Mahindra: 21 ಕಿ.ಮೀ ಮೈಲೇಜ್.. 5-ಸೀಟರ್, 7.28 ಲಕ್ಷ! ಈ ಮಹೀಂದ್ರಾ SUV ಕುರಿತ ಪ್ರಮುಖಾಂಶಗಳು
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಜಗಮೆಚ್ಚಿದ ಎಸ್‌ಯುವಿಯಾಗಿದೆ. ಇದು ನೋಡಲು ತುಂಬಾ ಚೆನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ಎಕ್ಸ್‌ಯುವಿ 3ಎಕ್ಸ್ಒ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಎಸ್‌ಯುವಿಯ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ, ಮೈಲೇಜ್ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ನೂತನ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ' ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.7.28 ಲಕ್ಷ ಹಾಗೂ ಗರಿಷ್ಠ ರೂ.14.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್2 ಪ್ರೊ, ಎಂಎಕ್ಸ್3, ಎಂಎಕ್ಸ್3 ಪ್ರೊ, ಎಎಕ್ಸ್5 ಮತ್ತು ಎಎಕ್ಸ್5 ಎಲ್ ಸೇರಿದಂತೆ ವಿವಿಧ ರೂಪಾಂತರಗಳೊಂದಿಗೂ ಲಭ್ಯವಿದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಆಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸಿಟ್ರಿನ್ ಯೆಲ್ಲೋ, ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ನೆಬ್ಯುಲಾ ಬ್ಲೂ, ಸ್ಟೆಲ್ತ್ ಬ್ಲ್ಯಾಕ್ ಹಾಗೂ ಟ್ಯಾಂಗೋ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ಈ ಕಾರು ಬಹಳಷ್ಟು ವಿಶಾಲವಾಗಿದೆ. 3,990 ಮಿ.ಮೀ ಉದ್ದ, 1,821 ಮಿ.ಮೀ ಅಗಲ ಮತ್ತು 1,647 ಮಿ.ಮೀ ಎತ್ತರವಿದೆ. 201 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 1,469 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಹೊಸ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ' ಎಸ್‌ಯುವಿ, 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 364 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಕಾರ್ಯಕ್ಷಮತೆ (Performance):
ಇದು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ಎಂಪಿಎಫ್ಐ ಟರ್ಬೊ ಪೆಟ್ರೋಲ್ ಎಂಜಿನ್, 111.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1.2-ಲೀ. ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್, 130 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 230 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಇನ್ನೊಂದು 1.5-ಲೀ. ಡೀಸೆಲ್ ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು 18 ರಿಂದ 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಒಳಾಂಗಣ & ವೈಶಿಷ್ಟ್ಯಗಳು (Interior & Features):
ನೂತನ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ-ಸಿ ಫಾಸ್ಟ್ ಚಾರ್ಜಿಂಗ್ ಪೋರ್ಟ್‌ಗಳು, ಪನೋರಮಿಕ್ ಸನ್‌ರೂಫ್ ಹಾಗೂ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








