ಅಲ್ಲಿ ನೋಡು ಥಾರ್‌.. ಇಲ್ಲಿ ನೋಡು ಥಾರ್‌.. ಮುಗಿಬಿದ್ದ ಗ್ರಾಹಕರು, ರೆಕಾರ್ಡ್ ಸಂಖ್ಯೆಯಲ್ಲಿ ಮಾರಾಟ!

ಮಹೀಂದ್ರಾ ಥಾರ್‌ (Mahindra Thar) ವಿಶ್ವಾಸಾರ್ಹ ಆಫ್-ರೋಡ್ ಎಸ್‍ಯುವಿಯಾಗಿದೆ. ಇದು ನೋಡುಗರ ಸೆಳೆಯುವಂತಹ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಥಾರ್‌ ರಾಕ್ಸ್ ಮತ್ತು 3-ಡೋರ್ ಥಾರ್‌ ಎಂಬ ರೂಪದಲ್ಲಿ ಖರೀದಿಗೆ ಲಭ್ಯವಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2025ರ ಜುಲೈ ತಿಂಗಳು 'ಥಾರ್‌' ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಒಟ್ಟು 9,845 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 4,385 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 125% ಬೆಳವಣಿಗೆಯಾಗಿದೆ.

ಈ ವರ್ಷದ ಮೊದಲ 6 ತಿಂಗಳಲ್ಲೂ ಮಹೀಂದ್ರಾ ಥಾರ್‌ ಎಸ್‍ಯುವಿಯನ್ನು ಉತ್ತಮವಾಗಿಯೇ ಮಾರಾಟ ಮಾಡಲಾಗಿದೆ. ಬರೋಬ್ಬರಿ 58,663 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು 9,777 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ.

Mahindra Thar July 2025 Sales Report

ಮಹೀಂದ್ರಾ ಥಾರ್‌ ರಾಕ್ಸ್ ವಿಶೇಷತೆಗಳೇನು:

ಈ ಎಸ್‍ಯುವಿಯು ರೂ.12.99 ಲಕ್ಷದಿಂದ ರೂ.23.39 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಂಎಕ್ಸ್, ಎಂಎಕ್ಸ್1, ಎಂಎಕ್ಸ್3, ಎಎಕ್ಸ್, ಎಎಕ್ಸ್3ಎಲ್, ಎಎಕ್ಸ್5ಎಲ್ ಮತ್ತು ಎಎಕ್ಸ್7ಎಲ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಟ್ಯಾಂಗೋ ರೆಡ್, ಸ್ಟೆಲ್ತ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡೀಪ್ ಫಾರೆಸ್ಟ್, ನೆಬ್ಯುಲಾ ಬ್ಲೂ ಮತ್ತು ಬ್ಯಾಟಲ್‌ಶಿಪ್ ಗ್ರೇ ಎಂಬ ಬಣ್ಣಗಳನ್ನು ಪಡೆದಿದೆ.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 4428 ಎಂಎಂ ಉದ್ದ, 1870 ಎಂಎಂ ಅಗಲ ಹಾಗೂ 1923 ಎಂಎಂ ಎತ್ತರವು ಕೂಡ ಇದೆ. 226 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Mahindra Thar July 2025 Sales Report

ನೂತನ 'ರಾಕ್ಸ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.0 ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2 ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 12.4 ರಿಂದ 15.2 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 57 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಈ ಕಾರು 5 ಆಸನಗಳನ್ನು ಪಡೆದಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Mahindra Thar July 2025 Sales Report

ಮಹೀಂದ್ರಾ ಥಾರ್‌ ಹೇಗಿದೆ:

ಇದು 3-ಡೋರ್ ಎಸ್‍ಯುವಿಯಾಗಿದೆ. ರೂ.11.50 ಲಕ್ಷದಿಂದ ರೂ.17.62 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎವರೆಸ್ಟ್ ವೈಟ್, ರೆಡ್ ರೇಜ್, ಅಕ್ವಾಮೆರೈನ್, ಗ್ಯಾಲಕ್ಸಿ ಗ್ರೇ ಹಾಗೂ ಅರ್ಥ್ ಎಡಿಷನ್ ಬೀಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 4 ಆಸನಗಳನ್ನು ಒಳಗೊಂಡಿದೆ.

ಈ ಕಾರು ಸಹ ಶಕ್ತಿಯುತವಾದ ಪವರ್‌ಟ್ರೇನ್‌ ಆಯ್ಕೆಯನ್ನು ಪಡೆದಿದೆ. 1.5-ಲೀಟರ್ ಡೀಸೆಲ್, 2.2-ಲೀಟರ್ ಡೀಸೆಲ್ ಹಾಗೂ 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6-ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 15.20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ ಹಾಗೂ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Tuesday, August 12, 2025, 8:30 [IST]
English summary
Mahindra thar july 2025 sales report
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+