ಆನಂದ್ ಮಹೀಂದ್ರಾ ಕಂಪನಿ ತಾಕತ್ತು.. ಹೊಸ ಮೈಲಿಗಲ್ಲು ನಿರ್ಮಾಣ, 2 ಲಕ್ಷ 'ಥಾರ್' ಎಸ್‌ಯುವಿಗಳು ಮಾರಾಟ!

ಪ್ರಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಮಾಲೀಕತ್ವದ ಮಹೀಂದ್ರಾ & ಮಹೀಂದ್ರಾ (Mahindra & Mahindra), ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಕಾರುಗಳು ಸುರಕ್ಷತೆಗೆ ಹೆಸರುವಾಸಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇದೀಗ, ಮಹೀಂದ್ರಾ ಆಫ್-ರೋಡ್ ಎಸ್‌ಯುವಿ 3-ಡೋರ್ 'ಥಾರ್' ಮಾರಾಟದಲ್ಲಿ ಹೊಸ ಇತಿಹಾಸ ಬರೆದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಮಹೀಂದ್ರಾ ಥಾರ್ 3-ಡೋರ್ (Mahindra Thar 3-door) ಎಸ್‌ಯುವಿಯನ್ನು 2020ರಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಅಂದಿನಿಂದಲೇ ಈ ಕಾರಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಇದೇ ಎಸ್‌ಯುವಿ ಮಾರಾಟದಲ್ಲಿ ಅತಿ ದೊಡ್ಡ ಮೈಲಿಗಲ್ಲೊಂದನ್ನು ಸಾಧಿಸಲಾಗಿದ್ದು, ಬರೋಬ್ಬರಿ 2 ಲಕ್ಷ ಯುನಿಟ್ ಥಾರ್ ಮಾರಾಟಗೊಂಡಿವೆ.

Mahindra Thar 3-Door Suv Achieve 2 Lakh Unit Sales Milestone Details

ಮಹೀಂದ್ರಾ ಥಾರ್ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಲು ಅದು ಆಫ್-ರೋಡ್ ಎಸ್‌ಯುವಿಯಾಗಿರುವುದು ಮಾತ್ರವಲ್ಲದೆ, ವಿನ್ಯಾಸ ಸಹ ಪ್ರಮುಖವಾದ ಕಾರಣವಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ 'ಥಾರ್ 3-ಡೋರ್' ಕಾರು, ರೂ.11.35 ಲಕ್ಷದಿಂದ ರೂ.17.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಈ ಥಾರ್ 3-ಡೋರ್ ವಿವಿಧ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.5-ಲೀಟರ್ ಡಿಸೇಲ್ ಎಂಜಿನ್, 118 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 2.2-ಲೀಟರ್ ಡಿಸೇಲ್ ಎಂಜಿನ್, 130 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Mahindra Thar 3-Door Suv Achieve 2 Lakh Unit Sales Milestone Details

ಇನ್ನೊಂದು 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 150 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300/ 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 15.2 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಹೊಸ ಮಹೀಂದ್ರಾ ಥಾರ್ 3-ಡೋರ್ ಎಸ್‌ಯುವಿಯಲ್ಲಿ 4 ಮಂದಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಪವರ್ ವಿಂಡೋಗಳು, ಕೀಲೆಸ್ ಎಂಟ್ರಿ, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು, ರೇರ್ ಡಿಫಾಗರ್ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Mahindra Thar 3-Door Suv Achieve 2 Lakh Unit Sales Milestone Details

ಈ ಥಾರ್ ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್-ಡಿಸೆಂಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಡ್ರೈವರ್ & ಫ್ರಂಟ್ ಪ್ಯಾಸೆಂಜರ್ ಗಾಗಿ ಸೀಟ್ ಬೆಲ್ಟ್ ರಿಮೈಂಡರ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಕೂಡ ಖರೀದಿ ಲಭ್ಯ: ಇದು 5-ಡೋರ್ ಆಯ್ಕೆಯನ್ನು ಹೊಂದಿದ್ದು, ರೂ.12.99 ಲಕ್ಷದಿಂದ ರೂ.22.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ಇದರಲ್ಲಿ 5 ಜನರು ಸುಲಭವಾಗಿ ಪ್ರಯಾಣಿಸಬಹುದು. 10.25 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳ್ನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, January 7, 2025, 12:34 [IST]
English summary
Mahindra thar 3 door suv achieve 2 lakh unit sales milestone details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+