Mahindra: ಈ ಫ್ಯಾಮಿಲಿ ಕಾರಿನ ಬೆಲೆ ಭಾರೀ ಇಳಿಕೆ.. 17 Km ಮೈಲೇಜ್, 7 ಜನ ಹೋಗಬಹುದು!
ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಜನಪ್ರಿಯ ಎಸ್‍ಯುವಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಹಾಗೆಯೇ ಫ್ಯಾಮಿಲಿ ಕಾರಾಗಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಂಪನಿಯು ಈ 'ಎಕ್ಸ್‌ಯುವಿ700' ಎಸ್‍ಯುವಿಯನ್ನು ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಿಸಲು ಮುಂದಾಗಿದ್ದು, ಇದೇ ಕಾರಿನ ಆಯ್ದ ರೂಪಾಂತರಗಳ (ವೇರಿಯೆಂಟ್) ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿದೆ.
ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯ ಎಎಕ್ಸ್7 ಎಟಿ (6-ಸೀಟರ್) ಹಾಗೂ ಎಎಕ್ಸ್7 ಎಟಿ (7-ಸೀಟರ್) ರೂಪಾಂತರಗಳ ಬೆಲೆ ರೂ.45,000 ಕಡಿಮೆಯಾಗಿದೆ. ಅದೇ ರೀತಿಯಲ್ಲಿ ಎಎಕ್ಸ್7 ಎಲ್ ಎಟಿ (6-ಸೀಟರ್) ಮತ್ತು ಎಎಕ್ಸ್7 ಎಲ್ ಎಟಿ (7-ಸೀಟರ್) ರೂಪಾಂತರಗಳ ದರ ರೂ.75,000 ಇಳಿಕೆಯಾಗಿದೆ.

ಸದ್ಯ, ದೇಶೀಯವಾಗಿ ಲಭ್ಯವಿರುವ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿ, ಕನಿಷ್ಠ ರೂ.13.99 ಲಕ್ಷ ಹಾಗೂ ಗರಿಷ್ಠ ರೂ.25.74 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು & ಅಲಾಯ್ ವೀಲ್‌ಗಳನ್ನು ಪಡೆದಿದೆ.
ಈ ಕಾರು ಎರಡು ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 2-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 200 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇನ್ನೊಂದು 2.2-ಲೀ. ಡೀಸೆಲ್ ಎಂಜಿನ್, 185 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 450 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ ಎಕ್ಸ್‌ಯುವಿ700 ಎಸ್‌ಯುವಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರು ಮಿಡ್‌ನೈಟ್ ಬ್ಲಾಕ್, ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಎಲೆಕ್ಟ್ರಿಕ್ ಬ್ಲೂ, ಮ್ಯಾಟ್ ಬ್ಲೇಜ್ ರೆಡ್, ಬರ್ನ್ಟ್ ಸಿಯೆನ್ನಾ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಹೊಸ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 12 - ಸ್ಪೀಕರ್ ಆಡಿಯೊ ಸಿಸ್ಟಮ್, ಸನ್‌ರೂಫ್, ಡುಯಲ್ - ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಬಿಲ್ಟ್-ಇನ್ ಅಲೆಕ್ಸಾ ಕನೆಕ್ಟಿವಿಟಿಯನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ನೂತನ ಎಕ್ಸ್‌ಯುವಿ700ಗೆ ಟಾಟಾ ಸಫಾರಿ, ಟಾಟಾ ಹ್ಯಾರಿಯರ್, ಹ್ಯುಂಡೈ ಅಲ್ಕಾಜರ್, ಹ್ಯುಂಡೈ ಕ್ರೆಟಾ ಕಾರುಗಳು ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








