Mahindra: 7-ಸೀಟರ್, 16 ಕಿ.ಮೀ ಮೈಲೇಜ್.. 13 ಲಕ್ಷ! ಹೊಸ ಮಹೀಂದ್ರಾ ಸ್ಕಾರ್ಪಿಯೋ ಎನ್ ಕುರಿತ ಪ್ರಮುಖಾಂಶಗಳು
ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಸ್ಕಾರ್ಪಿಯೋ ಎನ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ.. ಈ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ನೂತನ 'ಮಹೀಂದ್ರಾ ಸ್ಕಾರ್ಪಿಯೋ ಎನ್' ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.13.20 ಲಕ್ಷ ಹಾಗೂ ಗರಿಷ್ಠ ರೂ.24.17 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಝಡ್2, ಝಡ್4, ಝಡ್6, ಝಡ್8 ಎಸ್, ಝಡ್8, ಝಡ್8 ಟಿ, ಹಾಗೂ ಝಡ್8 ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ವ್ಯಾಲಿರಿಯನ್ ಸಿಲ್ವರ್, ಡೀಪ್ ಫಾರೆಸ್ಟ್ ಹಾಗೂ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ಈ ಕಾರು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,662 ಮಿ.ಮೀ ಉದ್ದ, 1,917 ಮಿ.ಮೀ ಅಗಲ ಮತ್ತು 1,857 ಮಿ.ಮೀ ಎತ್ತರವಿದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,750 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 2,510 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಹೊಸ 'ಸ್ಕಾರ್ಪಿಯೋ ಎನ್' 6/ 7 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ, ಹೆಚ್ಚಿನ ಲಗೇಜ್ ಕೊಂಡೊಯ್ಯಲು 460 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಇದು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಪಡೆದಿದೆ. 2.2-ಲೀ. ಡೀಸೆಲ್ ಎಂಜಿನ್, 175 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 370 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಮತ್ತೊಂದು 2.0-ಲೀ. ಪೆಟ್ರೋಲ್ ಎಂಜಿನ್, 203 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಈ ಕಾರು 12.12 ರಿಂದ 15.94 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಒಳಾಂಗಣ & ವೈಶಿಷ್ಟ್ಯಗಳು (Interior & Features):
ನೂತನ 'ಸ್ಕಾರ್ಪಿಯೋ ಎನ್' ವಿನ್ಯಾಸವು ಚೆನ್ನಾಗಿದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 12 ಸ್ಪೀಕರ್ 3ಡಿ ಸೋನಿ ಸೌಂಡ್ ಸಿಸ್ಟಮ್, ಡುಯಲ್ ಝೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ಕೀಲೆಸ್ ಎಂಟ್ರಿ, ಪುಶ್-ಬಟನ್ ಸ್ಟಾರ್ಟ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications