ಬ್ರೋ.. 7-ಸೀಟರ್, 16 Km ಮೈಲೇಜ್.. 13 ಲಕ್ಷದ ಮಹೀಂದ್ರಾ ಸ್ಕಾರ್ಪಿಯೋಗಾಗಿ ಶೋರೂಂ ಎಡತಾಕಿದ ಗ್ರಾಹಕರು!

ಭಾರತದ ಕಾರು ಮಾರುಕಟ್ಟೆಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಎಸ್‌ಯುವಿ, ತನ್ನದೇ ಆದ ಛಾಪನ್ನು ಮೂಡಿಸಿದೆ. ಇದು ದಶಕಗಳಿಂದ ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಖರೀದಿದಾರರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈಚೆಗೆ ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಇದೇ ಸ್ಕಾರ್ಪಿಯೋ 7ನೇ ಸ್ಥಾನದಲ್ಲಿದ್ದು, 12,740 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಅದರ ಹೊರತಾಗಿ ಹ್ಯುಂಡೈ ಕ್ರೆಟಾ (15,786 ಯುನಿಟ್‌) ಮೊದಲ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಡಿಜೈರ್ (15,484 ಯುನಿಟ್‌) ಎರಡನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಬ್ರೆಝಾ (14,507 ಯುನಿಟ್) ಮೂರನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಎರ್ಟಿಗಾ (14,151 ಯುನಿಟ್) ನಾಲ್ಕನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಸ್ವಿಫ್ಟ್ (13,275 ಯುನಿಟ್) ಐದನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ವ್ಯಾಗನ್ಆರ್ (12,930 ಯುನಿಟ್) ಆರನೇ ಸ್ಥಾನದಲ್ಲಿದೆ.

Mahindra Scorpio Suv June 2025 Sales Details

ಈ ವರ್ಷದ ಮೊದಲ 5 ತಿಂಗಳಲ್ಲೂ 'ಮಹೀಂದ್ರಾ ಸ್ಕಾರ್ಪಿಯೋ' ಎಸ್‌ಯುವಿ ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿದೆ. ಮೇನಲ್ಲಿ 14,401 ಯುನಿಟ್, ಏಪ್ರಿಲ್‌ನಲ್ಲಿ 15,534 ಯುನಿಟ್, ಮಾರ್ಚ್‌ನಲ್ಲಿ 13,913 ಯುನಿಟ್, ಫೆಬ್ರವರಿಯಲ್ಲಿ 13,618 ಯುನಿಟ್ ಹಾಗೂ ಜನವರಿವಲ್ಲಿ 15,442 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಸದ್ಯ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿ, ಸ್ಕಾರ್ಪಿಯೋ ಎನ್ ಹಾಗೂ ಸ್ಕಾರ್ಪಿಯೋ ಕ್ಲಾಸಿಕ್ ಎಂಬ 2 ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಜೊತೆಗೆ ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಹೆಚ್ಚು ಆಸನಗಳನ್ನು ಹೊಂದಿದ್ದು, ಒಂದು ತುಂಬು ಕುಟುಂಬ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು.

Mahindra Scorpio Suv June 2025 Sales Details

ಮಹೀಂದ್ರಾ ಸ್ಕಾರ್ಪಿಯೋ ಎನ್ ವಿಶೇಷತೆಗಳೇನು:

ಈ ಎಸ್‌ಯುವಿ ರೂ.13.99 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. ಮಿಡ್‌ನೈಟ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಡೀಪ್ ಫಾರೆಸ್ಟ್ ಮತ್ತು ನಪೋಲಿ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

ನೂತನ ಸ್ಕಾರ್ಪಿಯೋ ಎನ್ 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 12 ರಿಂದ 15 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಹಾಗೂ ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಹೇಗಿದೆ:

ಈ ಎಸ್‌ಯುವಿ ಕನಿಷ್ಠ ರೂ.13.77 ಲಕ್ಷ ಹಾಗೂ ಗರಿಷ್ಠ ರೂ.17.72 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಸ್ ಮತ್ತು ಎಸ್11 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಸ್ಟೆಲ್ತ್ ಬ್ಲ್ಯಾಕ್, ಮಾಲ್ಟನ್ ರೆಡ್ ರೇಜ್, ಗ್ಯಾಲಕ್ಸಿ ಗ್ರೇ, ನಪೋಲಿ ಬ್ಲ್ಯಾಕ್, ಡಿಸ್ಯಾಟ್ ಸಿಲ್ವರ್ ಹಾಗೂ ಎವರೆಸ್ಟ್ ವೈಟ್ ಎಂಬ ಬಣ್ಣಗಳನ್ನು ಪಡೆದಿದೆ.

ಇದು 2.2-ಲೀ. ಡೀಸೆಲ್ ಎಂಜಿನ್ ಹೊಂದಿದ್ದು, 16 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7/ 9 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಟೋಮೆಟಿಕ್-ಕ್ಲೇಮೇಟ್ ಕಂಟೋಲ್, ಕೀಲೆಸ್ ಎಂಟ್ರಿ, ಸೆಂಟ್ರಲ್ ಕನ್ಸೋಲ್ ಆರ್ಮ್‌ರೆಸ್ಟ್, ಪವರ್ ಸ್ಟೀರಿಂಗ್ ಮತ್ತು ರೂಫ್ ಮೌಂಟೆಡ್ ಸನ್‌ಗ್ಲಾಸ್ ಹೋಲ್ಡರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್-ಫ್ರಂಟ್ ಏರ್‌ಬ್ಯಾಗ್‌ನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Monday, July 7, 2025, 10:30 [IST]
English summary
Mahindra scorpio suv june 2025 sales details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+