7-ಸೀಟರ್.. ಈ ಜನಪ್ರಿಯ 'Mahindra Suv'ಗೆ ಮುಗಿಬಿದ್ದ ಗ್ರಾಹಕರು.. ಕಾಯುವಿಕೆ ಅವಧಿ ಎಷ್ಟಿದೆ?
ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಪ್ರಮುಖ ಎಸ್‍ಯುವಿಯಾಗಿದೆ. ಈ ಕಾರನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದ್ದು, ದೊಡ್ಡ ಸಂಖ್ಯೆಯಲ್ಲಿಯೇ ಮಾರಾಟವಾಗುತ್ತಿದೆ. ಈ ಮೇನಲ್ಲಿ 'ಎಕ್ಸ್‌ಯುವಿ700'ನ್ನು ವಿತರಣೆ ಪಡೆಯಲು ಗ್ರಾಹಕರು ಒಂದಷ್ಟು ಸಮಯ ಕಾಯಬೇಕಾಗಿತ್ತು. ಅದು ಜೂನ್ ತಿಂಗಳಲ್ಲೂ ಯಥಾಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೊಚ್ಚ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯು ಎಂಎಕ್ಸ್, ಎಎಕ್ಸ್5 ಎಸ್, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಬಹುತೇಕ ಇವೆಲ್ಲ ರೂಪಾಂತರಗಳು 1 ತಿಂಗಳವರೆಗೆ ಕಾಯುವಿಕೆ ಅವಧಿ (Waiting Period) ಹೊಂದಿವೆ.

ಮಹೀಂದ್ರಾ ಎಕ್ಸ್‌ಯುವಿ700 ಮಾರಾಟ ಹೇಗಿದೆ..
ಈ ಎಸ್‍ಯುವಿಯು ಪ್ರತಿ ತಿಂಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಳ್ಳುತ್ತಿದೆ. ಇದೇ ವರ್ಷದ ಮೊದಲ 4 ತಿಂಗಳಲ್ಲಿಯೂ ಖರೀದಿದಾರರು ತಾಮುಂದು - ನಾಮುಂದು ಎಂಬಂತೆ ಕೊಂಡುಕೊಂಡಿದ್ದಾರೆ. ಏಪ್ರಿಲ್‌ನಲ್ಲಿ 6,811 ಯುನಿಟ್, ಮಾರ್ಚ್‌ನಲ್ಲಿ 6,851 ಯುನಿಟ್, ಫೆಬ್ರವರಿಯಲ್ಲಿ 7,468 ಯುನಿಟ್ ಹಾಗೂ ಜನವರಿಯಲ್ಲಿ 8,399 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ.
ನೂತನ ಮಹೀಂದ್ರಾ ಎಕ್ಸ್‌ಯುವಿ700 ವಿಶೇಷತೆಗಳೇನು..
ಇದು ಫ್ಯಾಮಿಲಿ ಕಾರಾಗಿದ್ದು, ಒಂದಷ್ಟು ದುಬಾರಿ ಬೆಲೆಯನ್ನು ಹೊಂದಿದೆ. ರೂ.14.49 ಲಕ್ಷದಿಂದ ರೂ.25.14 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಇದರಲ್ಲಿ 6/ 7 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾದಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 240 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಡಿಆರ್‌ಎಲ್‌ಗಳು, ಫಾಗ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಎಲೆಕ್ಟ್ರಿಕ್ ಬ್ಲೂ ಮತ್ತು ಮ್ಯಾಟ್ ಬ್ಲೇಜ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯನ್ನು ಪಡೆದಿದೆ.
ನೂತನ ಎಸ್‍ಯುವಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ ಬರೋಬ್ಬರಿ 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಇದು ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಬಿಲ್ಟ್-ಇನ್ ಅಲೆಕ್ಸಾ ಕನೆಕ್ಟಿವಿಟಿ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) & 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








