ಹೊಸ ಇತಿಹಾಸ ಬರೆದ ಮಹೀಂದ್ರಾ: 200,000 ಯುನಿಟ್ Scorpio N ಮಾರಾಟ.. ಹೊಸ ಕಾರ್ಬನ್ ಎಡಿಷನ್ ಬಿಡುಗಡೆ!

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡಿದ್ದಾರೆ. ಸದ್ಯ, ಕಂಪನಿಯು ಸ್ಕಾರ್ಪಿಯೋ ಎನ್ ಮಾರಾಟದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಕಾರು ಬಿಡುಗಡೆಯಾಗಿನಿಂದಲೂ ಇಲ್ಲಿವರೆಗೆ ಸರಿ ಸುಮಾರು 200,000 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇದರ ಸವಿನೆನಪಿಗಾಗಿ 'ಸ್ಕಾರ್ಪಿಯೋ-ಎನ್ ಕಾರ್ಬನ್ ಎಡಿಷನ್'ನ್ನು ಬಿಡುಗಡೆಗೊಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಮಹೀಂದ್ರಾ ಸ್ಕಾರ್ಪಿಯೋ ಎನ್ ಕಾರ್ಬನ್ ಎಡಿಷನ್ (Mahindra Scorpio N Carbon Edition) ಎಸ್‌ಯುವಿ, ರೂ.19.19 ಲಕ್ಷದಿಂದ ರೂ.24.89 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 7-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದುಕೊಂಡಿರುವ ಈ ಕಾರು, ಜಡ್8 ಮತ್ತು ಜಡ್8ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ.

Mahindra Scorpio N Achieve 200 000 Unit Sales Milestone Carbon Edition Launched

ಹೊಸ ಮಹೀಂದ್ರಾ ಸ್ಕಾರ್ಪಿಯೋ ಎನ್ ಕಾರ್ಬನ್ ಎಡಿಷನ್ ಹೊರಭಾಗದಲ್ಲಿ ಸಾಮಾನ್ಯ ಸ್ಕಾರ್ಪಿಯೋ ಎನ್ ಎಸ್‌ಯುವಿಯಂತೆ ವಿನ್ಯಾಸವನ್ನು ಹೊಂದಿದೆ. ಆಕರ್ಷಕವಾದ ಹೆಡ್‌ಲೈಟ್‌ಗಳು, ಟೈಲ್ ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಫಾಗ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಇದು ಮಾತ್ರವಲ್ಲದೆ, ಈ ಕಾರಿಗೆ ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಬಣ್ಣವನ್ನು ಬಳಿಯಲಾಗಿದೆ.

ಈ ಕಾರಿನ ಒಳಭಾಗವು ಕಪ್ಪು ಬಣ್ಣದ ಥೀಮ್‌ನ್ನೇ ಆಧರಿಸಿದೆ. ಜೊತೆಗೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ 7-ಇಂಚಿನ ಡಿಜಿಟಲ್ ಡ್ರೈವರ್ ಕ್ಲಸ್ಟರ್, 12-ಸ್ಪೀಕರ್ ಸೋನಿ ಸೌಂಡ್ ಸಿಸ್ಟಮ್‌, ಸಿಂಗಲ್-ಪೇನ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ಆಟೋ ಎಸಿ, ಅಟೋಮೆಟಿಕ್ ಹೆಡ್‌ಲೈಟ್‌ಗಳು ಹಾಗೂ ವೈಪರ್‌ಗಳನ್ನು ಒಳಗೊಂಡಿದೆ.

Mahindra Scorpio N Achieve 200 000 Unit Sales Milestone Carbon Edition Launched

ನೂತನ ಮಹೀಂದ್ರಾ ಸ್ಕಾರ್ಪಿಯೋ ಎನ್ ಕಾರ್ಬನ್ ಎಡಿಷನ್ ಸಾಮಾನ್ಯ ಸ್ಕಾರ್ಪಿಯೋ ಎನ್ ಎಸ್‌ಯುವಿಯಂತೆಯೇ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 12.12 ರಿಂದ 15.94 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

Mahindra Scorpio N Achieve 200 000 Unit Sales Milestone Carbon Edition Launched

ಇನ್ನು, ಮಹೀಂದ್ರಾ ಕಂಪನಿಯು 200,000 ಯುನಿಟ್ ಸ್ಕಾರ್ಪಿಯೋ ಎನ್ ಎಸ್‌ಯುವಿಗಳನ್ನು ಮಾರಾಟಗೊಳಿಸಿರುವುದು ನಿಜಕ್ಕೂ ಉತ್ತಮವಾದ ಬೆಳವಣಿಗೆಯಾಗಿದೆ. ಹೊಸ ಕಾರ್ಬನ್ ಎಡಿಷನ್ ಕೂಡ ಆಕರ್ಷಕ ವಿನ್ಯಾಸವನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುವ ನೀರಿಕ್ಷೆಯಿದೆ. ಮುಂಬರುವ ದಿನಗಳಲ್ಲಿ ಈ ಕಾರಿಗೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, February 24, 2025, 19:37 [IST]
English summary
Mahindra scorpio n achieve 200000 unit sales milestone carbon edition launched
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+