682 ಕಿ.ಮೀವರೆಗೆ ರೇಂಜ್.. 5-ಸೀಟರ್, ಈ ಮಹೀಂದ್ರಾ SUVಗಳಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!

ಮಹೀಂದ್ರಾ (Mahindra) ನಂಬಿಕಾರ್ಹ ಸ್ವದೇಶಿ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಎಕ್ಸ್ಇವಿ 9ಇ (XEV 9e) ಹಾಗೂ ಬಿಇ 6 (BE 6) ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿವೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಕಾರುಗಳ ಮಾರಾಟದಲ್ಲಿ ಕಂಪನಿಯು ಹೊಸ ಇತಿಹಾಸವನ್ನು ಬರೆದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ವಿದೇಶಿ ಕಂಪನಿಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಮಹೀಂದ್ರಾ, 2024ರ ನವೆಂಬರ್‌ನಲ್ಲಿ ಈ 'ಎಕ್ಸ್ಇವಿ 9ಇ' ಮತ್ತು 'ಬಿಇ 6' ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಲಾಗಿತ್ತು. 2025ರ ಮಾರ್ಚ್ ತಿಂಗಳಲ್ಲಿ ವಿತರಣೆಯನ್ನು ಪ್ರಾರಂಭಿಸಲಾಗಿತ್ತು. ಕೇವಲ 7 ತಿಂಗಳಲ್ಲಿ 30,000ಕ್ಕೂ ಅಧಿಕ ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಲಾಗಿದೆ.

Mahindra sold 30 000 XEV 9e And BE 6 electric SUVs Details

ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e) ವಿಶೇಷತೆಗಳೇನು:

ಇದು ರೂ.22.40 ಲಕ್ಷದಿಂದ ರೂ.31.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ನೆಬ್ಯುಲಾ ಬ್ಲೂ, ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಎವರೆಸ್ಟ್ ವೈಟ್ ಸ್ಯಾಟಿನ್, ಡೆಸರ್ಟ್ ಮಿಸ್ಟ್ ಸ್ಯಾಟಿನ್ ಮತ್ತು ಡೆಸರ್ಟ್ ಮಿಸ್ಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಎಕ್ಸ್ಇವಿ 9ಇ' 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 542 ರಿಂದ 656 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 202 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದ್ದು, 6.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Mahindra sold 30 000 XEV 9e And BE 6 electric SUVs Details

ಈ ಎಲೆಕ್ಟ್ರಿಕ್ ಕಾರು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 663 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇಗಾಗಿ 12.3 ಇಂಚಿನ ಸ್ಕ್ರೀನ್ ಹಾಗೂ ಮಲ್ಟಿ-ಝೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಮಹೀಂದ್ರಾ ಬಿಇ 6 (Mahindra BE 6) ಹೇಗಿದೆ:

ಇದು ರೂ.18.90 ಲಕ್ಷದಿಂದ ರೂ.27.79 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎವರೆಸ್ಟ್ ವೈಟ್, ಡೆಸರ್ಟ್ ಮಿಸ್ಟ್, ಡೀಪ್ ಫಾರೆಸ್ಟ್, ಟ್ಯಾಂಗೋ ರೆಡ್, ಫೈರ್‌ಸ್ಟಾರ್ಮ್ ಆರೆಂಜ್ ಹಾಗೂ ಡೆಸರ್ಟ್ ಮಿಸ್ಟ್ ಸ್ಯಾಟಿನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಬಿಇ 6' ಕಾರು 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 556 ರಿಂದ 682 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 202 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 6.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಎಲೆಕ್ಟ್ರಿಕ್ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಟೂ ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಸೀಟ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Saturday, November 8, 2025, 15:00 [IST]
English summary
Mahindra sold 30000 xev 9e and be 6 electric suvs details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+