Scorpio: 7-ಸೀಟರ್.. 13 ಲಕ್ಷ, ಗಟ್ಟಿಮುಟ್ಟಾದ ಮಹೀಂದ್ರಾ ಸ್ಕಾರ್ಪಿಯೋಗೆ ಫುಲ್ ಡಿಮ್ಯಾಂಡ್.. ಬಿಸಿ ಜಾಮೂನಿನಂತೆ ಸೇಲ್ಸ್!

ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಜಗಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಅದಕ್ಕೆ ತಕ್ಕಂತೆ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ದೊರೆಯುತ್ತದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಸ್ಕಾರ್ಪಿಯೋ' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 18,372 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ.

ಇದೇ ಸೆಪ್ಟೆಂಬರ್‌ನಲ್ಲಿ 'ಮಹೀಂದ್ರಾ ಸ್ಕಾರ್ಪಿಯೋ' ಗರಿಷ್ಠ ಪ್ರಮಾಣದಲ್ಲಿ ಮಾರಾಟವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಇದರ ಸಂಪೂರ್ಣ ಲಾಭವು 'ಸ್ಕಾರ್ಪಿಯೋ' ಕಾರಿಗೂ ಲಭ್ಯವಿದೆ. 'ಸ್ಕಾರ್ಪಿಯೋ ಎನ್' ಮಾಡೆಲ್ ಬೆಲೆ ರೂ.1.44 ಲಕ್ಷವರೆಗೆ ಇಳಿಕೆಯಾಗಿದೆ. ಅದೇ ರೀತಿಯಲ್ಲಿ 'ಸ್ಕಾರ್ಪಿಯೋ ಕ್ಲಾಸಿಕ್ ಮಾಡೆಲ್ ದರ ರೂ.1.01 ಲಕ್ಷ ಕಡಿಮೆಯಾಗಿದೆ. ಜೊತೆಗೆ ನವರಾತ್ರಿ ಹಿನ್ನೆಲೆ, ಈ ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

Mahindra Scorpio September 2025 Sales Details

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ವಿಶೇಷತೆಗಳೇನು:

ಈ ಎಸ್‌ಯುವಿಯು ಕನಿಷ್ಠ ರೂ.13.20 ಲಕ್ಷ ಹಾಗೂ ಗರಿಷ್ಠ ರೂ.24.17 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಜಡ್2, ಜಡ್4, ಜಡ್6, ಜಡ್8 ಎಸ್, ಜಡ್8, ಜಡ್8 ಟಿ ಹಾಗೂ ಜಡ್8 ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, 'ಸಿ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಡಿಆರ್‌ಎಲ್‌ಗ‌ಳು ಮತ್ತು 18 ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಮಿಡ್‌ನೈಟ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಡೀಪ್ ಫಾರೆಸ್ಟ್ & ನಪೋಲಿ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Mahindra Scorpio September 2025 Sales Details

ನೂತನ 'ಮಹೀಂದ್ರಾ ಸ್ಕಾರ್ಪಿಯೋ ಎನ್' ಎಸ್‌ಯುವಿಯು 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 460 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 187 ಎಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,750 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 1,900 ಕೆಜಿ ತೂಕವಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2-ಲೀ. ಟರ್ಬೊ ಪೆಟ್ರೋಲ್ & 2.2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 16 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಹೊಸ 'ಸ್ಕಾರ್ಪಿಯೋ ಎನ್' 165 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಕೇವಲ 14 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಕೂಡ ಖರೀದಿಗೆ ಲಭ್ಯ:

ಈ ಎಸ್‌ಯುವಿಯು ರೂ.12.98 ಲಕ್ಷದಿಂದ ರೂ.16.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಸ್ ಹಾಗೂ ಎಸ್11 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಪರ್ಲ್ ವೈಟ್, ಗ್ಯಾಲಕ್ಸಿ ಗ್ರೇ, ರೆಡ್ ರೇಜ್ ಮತ್ತು ನಪೋಲಿ ಬ್ಲ್ಯಾಕ್ ಎಂಬ ಬಣ್ಣಗಳನ್ನು ಒಳಗೊಂಡಿದೆ. 209 ಎಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,680 ಎಂಎಂ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ.14 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 165 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. 14.01 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 7/ 9 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, October 7, 2025, 13:00 [IST]
English summary
Mahindra scorpio september 2025 sales details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+