Mahindra: ಪಿಕ್ಅಪ್ ಟ್ರಕ್ ರೂಪದಲ್ಲಿ ಬರಲಿದೆ ಮಹೀಂದ್ರಾ ಸ್ಕಾರ್ಪಿಯೋ ಎನ್.. ಪರೀಕ್ಷಾರ್ಥ ಸಂಚಾರ!
ದೇಶದ ಅತ್ಯಂತ ಜನಪ್ರಿಯ ಎಸ್‌ಯುವಿಗಳ ಪೈಕಿ ಮಹೀಂದ್ರಾ ಸ್ಕಾರ್ಪಿಯೊ ಎನ್ (Mahindra Scorpio N) ಕೂಡ ಒಂದಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಈ ಹಿಂದೆ, ಮಹೀಂದ್ರಾ ಕಂಪನಿಯು ಸ್ಕಾರ್ಪಿಯೊ ಎನ್ ಪಿಕ್ಅಪ್ ಟ್ರಕ್ ಕಾನ್ಸೆಪ್ಟ್ ಮಾಡೆಲ್‌ನ್ನು ದಕ್ಷಿಣ ಆಫ್ರಿಕಾದಲ್ಲಿ ಪ್ರದರ್ಶನ ಮಾಡಿದೆ. ಅದರ ಹೊರತಾಗಿಯೂ ಈ ಪಿಕ್ಅಪ್ ಟ್ರಕ್ ಹೊಸ ಹೆಸರಿನೊಂದಿಗೆ ಮಾರಾಟಕ್ಕೆ ಬರುವುದು ಬಹುತೇಕ ಖಚಿತವಾಗಿದ್ದು, ಕೆಲವೇ ದಿನಗಳಲ್ಲಿ ಆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ 'ಮಹೀಂದ್ರಾ ಸ್ಕಾರ್ಪಿಯೊ ಎನ್' ಪಿಕ್ಅಪ್ ಟ್ರಕ್ ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದೆ. ಅದಕ್ಕೆ ಸಂಬಂಧಿಸಿದ ಸ್ಪೈ ಫೋಟೋ/ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಹ ಕಾಣಿಸಿಕೊಂಡಿವೆ. ಈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ನೂತನ ಪಿಕ್ಅಪ್ ಟ್ರಕ್ 'ಸ್ಕಾರ್ಪಿಯೋ ಎನ್' ಎಸ್‌ಯುವಿ ರೀತಿಯಲ್ಲಿಯೇ ವಿನ್ಯಾಸವನ್ನು ಹೊಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಈ ಪಿಕ್ಅಪ್ ಟ್ರಕ್ 'ಸ್ಕಾರ್ಪಿಯೋ ಎನ್'ನಂತೆಯೇ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿರುವುದನ್ನು ಕಾಣಬಹುದು. ನೂತನ ಪಿಕ್ಅಪ್ 2026ರಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಅದ್ದೂರಿಯಾಗಿ ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಮಹೀಂದ್ರಾ ಸ್ಕಾರ್ಪಿಯೊ ಎನ್ ವಿಶೇಷತೆಗಳೇನು: ಇದು ಕನಿಷ್ಠ ರೂ.13.99 ಲಕ್ಷ ಮತ್ತು ಗರಿಷ್ಠ ರೂ.24.69 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಝಡ್2, ಝಡ್4, ಝಡ್6 ಹಾಗೂ ಝಡ್8 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್ ಹಾಗೂ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗುತ್ತದೆ.

ನೂತನ ಕಾರು ಎರಡು ಶಕ್ತಿಯುತ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 2.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 200 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್, 172 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 370 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಜೊತೆಗೆ 2ಡಬ್ಲ್ಯೂಡಿ (ಟೂ-ವೀಲ್-ಡ್ರೈವ್) ಮತ್ತು 4ಡಬ್ಲ್ಯೂಡಿ (ಫೋರ್-ವೀಲ್-ಡ್ರೈವ್) ಟೆಕ್ನಾಲಜಿಯನ್ನು ಹೊಂದಿದೆ. 12.12 ರಿಂದ 15.94 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಸ್ಕಾರ್ಪಿಯೊ ಎನ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ರುಮೆಂಟಲ್ ಕ್ಲಸ್ಟರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇದು 6/ 7 ಆಸನ ವ್ಯವಸ್ಥೆಯನ್ನು ಒಳಗೊಂಡಿದೆ.
ನೂತನ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಯಾಗಿ ಗ್ಲೋಬಲ್ ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್‌ನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಅಸಿಸ್ಟ್ ಕಂಟ್ರೋಲ್, ಫ್ರಂಟ್ & ರೇರ್ ಕ್ಯಾಮೆರಾಗಳು ಮತ್ತು 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








