656 ಕಿ.ಮೀ ರೇಂಜ್.. 5-ಸೀಟರ್, ಈ ಶಕ್ತಿಶಾಲಿ Mahindra SUV ಕುರಿತ ಪ್ರಮುಖಾಂಶಗಳಿವು!
ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಎಕ್ಸ್ಇವಿ 9ಇ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ವಿನ್ಯಾಸ (Price & Design)
ನೂತನ ಮಹೀಂದ್ರಾ ಎಕ್ಸ್ಇವಿ 9ಇ ಎಲೆಕ್ಟ್ರಿಕ್ ಎಸ್‌ಯುವಿಯು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಕನಿಷ್ಠ ರೂ.22.40 ಲಕ್ಷ ಹಾಗೂ ಗರಿಷ್ಠ ರೂ.31.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 'ಎಲ್' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ 19 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಸುತ್ತಳತೆ (Dimensions):
ಇದು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,789 ಎಂಎಂ ಉದ್ದ, 1,907 ಎಂಎಂ ಅಗಲ ಮತ್ತು 1,694 ಎಂಎಂ ಎತ್ತರವಿದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,775 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 2,201 ಕೆಜಿ ತೂಕವಿದೆ.
ಬಣ್ಣಗಳು, ಆಸನ ಆಯ್ಕೆ & ಬೂಟ್ ಸ್ಪೇಸ್ (Colors, Seating Capacity & Boot Space):
ಹೊಸ ಮಹೀಂದ್ರಾ ಎಕ್ಸ್ಇವಿ 9ಇ ಎಸ್‌ಯುವಿ ಸ್ಟೆಲ್ತ್ ಬ್ಲ್ಯಾಕ್, ನೆಬ್ಯುಲಾ ಬ್ಲೂ, ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಎವರೆಸ್ಟ್ ವೈಟ್ ಸ್ಯಾಟಿನ್, ಡೆಸರ್ಟ್ ಮಿಸ್ಟ್ ಸ್ಯಾಟಿನ್ ಹಾಗೂ ಡೆಸರ್ಟ್ ಮಿಸ್ಟ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 663 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಈ ಕಾರು ಬಲಿಷ್ಠವಾದ ಎರಡು ಪವರ್‌ಟ್ರೇನ್‌ನ್ನು ಹೊಂದಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 542 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರ ಎಲೆಕ್ಟ್ರಿಕ್ ಮೋಟಾರ್ 231 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಮತ್ತೊಂದು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 656 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 286 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ವೈಶಿಷ್ಟ್ಯಗಳು (Features):
ಇದು 202 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇಗಾಗಿ 12.3-ಇಂಚಿನ ಸ್ಕ್ರೀನ್ ಆಯ್ಕೆಯನ್ನು ಹೊಂದಿದೆ. ಮಲ್ಟಿ ಝೋನ್ ಆಟೋ ಎಸಿ, 16 ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಚಾರ್ಜರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ನೂತನ ಮಹೀಂದ್ರಾ ಎಕ್ಸ್ಇವಿ 9ಇ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಅಸಿಸ್ಟ್. ಆಟೋ ಪಾರ್ಕ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications