Mahindra: ಕಹಿಸುದ್ದಿ.. ಸದ್ದಿಲ್ಲದೇ ಈ ಜನಪ್ರಿಯ ಮಹೀಂದ್ರಾ ಕಾರಿನ 5-ಸೀಟರ್ ಮಾಡೆಲ್‌ಗಳು ಸ್ಥಗಿತ!
ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಜನಪ್ರಿಯ ಫ್ಯಾಮಿಲಿ ಎಸ್‌ಯುವಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರನ್ನು ಟಾಟಾ ಸಫಾರಿಗೆ ಎದುರುಳಿಯಾಗಿ ಮಾರಾಟಗೊಳಿಸಲಾಗುತ್ತದೆ. ಇದು ಅತ್ಯುತ್ತಮವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 'ಎಕ್ಸ್‌ಯುವಿ700' ಎಸ್‌ಯುವಿಯನ್ನು 5, 6 ಹಾಗೂ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಗ್ರಾಹರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ.
ಸದ್ಯ, ಇದೇ ಮಹೀಂದ್ರಾ ಎಕ್ಸ್‌ಯುವಿ700 ಕಾರಿನ 5-ಆಸನ ಆಯ್ಕೆ ವ್ಯವಸ್ಥೆಯೊಂದಿರುವ ಮಾಡೆಲ್‌ಗಳ ಮಾರಾಟವನ್ನು ಸ್ಥಗಿತಗೊಳಿಲಾಗಿದೆ. ಈ ಮಾಡೆಲ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಸಹ ಕಂಪನಿಯ ವೆಬ್‌ಸೈಟ್‌ನಿಂದ ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ. ಎಕ್ಸ್‌ಯುವಿ700ನ 5-ಆಸನವಿರುವ ಮಾಡೆಲ್‌ಗಳು ಎಂಎಕ್ಸ್, ಎಎಕ್ಸ್3 ಮತ್ತು ಎಎಕ್ಸ್5 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದ್ದವು. ರೂ.14 ಲಕ್ಷದಿಂದ ರೂ.19.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದವು.

ಇನ್ಮುಂದೆ ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿಯು 6 ಮತ್ತು 7 ಆಸನದೊಂದಿಗೆ ಮಾತ್ರ ಸಿಗಲಿದ್ದು, ರೂಪಾಂತರಗಳನ್ನು ಅವಲಂಭಿಸಿ ಕನಿಷ್ಠ ರೂ.14.49 ಲಕ್ಷ ಮತ್ತು ಗರಿಷ್ಠ ರೂ.25.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರ ಹೊರತಾಗಿ ಎಕ್ಸ್‌ಯುವಿ700ನ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳಲ್ಲಿ ಸಹ ಯಾವುದೇ ಪ್ರಮುಖವಾದ ಬದಲಾವಣೆಗಳನ್ನು ಮಾಡಲಾಗಿಲ್ಲ.
ನೂತನ ಮಹೀಂದ್ರಾ ಎಕ್ಸ್‌ಯುವಿ700 ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ. ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಎಲೆಕ್ಟ್ರಿಕ್ ಬ್ಲೂ ಮತ್ತು ಮ್ಯಾಟ್ ಬ್ಲೇಜ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು ಸಾಕಷ್ಟು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 17 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 240 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್, 12-ಸ್ಪೀಕರ್ ಆಡಿಯೊ ಸಿಸ್ಟಮ್, ಸನ್‌ರೂಫ್ ಮತ್ತು ಅಲೆಕ್ಸಾ ಕನೆಕ್ಟಿವಿಟಿಯನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಯ ಸಲುವಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಇನ್ನು, ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿಯ 5-ಆಸನದ ಮಾಡೆಲ್‌ಗಳ ಮಾರಾಟವನ್ನು ಸ್ಥಗಿತಗೊಳಿಸಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಬೇಸರವನ್ನು ತರಿಸಿದೆ. ಅದರ ಹೊರತಾಗಿ ಈ ಕಾರು ಒಂದಷ್ಟು ನವೀಕರಣಗಳನ್ನು ಪಡೆದುಕೊಂಡು, ಹೊಸ ಅವತಾರದಲ್ಲಿ ಮುಂದಿನ ವರ್ಷ ಅದ್ದೂರಿಯಾಗಿಯೂ ಬಿಡುಗಡೆಯಾಗುವ ನೀರಿಕ್ಷೆಯಿದೆ. ಅಲ್ಲಿಯವರೆಗೂ ಖರೀದಿದಾರರು ಕಾಯಬೇಕು ಅಷ್ಟೇ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








