Mahindra: 7-ಸೀಟರ್.. 17 Km ಮೈಲೇಜ್, 13.66 ಲಕ್ಷ.. ಈ ಗಜ ಗಾತ್ರದ ಮಹೀಂದ್ರಾ ಕಾರಿನ ಕುರಿತ ಪ್ರಮುಖಾಂಶಗಳು!

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಜನಪ್ರಿಯ ಫ್ಯಾಮಿಲಿ ಎಸ್‍ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಎಕ್ಸ್‌ಯುವಿ700' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ಎಸ್‌ಯುವಿಯ ಬೆಲೆ ಎಷ್ಟು, ವಿಶೇಷತೆಗಳೇನು ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಮಹೀಂದ್ರಾ ಎಕ್ಸ್‌ಯುವಿ700' ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.13.66 ಲಕ್ಷ ಹಾಗೂ ಗರಿಷ್ಠ ರೂ.23.71 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಎಎಕ್ಸ್3, ಎಎಕ್ಸ್5, ಎಎಕ್ಸ್7, ಹಾಗೂ ಎಎಕ್ಸ್7ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Mahindra XUV700 Suv Price Design Mileage Features And All Top Things

ವಿನ್ಯಾಸ & ಬಣ್ಣಗಳು (Design & Colors):

ಇದು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಎವರೆಸ್ಟ್ ವೈಟ್, ಮಿಡ್‌ನೈಟ್ ಬ್ಲ್ಯಾಕ್, ವ್ಯಾಲಿರಿಯನ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್, ಡೀಪ್ ಫಾರೆಸ್ಟ್, ಬರ್ನ್ಟ್ ಸಿಯೆನ್ನಾ, ರೆಡ್ ರೇಜ್, ಎಲೆಕ್ಟ್ರಿಕ್ ಬ್ಲೂ, ನಪೋಲಿ ಬ್ಲ್ಯಾಕ್ ಮತ್ತು ಬ್ಲೇಜ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಈ ಕಾರು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,695 ಮಿ.ಮೀ ಉದ್ದ, 1,890 ಮಿ.ಮೀ ಅಗಲ ಮತ್ತು 1,755 ಮಿ.ಮೀ ಎತ್ತರವಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,750 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 2,040 ಕೆಜಿ ತೂಕವಿದೆ.

Mahindra XUV700 Suv Price Design Mileage Features And All Top Things

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

'ಮಹೀಂದ್ರಾ ಎಕ್ಸ್‌ಯುವಿ700' ಎಸ್‍ಯುವಿ, 6/7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 240 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 200 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 2.2-ಲೀಟರ್ ಡೀಸೆಲ್ ಎಂಜಿನ್, 185 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 450 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಈ ಕಾರು 17 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

'ಮಹೀಂದ್ರಾ ಎಕ್ಸ್‌ಯುವಿ700' ಕಾರಿನ ವಿನ್ಯಾಸವು ಚೆನ್ನಾಗಿದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 11 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 12 ಸ್ಪೀಕರ್‌ ಆಡಿಯೊ ಸಿಸ್ಟಮ್, ಸನ್‌ರೂಫ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಬಿಲ್ಟ್-ಇನ್ ಅಲೆಕ್ಸಾ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಹಿತದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Sunday, December 7, 2025, 12:22 [IST]
English summary
Mahindra xuv700 suv price design mileage features and all top things
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+