682 Km ರೇಂಜ್.. 5-ಸೀಟರ್, ಈ ಬಾಹುಬಲಿ Mahindra SUV ಕುರಿತ ಪ್ರಮುಖಾಂಶಗಳಿವು!
ಮಹೀಂದ್ರಾ ಬಿಇ 6 (Mahindra BE 6) ಪ್ರಖ್ಯಾತ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ವಿದೇಶಿ ಕಂಪನಿ ಕಾರುಗಳಿಗೆ ಸವಾಲೆಸೆಯುವ ರೀತಿಯಲ್ಲಿ ಅತ್ಯಾಧುನಿಕವಾದ ವಿನ್ಯಾಸ ಹೊಂದಿದೆ. ಜೊತೆಗೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಎಲ್ಲ ವರ್ಗದ ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ನೀವು ಹೊಚ್ಚ ಹೊಸ ಎಸ್‌ಯುವಿವೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ 'ಬಿಇ 6' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ವಿನ್ಯಾಸ (Price & Design)
ನೂತನ 'ಮಹೀಂದ್ರಾ ಬಿಇ 6' ಎಲೆಕ್ಟ್ರಿಕ್ ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.18.90 ಲಕ್ಷ ಹಾಗೂ ಗರಿಷ್ಠ ರೂ.27.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಟೈಲ್ ಲ್ಯಾಂಪ್‌ಗಳು ಹಾಗೂ 20 ಇಂಚಿನ ವೀಲ್‌ಗಳನ್ನು ಒಳಗೊಂಡಿದೆ.

ಬಣ್ಣ & ಸುತ್ತಳತೆ (Colors & Dimensions):
ಈ ಕಾರು ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ಡೆಸರ್ಟ್ ಮಿಸ್ಟ್, ಡೀಪ್ ಫಾರೆಸ್ಟ್, ಟ್ಯಾಂಗೋ ರೆಡ್, ಫೈರ್‌ಸ್ಟಾರ್ಮ್ ಆರೆಂಜ್, ನಪೋಲಿ ಬ್ಲ್ಯಾಕ್, ಡೆಸರ್ಟ್ ಮಿಸ್ಟ್ ಸ್ಯಾಟಿನ್ ಮತ್ತು ಎವರೆಸ್ಟ್ ವೈಟ್ ಸ್ಯಾಟಿನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದು 4,371 ಎಂಎಂ ಉದ್ದ, 1,907 ಎಂಎಂ ಅಗಲ & 1,627 ಎಂಎಂ ಎತ್ತರವಿದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,775 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಹೊಸ ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಎಸ್‌ಯುವಿ, 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance):
ಈ ಕಾರು ಎರಡು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 556 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಇದು ಪಡೆದುಕೊಂಡಿರುವ ಎಲೆಕ್ಟ್ರಿಕ್ ಮೋಟಾರ್, 230 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಮತ್ತೊಂದು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 682 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 285 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.
ವೈಶಿಷ್ಟ್ಯಗಳು (Features):
ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಎಸ್‌ಯುವಿ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದೆ. 202 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೂ ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು, ಕೀಲೆಸ್ ಎಂಟ್ರಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಹಾಗೂ ಹರ್ಮನ್ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಟೋ ಪಾರ್ಕಿಂಗ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








