Mahindra: 7-ಸೀಟರ್.. 13.99 ಲಕ್ಷ, ಬಲಿಷ್ಠ ಮಹೀಂದ್ರಾ ಸ್ಕಾರ್ಪಿಯೋ ಬೇಕೆಂದು ಹಠ ಹಿಡಿದ ಗ್ರಾಹಕರು.. ಫುಲ್ ಡಿಮ್ಯಾಂಡ್!
ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ 2025ರ ಜುಲೈನಲ್ಲಿ 13,747 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 12% ಬೆಳವಣಿಗೆಯಾಗಿದೆ. 2024ರ ಇದೇ ಅವಧಿಯಲ್ಲಿ 12,237 ಯುನಿಟ್‌ಗಳನ್ನು ಮಾರಲಾಗಿತ್ತು.
ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ವಿಶೇಷತೆಗಳೇನು..
ಇದೊಂದು ಎಸ್‌ಯುವಿಯಾಗಿದ್ದು, ರೂ.13.99 ಲಕ್ಷದಿಂದ ರೂ.25.15 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಸಿಗುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸಿಗ್ನೇಚರ್ ಗ್ರಿಲ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಸಿ -ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 18-ಇಂಚಿರುವ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಈ ಕಾರು 4662 ಎಂಎಂ ಉದ್ದ, 1917 ಎಂಎಂ ಅಗಲ ಹಾಗೂ 1857 ಎಂಎಂ ಎತ್ತರ ಕೂಡ ಇದೆ. 187 ಎಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2750 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಮಿಡ್‌ನೈಟ್ ಬ್ಲ್ಯಾಕ್ ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಡೀಪ್ ಫಾರೆಸ್ಟ್ & ನಪೋಲಿ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ ಸ್ಕಾರ್ಪಿಯೋ ಎನ್ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ದೊರೆಯುತ್ತದೆ. 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 12 ರಿಂದ 16 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 57 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ಇದು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 6/ 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 460 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಹೇಗಿದೆ:
ಇದನ್ನು ಕೂಡ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಾರೆ. ರೂ.13.77 ಲಕ್ಷದಿಂದ ರೂ.17.72 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ವೈಟ್ , ಗ್ಯಾಲಕ್ಸಿ ಗ್ರೇ, ರೆಡ್ ರೇಜ್, ನಪೋಲಿ ಬ್ಲ್ಯಾಕ್ ಹಾಗೂ ಡಿಸ್ಯಾಟ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 7/ 9 ಆಸನಗಳನ್ನು ಪಡೆದಿದೆ.
ಈ ಎಸ್‌ಯುವಿಯು 2.2-ಲೀಟರ್ ಡೀಸೆಲ್ ಎಂಜಿನ್ ಹಾಗೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 14.44 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು ಆಲ್ ಪವರ್ ವಿಂಡೋಸ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








