Mahindra: 7-ಸೀಟರ್.. 13 ಲಕ್ಷ, 'ಮಹೀಂದ್ರಾ ಸ್ಕಾರ್ಪಿಯೋ'ಗೆ ಮುಗಿಬಿದ್ದ ಗ್ರಾಹಕರು.. ಬಿಸಿ ಜಿಲೇಬಿಯಂತೆ ಮಾರಾಟ!

ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಪ್ರಮುಖ ಎಸ್‌ಯುವಿಯಾಗಿದೆ. ಇದು ಸಖತ್ ಆಗಿರುವ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ,ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಏಪ್ರಿಲ್ ತಿಂಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಇದರಲ್ಲಿ ಸ್ಕಾರ್ಪಿಯೋ ಎಸ್‌ಯುವಿಯು ಇದ್ದು, 5ನೇ ಸ್ಥಾನದಲ್ಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಏಪ್ರಿಲ್-2025) ಮಹೀಂದ್ರಾ ಕಂಪನಿಯು ಬರೋಬ್ಬರಿ 15,534 ಯುನಿಟ್‌ 'ಸ್ಕಾರ್ಪಿಯೋ' ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. ಅದೇ ರೀತಿಯಲ್ಲಿ ಮಾರ್ಚ್‌ನಲ್ಲಿ ಮಾರಲ್ಪಟ್ಟ 13,913 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ತಿಂಗಳಿಂದ ತಿಂಗಳಿಗೆ ಕೊಂಚ ಮಟ್ಟಿಗೆ ಸುಧಾರಿಸಿದೆ ಎಂದು ಹೇಳಬಹುದು.

Mahindra Scorpio Suv Sales April 2025 Details

ಇದೇ ವರ್ಷದ ಫೆಬ್ರವರಿಯಲ್ಲಿ 13,618 ಯುನಿಟ್ ಹಾಗೂ ಜನವರಿ ತಿಂಗಳಲ್ಲಿ 15,442 ಯುನಿಟ್ ಮಹೀಂದ್ರಾ ಸ್ಕಾರ್ಪಿಯೋ ಕಾರುಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಸಂಖ್ಯೆಗೆ ಲೆಕ್ಕಹಾಕಿದಾಗ ಪ್ರತಿ ತಿಂಗಳು ಸರಾಸರಿ 14,000 ಯುನಿಟ್ ಸ್ಕಾರ್ಪಿಯೋ ಎಸ್‌ಯುವಿಗಳು ಮಾರಾಟಗೊಂಡಿವೆ. ನೂತನ ಸ್ಕಾರ್ಪಿಯೋ ಹೆಚ್ಚು ಆಸನಗಳೊಂದಿಗೆ ಸಾಕಷ್ಟು ಅತ್ಯಾಧುನಿಕವಾಗಿದೆ. ಇದರಿಂದಲೇ ಮಾರಾಟ ಸಂಖ್ಯೆ ಅಧಿಕಗೊಳ್ಳುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಹೀಂದ್ರಾ ಸ್ಕಾರ್ಪಿಯೋ ಎರಡು ರೂಪದಲ್ಲಿ ಖರೀದಿಗೆ ಲಭ್ಯ..

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N): ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ರೂ.13.99 ಲಕ್ಷದಿಂದ ರೂ.24.89 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 6/ 7 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 460 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Mahindra Scorpio Suv Sales April 2025 Details

ಈ ಸ್ಕಾರ್ಪಿಯೋ ಎನ್ 2.2-ಲೀ. ಡೀಸೆಲ್ ಹಾಗೂ 2-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 14 ರಿಂದ 15 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸ ಪಡೆದಿದ್ದು, ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್ & ನಾಪೋಲಿ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic): ಈ ಎಸ್‌ಯುವಿಯು ರೂ.13.62 ಲಕ್ಷದಿಂದ ರೂ.17.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 7/ 9 ಆಸನಗಳಿದ್ದು, ಒಂದು ತುಂಬು ಕುಟುಂಬ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಜೊತೆಗೆ 460 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 16 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹೊರಭಾಗದಲ್ಲೂ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಗ್ಯಾಲಕ್ಸಿ ಗ್ರೇ, ರೆಡ್ ರೇಜ್, ಎವರೆಸ್ಟ್ ವೈಟ್ ಮತ್ತು ಡೈಮಂಡ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, May 12, 2025, 10:58 [IST]
English summary
Mahindra scorpio suv sales april 2025 details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+