ನಿನ್ನೆಯಷ್ಟೇ ಬಿಡುಗಡೆ: 4-ಸೀಟರ್.. ಬೆಲೆಯೂ ಕಮ್ಮಿ, ಹೊಸ Mahindra Thar ಕುರಿತ ಪ್ರಮುಖಾಂಶಗಳಿವು!
ನಿನ್ನೆ 2025ರ ನೂತನ ಮಹೀಂದ್ರಾ ಥಾರ್ 3-ಡೋರ್ ಫೇಸ್‌ಲಿಫ್ಟ್ (Mahindra Thar 3-Door Facelift) ಆಫ್-ರೋಡ್ ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಸ್ಪರ್ಧಾತ್ಮಕ ದರದಲ್ಲೂ ಲಭ್ಯವಿದೆ. ಇದಕ್ಕೆ ಫೋರ್ಸ್ ಗೂರ್ಖಾ ಹಾಗೂ ಮಾರುತಿ ಸುಜುಕಿ ಜಿಮ್ನಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ನಾವಿಲ್ಲಿ ಈ ಹೊಚ್ಚ ಹೊಸ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿಯೂ ದೊರೆಯುತ್ತದೆ. ರೂ.9.99 ಲಕ್ಷದಿಂದ ರೂ.16.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತಿ ಶೀಘ್ರದಲ್ಲೇ ವಿತರಣೆಗಳು ಶುರುವಾಗುವ ನಿರೀಕ್ಷೆಯಿದೆ. ಎಎಕ್ಸ್‌ಟಿ ಮತ್ತು ಎಲ್ಎಕ್ಸ್‌ಟಿ ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಅತ್ಯುತ್ತಮವಾದ ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ನವೀನವಾದ ಫ್ರಂಟ್ ಗ್ರಿಲ್, ಐಕಾನಿಕ್ ಡುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 18 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಬ್ಯಾಟಲ್‌ಶಿಪ್ ಗ್ರೇ, ಟ್ಯಾಂಗೋ ರೆಡ್, ಡೀಪ್ ಫಾರೆಸ್ಟ್, ಗ್ಯಾಲಕ್ಸಿ ಗ್ರೇ & ಸ್ಟೀಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಆಸನ ಆಯ್ಕೆ & ಸುತ್ತಳತೆ (Seating Capacity & Dimensions):
ನೂತನ ಮಹೀಂದ್ರಾ ಥಾರ್ 3-ಡೋರ್ ಫೇಸ್‌ಲಿಫ್ಟ್ ಎಸ್‌ಯುವಿಯು 4 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 3,985 ಎಂಎಂ ಉದ್ದ, 1,820 ಎಂಎಂ ಅಗಲ ಹಾಗೂ 1,855 ಎಂಎಂ ಎತ್ತರವಿದೆ. ಜೊತೆಗೆ 226 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):
ಈ ಕಾರು ಶಕ್ತಿಯುತವಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 150 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 300/ 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಿತ್ತದೆ. 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ಮತ್ತು 4ಡಬ್ಲ್ಯೂಡಿ (4 ವೀಲ್ ಡ್ರೈವ್) ಟೆಕ್ನಾಲಾಜಿಯನ್ನು ತನ್ನದಾಗಿಸಿಕೊಂಡಿದೆ.
ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್, 117 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್ ಟೆಕ್ನಾಲಾಜಿಯನ್ನು ಹೊಂದಿದೆ.

ಮತ್ತೊಂದು 2.2-ಲೀಟರ್ ಡೀಸೆಲ್ ಎಂಜಿನ್, 132 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಿತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 4ಡಬ್ಲ್ಯೂಡಿ (4 ವೀಲ್ ಡ್ರೈವ್) ಟೆಕ್ನಾಲಾಜಿಯನ್ನು ಪಡೆದಿದೆ.
ವೈಶಿಷ್ಟ್ಯಗಳು (Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4 ಸ್ಪೀಕರ್ ಸೌಂಡ್ ಸಿಸ್ಟಮ್, ಸ್ಲೈಡಿಂಗ್ ಆರ್ಮ್‌ರೆಸ್ಟ್, ರೇರ್ ವಾಶ್ & ವೈಪರ್, ಟೈಪ್-ಸಿ ಯುಎಸ್‌ಬಿ ಪೋರ್ಟ್‌ಗಳು, ಮ್ಯಾನುವಲ್ ಎಸಿ, ರಿಮೋಟ್ ಕೀಲೆಸ್ ಎಂಟ್ರಿ, ರೇರ್ ಎಸಿ ವೆಂಟ್‌ಗಳು ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್, ರೇರ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ ಹೋಲ್ಡ್ ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್‌ನ್ನು ಹೊಂದಿದೆ.


Click it and Unblock the Notifications








