ಬ್ರೋ: 7-ಸೀಟರ್.. 'Scorpio N'ಗೆ ಫುಲ್ ಡಿಮ್ಯಾಂಡ್.. ಮನೆಗೆ ತರಲು ಎಷ್ಟು ದಿನ ಕಾಯಬೇಕು ಗೋತಾ?
ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈಗಲೂ ಈ 'ಸ್ಕಾರ್ಪಿಯೋ ಎನ್'ಗೆ ಭಾರೀ ಬೇಡಿಕೆಯಿದ್ದು, ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು ಖರೀದಿದಾರರು ಒಂದಷ್ಟು ದಿನಗಳು ಕಾಯಲೇ ಬೇಕು. ಸದ್ಯ, ಇದೇ ಕಾರಿನ ಕಾಯುವಿಕೆ ಅವಧಿ (Waiting Period) ಕುರಿತ ಒಂದಷ್ಟು ವಿವರಗಳು ಪ್ರಕಟಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ದೇಶಾದ್ಯಂತ 'ಮಹೀಂದ್ರಾ ಸ್ಕಾರ್ಪಿಯೋ ಎನ್' ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ಕಾಯುವಿಕೆ ಅವಧಿಯಲ್ಲಿ ವ್ಯತ್ಯಾಸವನ್ನು ಹೊಂದಿದೆ. ಇದರ ಝಡ್8 ಸೆಲೆಕ್ಟ್ (Z8 Select) ಮತ್ತು ಝಡ್8 (Z8) ರೂಪಾಂತರಗಳನ್ನು 2 ತಿಂಗಳೊಳಗೆ ಗ್ರಾಹಕರಿಗೆ ವಿತರಣೆ ಮಾಡಲಾಗುತ್ತದೆ.

ಹಾಗೆಯೇ ಝಡ್8 ಕಾರ್ಬನ್ (Z8 Carbon) ಹಾಗೂ ಝಡ್8 ಎಲ್ (Z8 L) ರೂಪಾಂತರಗಳು 1 ರಿಂದ 2 ತಿಂಗಳಲ್ಲಿ ಗ್ರಾಹಕರ ಕೈಸೇರಲಿವೆ. 2022ರ ಜುಲೈ ತಿಂಗಳಲ್ಲಿ ಬಿಡುಗಡೆಯಾದ ಈ ಸ್ಕಾರ್ಪಿಯೋ ಎನ್, ಸತತ 3 ವರ್ಷಗಳಿಂದ ಭಾರೀ ಬೇಡಿಕೆ ಹೊಂದಿರುವುದು ಉತ್ತಮವಾದ ಬೆಳವಣಿಗೆಯಾಗಿದೆ.
ಮಹೀಂದ್ರಾ ಸ್ಕಾರ್ಪಿಯೋ ಎನ್ ವಿಶೇಷತೆಗಳೇನು..
ಇದು ಗ್ರಾಹಕರ ನೆಚ್ಚಿನ ಎಸ್‌ಯುವಿಯಾಗಿದ್ದು, ರೂ.14 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೊರಭಾಗವು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಡೀಪ್ ಫಾರೆಸ್ಟ್, ನಪೋಲಿ ಬ್ಲ್ಯಾಕ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

ಈ ಎಸ್‌ಯುವಿಯು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಜೊತೆಗೆ ರೂಪಾಂತರಗಳನ್ನು ಅವಲಂಭಿಸಿ, 12.12 ರಿಂದ 15.94 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನೂತನ ಮಹೀಂದ್ರಾ ಸ್ಕಾರ್ಪಿಯೋ ಎನ್ 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 460 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಸಿಂಗಲ್ - ಪೇನ್ ಸನ್‌ರೂಫ್‌ನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಸಹ ಖರೀದಿಗೆ ಲಭ್ಯ..
ಇದು ರೂ.13.77 ಲಕ್ಷದಿಂದ ರೂ.17.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 2.2-ಲೀ ಸಾಮರ್ಥ್ಯದ ಡೀಸೆಲ್ ಎಂಜಿನ್ ಹೊಂದಿದ್ದು, 14.44 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 7 ಹಾಗೂ 9 ಆಸನ ಆಯ್ಕೆ ವ್ಯವಸ್ಥೆಯಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








