Tata: ವರ್ಷಾಂತ್ಯದ ವೇಳೆಗೆ ಥಾರ್ ಪ್ರತಿಸ್ಪರ್ಧಿ ಲಕ್ಷುರಿ ಫೀಚರ್‌ನ ಹೊಸ 'ಟಾಟಾ ಸಿಯೆರಾ' ಬಿಡುಗಡೆ.. 10 ಲಕ್ಷ ಬೆಲೆ?

ಟಾಟಾ ಮೋಟಾರ್ಸ್ (Tata Motors) ಬಹುನಿರೀಕ್ಷಿತ ಹೊಚ್ಚ ಹೊಸ ಸಿಯೆರಾ (Sierra) ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ದೊಡ್ಡಮಟ್ಟದಲ್ಲಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಕಳೆದ ಜನವರಿಯಲ್ಲಿ ಅದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ನೂತನ ಸಿಯೆರಾ ಕಾರನ್ನು ಪ್ರದರ್ಶಿಸಲಾಗಿತ್ತು. ಇದು ಎಲ್ಲರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಈ ಮೊದಲು ದೇಶದ ರಸ್ತೆಯಲ್ಲಿ ಹಳೆಯ ಟಾಟಾ ಸಿಯೆರಾ ಎಸ್‌ಯುವಿ 1991 ರಿಂದ 2003ವರೆಗೆ ಪಾರುಪತ್ಯ ಮೆರೆದಿತ್ತು. ಸದ್ಯ, ಹೊಸ ರೂಪದಲ್ಲಿ ಮಾರಾಟಕ್ಕೆ ಬರುತ್ತಿರುವುದು ಗ್ರಾಹಕರಿಗೂ ಹೆಚ್ಚಿನ ಖುಷಿ ನೀಡಿದೆ.

ಈಗಾಗಲೇ ಉತ್ಪಾದನೆಗೆ ಸಿದ್ಧಗೊಂಡಿರುವ ನೂತನ 'ಟಾಟಾ ಸಿಯೆರಾ' ಎಸ್‌ಯುವಿ ಪರೀಕ್ಷಾರ್ಥ ಸಂಚಾರ ನಡೆಸುವಾಗಲೂ ಕಂಡುಬಂದಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಮಹೀಂದ್ರಾ ಥಾರ್ ಹಾಗೂ ಮಾರುತಿ ಸುಜುಕಿ ಜಿಮ್ನಿಗೆ ಪ್ರಬಲವಾದ ಪ್ರತಿಸ್ಪರ್ಧಿಯಾಗಬಲ್ಲ ಈ ಸಿಯೆರಾ ಕಾರು, ಇದೇ ವರ್ಷಾಂತ್ಯದೊಳಗೆ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಆರಂಭದಲ್ಲಿ ಇಂಧನ ಚಾಲಿತ ಮಾಡೆಲ್‌ನ್ನು ಹೊರತರಲಾಗುತ್ತದೆ. ಆ ಬಳಿಕ, ಎಲೆಕ್ಟ್ರಿಕ್ ಚಾಲಿತ ಮಾಡೆಲ್‌ನ್ನು ಪರಿಚಯಿಸಲಾಗುತ್ತದೆ ಎಂದು ಹೇಳಲಾಗಿದೆ.

Mahindra Thar Rival Tata Sierra Suv Launch By Year End Expected Price And Features Details

ಇಂಧನ/ಎಲೆಕ್ಟ್ರಿಕ್ ಆಧಾರಿತ ಟಾಟಾ ಸಿಯೆರಾ (Tata Sierra) ಎಸ್‌ಯುವಿಗಳು ಬಹುತೇಕ ಒಂದೇ ರೀತಿಯ ವಿನ್ಯಾಸವನ್ನು ಹೊಂದಿರಲಿವೆ. ಅದು ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಮಾಡೆಲ್‌ನಿಂದ ದೃಢಪಟ್ಟಿದೆ. ಹೊಸ ಸಿಯೆರಾ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು, ಬಾಡಿ ಕಲರ್ ಬಿ-ಪಿಲ್ಲರ್‌ಗಳು & ಕನೆಕ್ಟ್ಡ್ ಎಲ್ಇಡಿ ಲೈಟ್ ಸೆಟಪ್‌ನ್ನು ಒಳಗೊಂಡಿದೆ.

ಟಾಟಾ ಸಿಯೆರಾ ಎಸ್‌ಯುವಿಯ ಇಂಧನ ಚಾಲಿತ ಮಾಡೆಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿರುವ ಸಾಧ್ಯತೆಯಿದ್ದು, ಸರಿ ಸುಮಾರು 18 ರಿಂದ 20 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಹುದು ಎನ್ನಲಾಗಿದೆ. ಎಲೆಕ್ಟ್ರಿಕ್ ಚಾಲಿತ ಮಾಡೆಲ್, ದೊಡ್ಡದಾದ ಬ್ಯಾಟರಿ ಪ್ಯಾಕ್ ಪಡೆದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌‌ವರೆಗೂ ಓಡುವ ನಿರೀಕ್ಷೆಯಿದೆ.

Mahindra Thar Rival Tata Sierra Suv Launch By Year End Expected Price And Features Details

ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಬಹುಮುಖ್ಯವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ಮಲ್ಟಿ ಕಲರ್ ಆಂಬಿಯೆಂಟ್ ಲೈಟಿಂಗ್, ಪ್ರೀಮಿಯಂ ಆಡಿಯೊ ಸಿಸ್ಟಮ್ ಹಾಗೂ ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ನೂತನ ಸಿಯೆರಾ ಎಸ್‌ಯುವಿ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.

Mahindra Thar Rival Tata Sierra Suv Launch By Year End Expected Price And Features Details

ಹೊಸ ಟಾಟಾ ಸಿಯೆರಾ ಎಸ್‌ಯುವಿ, 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಜೊತೆಗೆ 4 ಬಾಗಿಲುಗಳನ್ನು ಒಳಗೊಂಡಿದೆ. ಇಂಧನ ಚಾಲಿತ ಮಾಡೆಲ್ ರೂ.10 ಲಕ್ಷದಿಂದ ರೂ.13 ಲಕ್ಷ ಬೆಲೆಯನ್ನು ಹೊಂದುರುವ ನಿರೀಕ್ಷೆಯಿದೆ. ಎಲೆಕ್ಟ್ರಿಕ್ ಚಾಲಿತ ಮಾಡೆಲ್ ರೂ.25 ರಿಂದ 30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, March 25, 2025, 14:48 [IST]
English summary
Mahindra thar rival tata sierra suv launch by year end expected price and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+