ಶ್ರೀಸಾಮಾನ್ಯರ ನೆಚ್ಚಿನ ಮಹೀಂದ್ರಾ ಕಾರು ಎಲೆಕ್ಟ್ರಿಕ್ ರೂಪದಲ್ಲಿ ಶೀಘ್ರ ಬಿಡುಗಡೆ: ಬೆಲೆ ಎಷ್ಟು.. ಹೇಗಿರಲಿದೆ?

ಮಹೀಂದ್ರಾ (Mahindra) ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗುವ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಕಾರುಗಳು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಪ್ರಸ್ತುತ ಮಹೀಂದ್ರಾ ಕಂಪನಿಯು ಮಧ್ಯಮ ವರ್ಗದವರ ನೆಚ್ಚಿನ ಕಾರಾಗಿರುವ 'ಎಕ್ಸ್‌ಯುವಿ 3ಎಎಕ್ಸ್ಒ' ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸಲು ಭರದಿಂದ ಸಿದ್ಧತೆಯನ್ನು ನಡೆಸುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಸದ್ಯ ಮಹೀಂದ್ರಾ ಎಕ್ಸ್‌ಯುವಿ 3ಎಎಕ್ಸ್ಒ ಇವಿ (Mahindra XUV 3XO EV) ಎನ್ನಲಾದ ಕಾರೊಂದು ಪ್ರಾಯೋಗಿಕ ಸಂಚಾರ ನಡೆಸುವ ಕಂಡುಬಂದಿದ್ದು, ಅದಕ್ಕೆ ಸಂಬಂಧಿಸಿದ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಈ ನೂತನ ಎಲೆಕ್ಟ್ರಿಕ್ ಕಾರನ್ನು ಎಕ್ಸ್‌ಯುವಿ400 ಇವಿಗೆ ಬದಲಾಗಿ ಮಾರಾಟಕ್ಕೆ ತರಲಾಗುತ್ತದೆ ಎಂದು ಹೇಳಲಾಗಿದೆ.

Mahindra XUV 3XO EV Spotted Launch Soon Expected Price Range And Features Details

ಸ್ಪೈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹೊಸ 'ಎಕ್ಸ್‌ಯುವಿ 3ಎಎಕ್ಸ್ಒ' ಎಲೆಕ್ಟ್ರಿಕ್ ಕಾರು, ಮುಂಭಾಗದ ಎಡ ಭಾಗದಲ್ಲಿರುವ ಫೆಂಡರ್‌ನಲ್ಲಿ ಚಾರ್ಜಿಂಗ್ ಪೋರ್ಟ್‌ನ್ನು ಹೊಂದಿರುವುದನ್ನು ಗುರುತಿಸಬಹುದು. ಇದರೊಟ್ಟಿಗೆ ಹೊಸದಾದ ಗ್ರಿಲ್, ಮರುವಿನ್ಯಾಸಗೊಳಿಸಲಾಗದ ಏರ್ ಡ್ರಮ್, ಹಿಂಭಾಗದ ಬಂಪರ್ ಹಾಗೂ ವಿನೂತನಾಗಿರುವ ಅಲಾಯ್ ವೀಲ್‌ಗಳನ್ನು ಸಹ ಕಾಣಬಹುದು.

ನೂತನ 'ಮಹೀಂದ್ರಾ ಎಕ್ಸ್‌ಯುವಿ 3ಎಎಕ್ಸ್ಒ ಇವಿ'ಯೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿರುವುದರಿಂದ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಪರಿಚಯಿಸಬಹುದು ಎಂದು ಹೇಳಲಾಗಿದೆ. ಈ ಕಾರು 34.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 39.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‍ ಆಯ್ಕೆಯನ್ನು ಒಳಗೊಂಡಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 375 ರಿಂದ 456 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ.

Mahindra XUV 3XO EV Spotted Launch Soon Expected Price Range And Features Details

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಲು ಸಾಧ್ಯವಾಗಲಿದೆ. ಹೊಸ ಎಕ್ಸ್‌ಯುವಿ 3ಎಎಕ್ಸ್ಒ ಇವಿ, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ.

ಹೊಸ ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುವ ಸಾಧ್ಯತೆಯಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಎಕ್ಸ್ಒ ಇವಿ ಬಜೆಟ್ ಬೆಲೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು, ರೂ.15 ಲಕ್ಷದಿಂದ ರೂ.18 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಇದೇ ಮಾರ್ಚ್ ತಿಂಗಳಲ್ಲಿ ಬಿಡುಗಡೆ ಕೂಡ ಆಗಲಿದೆ. ಈ ಕಾರಿಗೆ ಟಾಟಾ ಹಾಗೂ ಎಂಜಿ ಕಂಪನಿಗಳ ಎಲೆಕ್ಟ್ರಿಕ್ ಎಸ್‌ಯುವಿಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Team BHP

More from DriveSpark

Article Published On: Monday, January 13, 2025, 10:18 [IST]
English summary
Mahindra xuv 3xo ev spotted launch soon expected price range and features details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+