ಸ್ಕ್ರೀನ್ ಕಸ್ಟಮ್ ಬ್ಯಾಟ್‌ಮ್ಯಾನ್ ಅನಿಮೇಷನ್‌ನ್ನು ಹೊಂದಿವೆ. ಟೂ ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ ಫಾಬ್‌ಗಳು, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು ಮತ್ತು ಹರ್ಮನ್ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ವಿವಿಧ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಿತ್ತದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಇದಕ್ಕೆ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, ಟಾಟಾ ಕರ್ವ್ ಇವಿ, ಟಾಟಾ ಹ್ಯಾರಿಯರ್ ಇವಿ, ಎಂಜಿ ವಿಂಡ್ಸರ್ ಇವಿ ಹಾಗೂ ಎಂಜಿ ಝಡ್ಎಸ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications








