682 Km ರೇಂಜ್.. 5-ಸೀಟರ್, ಬಿಡುಗಡೆಯಾಗಿ ವರುಷ.. ಈ ಮಹೀಂದ್ರಾ SUVಗಳಿಗೆ 1.55 ಲಕ್ಷವರೆಗೆ ಆಫರ್!

ಮಹೀಂದ್ರಾ & ಮಹೀಂದ್ರಾ (Mahindra & Mahindra) ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯವಾಗಿ ಎಕ್ಸ್ಇವಿ 9ಇ (XEV 9e) ಮತ್ತು ಬಿಇ 6 (BE 6) ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಇವೆರೆಡು ಕಾರುಗಳು ಬಿಡುಗಡೆಯಾಗಿ ವರ್ಷ ತುಂಬಿದೆ. ಮೊದಲ ವಾರ್ಷಿಕೋತ್ಸವದ ಸವಿನೆನಪಿಗಾಗಿ ಕಂಪನಿಯು ಬಹುದೊಡ್ಡ ಘೋಷಣೆಯೊಂದನ್ನು ಮಾಡಿದೆ. ಈ ಬಗ್ಗೆ ವಿವಿಧ ಮಾಧ್ಯಮಗಳಲ್ಲೂ ವರದಿಯಾಗಿದೆ.

ಮಹೀಂದ್ರಾ, ಎಕ್ಸ್ಇವಿ 9ಇ ಹಾಗೂ ಬಿಇ 6 ಕಾರುಗಳ ಖರೀದಿ ಮೇಲೆ ರೂ.1.55 ಲಕ್ಷವರೆಗೆ ವಿಶೇಷ ಹಣಕಾಸು ಪ್ರಯೋಜನಗಳು ಲಭ್ಯವಿವೆ. ಇದರಲ್ಲಿ ಆಕ್ಸೆಸರಿ ಪ್ಯಾಕೇಜ್, ಕಾರ್ಪೊರೇಟ್ ಬೋನಸ್, ಫ್ರೀ ಹೋಮ್ ಚಾರ್ಜರ್ ಹಾಗೂ ಲಾಯಲ್ಟಿ ಬೋನಸ್‌ಗಳು ಸಹ ಸೇರಿವೆ. ಈ ಆಫರ್ ಡಿಸೆಂಬರ್ 20ರ ಮುನ್ನ ಡೆಲಿವರಿ ಮಾಡಲ್ಪಡುವ 5,000 ಎಸ್‌ಯುವಿಗಳಿಗೆ ಮಾತ್ರ ಅನ್ವಯವಾಗಲಿದೆ.

Mahindra XEV 9e And BE 6 Suv Get First Anniversary Offer Upto Rs 1 55 Lakh Details

ಪ್ರಪ್ರಥಮ ಬಾರಿಗೆ ನೂತನ ಎಕ್ಸ್ಇವಿ 9ಇ ಮತ್ತು ಬಿಇ 6 ಎಲೆಕ್ಟ್ರಿಕ್ ಕಾರುಗಳನ್ನು 2024ರ ನವೆಂಬರ್‌ನಲ್ಲಿ ಅದ್ದೂರಿಯಾಗಿ ಮಾರಾಟಕ್ಕೆ ತರಲಾಯಿತು. 2025ರ ಮಾರ್ಚ್‌ನಿಂದ ವಿತರಣೆಯನ್ನು ಶುರು ಮಾಡಲಾಯಿತು. ಸರಿ ಸುಮಾರು 7 ತಿಂಗಳಲ್ಲಿಯೇ 30,000ಕ್ಕೂ ಅಧಿಕ ಯುನಿಟ್‌ಗಳನ್ನು ಮಾರಲಾಗಿದೆ. ಈ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ.

ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e) ವಿಶೇಷತೆಗಳೇನು:

ಇದು ರೂ.22.40 ಲಕ್ಷದಿಂದ ರೂ.31.25 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ನೆಬ್ಯುಲಾ ಬ್ಲೂ, ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಎವರೆಸ್ಟ್ ವೈಟ್ ಸ್ಯಾಟಿನ್ ಮತ್ತು ಡೆಸರ್ಟ್ ಮಿಸ್ಟ್ ಸ್ಯಾಟಿನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,775 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು ಶಕ್ತಿಯುತವಾದ 2 ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 59 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 542 ರಿಂದ 656 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 202 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 6.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ನೂತನ 'ಎಕ್ಸ್ಇವಿ 9ಇ' ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 663 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇಗಾಗಿ 12.3 ಇಂಚಿನ ಸ್ಕ್ರೀನ್, ಮಲ್ಟಿ-ಝೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಹೀಂದ್ರಾ ಬಿಇ 6 (Mahindra BE 6) ಹೇಗಿದೆ:

ಇದು ರೂ.18.90 ಲಕ್ಷದಿಂದ ರೂ.27.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ಡೆಸರ್ಟ್ ಮಿಸ್ಟ್, ಡೀಪ್ ಫಾರೆಸ್ಟ್, ಟ್ಯಾಂಗೋ ರೆಡ್, ಫೈರ್‌ಸ್ಟಾರ್ಮ್ ಆರೆಂಜ್, ನಪೋಲಿ ಬ್ಲ್ಯಾಕ್ ಮತ್ತು ಡೆಸರ್ಟ್ ಮಿಸ್ಟ್ ಸ್ಯಾಟಿನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು 59 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 556 ರಿಂದ 682 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೂ ಸ್ಪೋಕ್ ಸ್ಟೀರಿಂಗ್ ವೀಲ್ ಹಾಗೂ ವೆಂಟಿಲೇಟೆಡ್ ಸೀಟ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, November 18, 2025, 16:41 [IST]
English summary
Mahindra xev 9e and be 6 suv get first anniversary offer upto rs 1 55 lakh details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+