Mahindra Scorpio: 7-ಸೀಟರ್.. 13 ಲಕ್ಷ, ಮಹೀಂದ್ರಾ ಸ್ಕಾರ್ಪಿಯೋಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!

ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಜಗಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. 2002 ರಿಂದಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಖರೀದಿದಾರರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಸ್ಕಾರ್ಪಿಯೋ' ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿದೆ. ಸರಿ ಸುಮಾರು 18,107 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 15,877 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 14% ಪ್ರಗತಿಯಾಗಿದೆ.

ಈ ಅಕ್ಟೋಬರ್‌ನಲ್ಲಿ 'ಮಹೀಂದ್ರಾ ಸ್ಕಾರ್ಪಿಯೋ' ಮಾರಾಟವು ಧನಾತ್ಮಕವಾಗಿರಲು ಹಲವು ಕಾರಣಗಳಿವೆ. ವಿಶೇಷವಾಗಿ ಸೆ.22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, 'ಸ್ಕಾರ್ಪಿಯೋ' ಬೆಲೆಯೂ ಇಳಿಕೆಯಾಗಿದೆ. ಜೊತೆಗೆ ದೀಪಾವಳಿ ಹಬ್ಬವಿದ್ದರಿಂದ ಗ್ರಾಹಕರು ಸಹ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಹೀಗಾಗಿ, ಮಾರಾಟ ಸಂಖ್ಯೆಯಲ್ಲಿ ಏರಿಕೆ ಕಾಣಲಾಗಿದೆ.

Mahindra Scorpio Suv October 2025 Sales Details

ಹೊಚ್ಚ ಹೊಸ 'ಮಹೀಂದ್ರಾ ಸ್ಕಾರ್ಪಿಯೋ' ಎರಡು ವಿಧದಲ್ಲಿ ಲಭ್ಯವಿದೆ. ಅವುಗಳೆಂದರೆ ಸ್ಕಾರ್ಪಿಯೋ ಎನ್ ಹಾಗೂ ಸ್ಕಾರ್ಪಿಯೋ ಕ್ಲಾಸಿಕ್. ಇವು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗುತ್ತವೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ವಿಶೇಷತೆಗಳೇನು:

ಇದು ಕನಿಷ್ಠ ರೂ.13.20 ಲಕ್ಷ ಹಾಗೂ ಗರಿಷ್ಠ ರೂ.24.17 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಡ್2, ಜಡ್4 ಮತ್ತು ಜಡ್8 ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಉತ್ತಮವಾದ ವಿನ್ಯಾಸ ಹೊಂದಿದ್ದು, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು ಮತ್ತು 18 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

Mahindra Scorpio Suv October 2025 Sales Details

ಈ ಕಾರು 4,662 ಮಿ.ಮೀ ಉದ್ದ, 1,917 ಮಿ.ಮೀ ಅಗಲ ಮತ್ತು 1,857 ಮಿ.ಮೀ ಎತ್ತರವಿದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,750 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 6/7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 460 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

ನೂತನ 'ಸ್ಕಾರ್ಪಿಯೋ ಎನ್' 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 12 ರಿಂದ 16 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 57 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic): ಕೂಡ ಖರೀದಿಗೆ ಲಭ್ಯ:

ಈ ಎಸ್‌ಯುವಿಯು ರೂ.12.97 ಲಕ್ಷದಿಂದ ರೂ.16.70 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 14 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 14 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ 'ಸ್ಕಾರ್ಪಿಯೋ ಕ್ಲಾಸಿಕ್' ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ವೈಟ್, ಗ್ಯಾಲಕ್ಸಿ ಗ್ರೇ & ಡಿಸ್ಯಾಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 7/9 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು 2 ಏರ್‌ಬ್ಯಾಗ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

More from DriveSpark

Article Published On: Tuesday, November 11, 2025, 16:17 [IST]
English summary
Mahindra scorpio suv october 2025 sales details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+