21 Km ಮೈಲೇಜ್.. 5 ಸೀಟರ್.. ಈ 'Mahindra Suv' ಬೇಕೆಂದು ಹಠ ಹಿಡಿದ ಗ್ರಾಹಕರು.. ಫುಲ್ ಡಿಮ್ಯಾಂಡ್!
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ದಿನದಿಂದ ದಿನಕ್ಕೆ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದನ್ನು ಪುಷ್ಟಿಕರಿಸುವಂತೆ ಏಪ್ರಿಲ್‌ನಲ್ಲಿ 7,568 ಯುನಿಟ್, ಮಾರ್ಚ್‌ನಲ್ಲಿ 7,055 ಯುನಿಟ್, ಫೆಬ್ರವರಿಯಲ್ಲಿ 7,861 ಯುನಿಟ್ ಹಾಗೂ ಜನವರಿಯಲ್ಲಿ 8,454 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಮೇ ತಿಂಗಳಲ್ಲೂ 'ಎಕ್ಸ್‌ಯುವಿ 3ಎಕ್ಸ್ಒ'ಗೆ ಭಾರೀ ಬೇಡಿಕೆಯಿದ್ದು, ಇದರ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ವಿತರಣೆ ಪಡೆಯಲು ಒಂದಷ್ಟು ಸಮಯ ಕಾಯಲೇಬೇಕು.
ದೇಶಾದ್ಯಂತ ನೂತನ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ' ಕಾರಿನ ಎಂಎಕ್ಸ್1 (MX1) ರೂಪಾಂತರವು ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ. ಇವತ್ತು ಬುಕ್ಕಿಂಗ್ ಮಾಡಿದರೂ 1 ವರ್ಷದ ಬಳಿಕವಷ್ಟೇ ವಿತರಣೆ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಎಂಎಕ್ಸ್2 (MX2) ಹಾಗೂ ಎಂಎಕ್ಸ್2 ಪ್ರೊ (MX2 Pro) ರೂಪಾಂತರಗಳಿಗಾಗಿ ಗ್ರಾಹಕರು 1 ರಿಂದ 3 ತಿಂಗಳವರೆಗೆ ಕಾಯಬೇಕು.

ಎಂಎಕ್ಸ್3 (MX3), ಎಂಎಕ್ಸ್3 ಪ್ರೊ (MX3 Pro) ಹಾಗೂ ಎಎಕ್ಸ್5 (AX5) ರೂಪಾಂತರಗಳು 1 ರಿಂದ 2 ತಿಂಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿವೆ. ಹಾಗೆಯೇ ಎಎಕ್ಸ್5 ಎಲ್ (AX5 L), ಎಎಕ್ಸ್7 (AX7) ಮತ್ತು ಎಎಕ್ಸ್7 ಎಲ್ (AX7 L) ರೂಪಾಂತರಗಳು ಕೇವಲ 1 ತಿಂಗಳಲ್ಲಿ ವಿತರಣೆಯಾಗಿ ಬಿಡುತ್ತವೆ.
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ವಿಶೇಷತೆಗಳೇನು..
ಇದೊಂದು ಪ್ರಮುಖ ಎಸ್‌ಯುವಿಯಾಗಿದ್ದು, ರೂ.7.99 ಲಕ್ಷದಿಂದ ರೂ.15.79 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸಿಟ್ರಿನ್ ಯೆಲ್ಲೋ, ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ನೆಬ್ಯುಲಾ ಬ್ಲೂ ಮತ್ತು ಸ್ಟೆಲ್ತ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಸ್‌ಯುವಿ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್, 1.2-ಲೀ. ಟಿಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಜೊತೆಗೆ 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಇದರಲ್ಲಿ 5 ಆಸನಗಳಿದ್ದು, ದೂರದ ಊರುಗಳಿಗೆ ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 295 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 42 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ನೂತನ ಎಸ್‌ಯುವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್‌ಪ್ಲೇಗಳು, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








