Mahindra: 683 ಕಿ.ಮೀ ಓಡುತ್ತೆ.. 5-ಸೀಟರ್, ಹೊಸ ಮಹೀಂದ್ರಾ SUV ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?

ಇಂದು ಹೊಚ್ಚ ಹೊಸ ಮಹೀಂದ್ರಾ ಬಿಇ 6 ಫಾರ್ಮುಲಾ-ಇ ಎಡಿಷನ್ (Mahindra BE 6 Formula-E Edition) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡಿಗರ ಕಣ್ಣು ಕುಕ್ಕುವಂತಿದೆ. ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ, ಈ ಕಾರಿನ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ ಮಹೀಂದ್ರಾ ಬಿಇ 6 ಫಾರ್ಮುಲಾ-ಇ ಎಡಿಷನ್ ಎಲೆಕ್ಟ್ರಿಕ್ ಎಸ್‌ಯುವಿ, ರೂ.23.69 ಲಕ್ಷದಿಂದ ರೂ.24.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಫ್ಇ2 (FE2) ಹಾಗೂ ಎಫ್ಇ3 (FE3) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಮೊದಲ 999 ಗ್ರಾಹಕರಿಗಾಗಿ ವಿಶೇಷ ಪ್ರಯೋಜನಗಳನ್ನು ಘೋಷಣೆ ಮಾಡಲಾಗಿದೆ. ಜನವರಿ 14, 2026 ರಿಂದ ಬುಕ್ಕಿಂಗ್ ಪ್ರಕ್ರಿಯೆಗೂ ಚಾಲನೆ ನೀಡಲಾಗುತ್ತದೆ. ಫೆಬ್ರವರಿ 14, 2026 ರಿಂದ ವಿತರಣೆಯನ್ನು ಪ್ರಾರಂಭಿಸಲಾಗುತ್ತದೆ.

Mahindra BE 6 Formula-Edition Launched In India Rs 23 69 Lakh Price Details

ಇದನ್ನು 'ಫಾರ್ಮುಲಾ ಇ' ರೇಸ್‌ನಲ್ಲಿ ಉಪಯೋಗಿಸಿರುವ ರೇಸಿಂಗ್ ಕಾರುಗಳ ಥೀಮ್‌ನಲ್ಲಿ ಸಿದ್ದಪಡಿಸಲಾಗಿದೆ. ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಮರುವಿನ್ಯಾಸಗೊಳಿಸಲಾದ ಬಂಪರ್‌ಗಳನ್ನು ಪಡೆದಿದೆ. ಸರ್ಕ್ಯುಲರ್ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳನ್ನು ಪಡೆದಿದೆ. ಬಾನೆಟ್, ಡೋರ್‌ಗಳು ಮತ್ತು ಫೆಂಡರ್‌ಗಳಲ್ಲಿ ಮೋಟಾರ್‌ಸ್ಪೋರ್ಟ್ ಆಧಾರಿತ ಗ್ರಾಫಿಕ್ಸ್ ಆಯ್ಕೆಯನ್ನು ಹೊಂದಿದೆ. ಆರ್20 ಸ್ಪೋರ್ಟಿ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಟ್ಯಾಂಗೋ ರೆಡ್, ಫೈರ್‌ಸ್ಟಾರ್ಮ್ ಆರೆಂಜ್, ಎವರೆಸ್ಟ್ ವೈಟ್ & ಸ್ಟೆಲ್ತ್ ಬ್ಲ್ಯಾಕ್ ಬಣ್ಣಗಳೊಂದಿಗೂ ಸಿಗುತ್ತದೆ.

ಹೊಸ 'ಮಹೀಂದ್ರಾ ಬಿಇ 6 ಫಾರ್ಮುಲಾ-ಇ ಎಡಿಷನ್' ಎಲೆಕ್ಟ್ರಿಕ್ ಕಾರು, ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,371 ಮಿ.ಮೀ ಉದ್ದ, 1,907 ಮಿ.ಮೀ ಅಗಲ ಹಾಗೂ 1,627 ಮಿ.ಮೀ ಎತ್ತರವಿದೆ. ಜೊತೆಗೆ 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Mahindra BE 6 Formula-Edition Launched In India Rs 23 69 Lakh Price Details

ಈ ಎಸ್‌ಯುವಿಯು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಒಳಗೊಂಡಿದೆ. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 455 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ 'ಬಿಇ 6 ಫಾರ್ಮುಲಾ-ಇ ಎಡಿಷನ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 682 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 285 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟ್ರಾನ್ಸ್‌ಪರೆಂಟ್‌ ಡೋರ್ ಪ್ಯಾನೆಲ್, ಫಾರ್ಮುಲಾ-ಇ ಲೋಗೋ ಹಾಗೂ ಆರೆಂಜ್ ಬಣ್ಣದ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 12.3-ಇಂಚಿನ ಸೂಪರ್ ಸ್ಕ್ರೀನ್​ಗಳು, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ರೇರ್ ಎಸಿ ವೆಂಟ್‌ಗಳು, ವೆಂಟಿಲೇಟೆಡ್ ಸೀಟ್‌ಗಳು, ಡುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ ಹಾಗೂ ಸೋನಿಕ್ ಸ್ಟುಡಿಯೋ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಹಗಳನ್ನು ಹೊಂದಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಟೋ ಪಾರ್ಕಿಂಗ್ ಅಸಿಸ್ಟ್ & 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Wednesday, November 26, 2025, 22:38 [IST]
English summary
Mahindra be 6 formula edition launched in india rs 23 69 lakh price details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+