Mahindra: ಕಂಪನಿಯೇ ಲೆಕ್ಕ ಹಾಕಿರಲಿಲ್ಲ.. ಈ ಎಲೆಕ್ಟ್ರಿಕ್ ಕಾರುಗಳಿಗಾಗಿ 1 ದಿನದಲ್ಲಿ 30,000ಕ್ಕೂ ಅಧಿಕ ಬುಕ್ಕಿಂಗ್!
ಪ್ರಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಮಾಲೀಕತ್ವದ ಮಹೀಂದ್ರಾ (Mahindra) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿದೆ. ಕಳೆದ ವರ್ಷದ ಕೊನೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ವಿದೇಶಿ ಕಾರುಗಳಿಗೆ ಪ್ರಬಲವಾದ ಪೈಪೋಟಿಯೊಡ್ಡುವ ರೀತಿಯಲ್ಲಿ ಹೊಚ್ಚ ಹೊಸ ಎಕ್ಸ್ಇವಿ 9ಇ (XEV 9e) ಹಾಗೂ ಬಿಇ 6 (BE 6) ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಿತ್ತು. ಶುಕ್ರವಾರ ಈ ನೂತನ ಕಾರುಗಳನ್ನು ಬುಕ್ಕಿಂಗ್‌ನ್ನು ತೆಗೆದುಕೊಳ್ಳುವುದನ್ನು ಪ್ರಾರಂಭಿಸಿತ್ತು. ಗ್ರಾಹಕರಿಂದಲೂ ನೀರಿಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯಲ್ಲಿ ಆರ್ಡರ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನಿನ್ನೆ ಮಾತ್ರವೇ ನೂತನ ಮಹೀಂದ್ರಾ ಎಕ್ಸ್ಇವಿ 9ಇ ಮತ್ತು ಬಿಇ 6 ಎಲೆಕ್ಟ್ರಿಕ್ ಕಾರುಗಳಿಗಾಗಿ ಬರೋಬ್ಬರಿ 30,179 ಬುಕ್ಕಿಂಗ್‌ಗಳನ್ನು ಪಡೆದುಕೊಲ್ಲಿವಲ್ಲಿ ಕಂಪನಿಯು ಯಶಸ್ವಿಯಾಗಿದೆ. ಈ ಮೂಲಕ ಸರಿ ಸುಮಾರು ರೂ.8,472 (ಎಕ್ಸ್-ಶೋರೂಂ) ಕೋಟಿ ಮೊತ್ತದ ವ್ಯವಹಾರ ಮಾಡಲಾಗಿದೆ.

ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e) ವಿಶೇಷತೆಗಳೇನು: ಈ ಎಲೆಕ್ಟ್ರಿಕ್ ಎಸ್‌ಯುವಿ ರೂ.21.90 ಲಕ್ಷದಿಂದ ರೂ.30.50 ಲಕ್ಷ ಎಕ್ಸ್- ಶೋರೂಂ ಬೆಲೆಯನ್ನು ಹೊಂದಿದೆ. ಸ್ಟೆಲ್ತ್ ಬ್ಲ್ಯಾಕ್, ನೆಬ್ಯುಲಾ ಬ್ಲೂ, ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಎವರೆಸ್ಟ್ ವೈಟ್ ಸ್ಯಾಟಿನ್, ಡೆಸರ್ಟ್ ಮಿಸ್ಟ್ ಸ್ಯಾಟಿನ್ ಹಾಗೂ ಡೆಸರ್ಟ್ ಮಿಸ್ಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ 'ಎಕ್ಸ್ಇವಿ 9ಇ' ಎಲೆಕ್ಟ್ರಿಕ್ ಕಾರು, 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 656 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಬ್ಯಾಟರಿಯು ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ ಕೇವಲ 20 ನಿಮಿಷಗಳಲ್ಲಿ 20 ರಿಂದ 80% ಚಾರ್ಜ್ ಆಗಿ ಬಿಡುತ್ತದೆ.

ನೂತನ ಎಕ್ಸ್ಇವಿ 9ಇ ಎಲೆಕ್ಟ್ರಿಕ್ ಎಸ್‌ಯುವಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಪ್ಯಾಸೆಂಜರ್-ಸೈಡ್ ಡಿಸ್‌ಪ್ಲೇಗಾಗಿ 12.3-ಇಂಚಿನ ಸ್ಕ್ರೀನ್ ಆಯ್ಕೆಯನ್ನು ಹೊಂದಿದೆ. ಮಲ್ಟಿ-ಝೋನ್ ಆಟೋ ಎಸಿ, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಹೀಂದ್ರಾ ಬಿಇ 6 (Mahindra BE 6) ಹೇಗಿದೆ: ಈ ಕಾರು ರೂ.18.90 ಲಕ್ಷದಿಂದ ರೂ.26.90 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. ನೂತನ ಬಿಇ 6 ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಹೆಡ್‌ಲ್ಯಾಂಪ್‌ಗಳು, 'ಜೆ' ರೀತಿಯಲ್ಲಿರುವ ಡಿಆರ್‌ಎಲ್‌ಗಳು, 20-ಇಂಚಿನ ವೀಲ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ.
ಈ ಬಿಇ 6 ಎಲೆಕ್ಟ್ರಿಕ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು. ಇದು ಶಕ್ತಿಯುತವಾದ 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 535 ರಿಂದ 682 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.
ಹೊಸ ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಕಾರು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್, ಟೂ-ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ ಫಾಬ್‌ಗಳು, ವೆಂಟಿಲೇಟೆಡ್ ಸೀಟ್‌ಗಳು ಮತ್ತು ವೈರ್‌ಲೆಸ್ ಚಾರ್ಜರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








