ಬೈಕ್‌ನಂತೆ 30 Km ಮೈಲೇಜ್.. ರೂ.5.99 ಲಕ್ಷಕ್ಕೆ ಲಭ್ಯ, ಈ ಮಾರುತಿ ಕಾರಿಗೆ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಬಲೆನೊ (Maruti Suzuki Baleno), ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಬಲೆನೊ' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಸರಿ ಸುಮಾರು 16,873 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 16,082 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 5% ಬೆಳವಣಿಗೆಯಾಗಿದೆ.

ಕಳೆದ ತಿಂಗಳು (ಅಕ್ಟೋಬರ್ - 2025) ಮಾರುತಿ ಬಲೆನೊ ಮಾರಾಟ ಸಂಖ್ಯೆ ಹೆಚ್ಚಳಗೊಳ್ಳಲು ನಾನಾ ಕಾರಣಗಳಿವೆ. ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಆದರೂ ಎಸ್‌ಯುವಿಗಳಿಗೆ ಸವಾಲೆಸೆಯುವ ರೀತಿಯಲ್ಲಿದೆ. ಸೆಪ್ಟೆಂಬರ್ 22ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಜೊತೆಗೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿಯೂ 'ಬಲೆನೊ' ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Maruti Baleno 16 873 Units Sold In October 2025 Details

ಮಾರುತಿ ಸುಜುಕಿ ಬಲೆನೊ ವಿಶೇಷತೆಗಳೇನು:

ಈ ಕಾರು ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.5.99 ಲಕ್ಷ ಹಾಗೂ ಗರಿಷ್ಠ ರೂ.9.10 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಒಪುಲೆಂಟ್ ರೆಡ್ & ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Maruti Baleno 16 873 Units Sold In October 2025 Details

ನೂತನ 'ಬಲೆನೊ' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,990 ಮಿ.ಮೀ ಉದ್ದ, 1,745 ಮಿ.ಮೀ ಅಗಲ ಮತ್ತು 1,500 ಮಿ.ಮೀ ಎತ್ತರವಿದೆ. ಜೊತೆಗಿದು 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 960 ಕೆಜಿ ತೂಕವಿದೆ.

ಈ ಕಾರು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22.35 ರಿಂದ 22.94 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

Maruti Baleno 16 873 Units Sold In October 2025 Details

ಮತ್ತೊಂದು 1.2-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 77.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 30.61 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೋಲ್ಡ್ ಗ್ಲೋವ್‌ಬಾಕ್ಸ್, ಪವರ್ ಸ್ಟೀರಿಂಗ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ 'ಬಲೆನೊ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Thursday, November 13, 2025, 8:36 [IST]
English summary
Maruti baleno 16873 units sold in october 2025 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+