ಬಡವರ ಕಾರಿದು.. 34 Km ಮೈಲೇಜ್, 4.70 ಲಕ್ಷ.. ಆದರೂ ಗ್ರಾಹಕರು ಖರೀದಿಸುತ್ತಿಲ್ಲ, ಯಾಕೆ?

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹಲವು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಆದರೂ ದಿನದಿಂದ ದಿನಕ್ಕೆ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ. ಅದು ಅಕ್ಟೋಬರ್ ತಿಂಗಳಲ್ಲೂ ಮುಂದುವರಿದಿದೆ. ಸರಿ ಸುಮಾರು 1,322 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಲು ಕಂಪನಿಯು ಯಶಸ್ವಿಯಾಗಿದೆ. 2024ರ ಇದೇ ಅವಧಿಯಲ್ಲಿ 3,044 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -57% ಇಳಿಕೆಯಾಗಿದೆ.

ಕಳೆದ ತಿಂಗಳು (ಅಕ್ಟೋಬರ್-2025) ದೀಪಾವಳಿ ಹಬ್ಬವಿದ್ದರೂ 'ಮಾರುತಿ ಸೆಲೆರಿಯೊ' ಮಾರಾಟ ಸಂಖ್ಯೆ ಕುಸಿತವಾಗಲು ನಾನಾ ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಖರೀದಿದಾರರು, ಮಿಡ್-ಸೈಜ್ ಹಾಗೂ ಕಾಂಪ್ಯಾಕ್ಟ್ ಎಸ್‌ಯುವಿಗಳತ್ತ ಮುಖ ಮಾಡಿದ್ದಾರೆ. ಜೊತೆಗೆ ಈ ಕಾರಿನ ಹೆಚ್ಚು-ಕಮ್ಮಿ ಬೆಲೆಗೆ ಸ್ವತಃ ಮಾರುತಿ ಹಾಗೂ ಇತರೆ ಕಂಪನಿಗಳು ಸಹ ಮತ್ತಷ್ಟು ಅತ್ಯುತ್ತಮವಾದ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡುತ್ತಿವೆ. ಗ್ರಾಹಕರು ಅವುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಇದರಿಂದಾಗಿ 'ಸೆಲೆರಿಯೊ' ಮಾರಾಟವು ಇಳಿಮುಖವಾಗುತ್ತಿದೆ ಎಂದು ಹೇಳಲಾಗಿದೆ.

Maruti Celerio October 2025 Sales Details

ಮಾರುತಿ ಸುಜುಕಿ ಸೆಲೆರಿಯೊ ವಿಶೇಷತೆಗಳೇನು:

ಈ ಕಾರು ಅಗ್ಗದ ದರದಲ್ಲೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.4.70 ಲಕ್ಷ ಹಾಗೂ ಗರಿಷ್ಠ ರೂ.6.73 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪೀಡಿ ಬ್ಲೂ, ಗ್ಲಿಸ್ಟನಿಂಗ್ ಗ್ರೇ, ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಸಾಲಿಡ್ ಫೈರ್ ರೆಡ್, ಕೆಫೀನ್ ಬ್ರೌನ್ ಹಾಗೂ ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Celerio October 2025 Sales Details

ನೂತನ 'ಸೆಲೆರಿಯೊ' ಪುಟ್ಟ ಕಾರಾಗಿದ್ದರೂ ಹೆಚ್ಚು ವಿಶಾಲ ಗಾತ್ರದಲ್ಲಿದೆ. 3,695 ಮಿ.ಮೀ ಉದ್ದ, 1,655 ಮಿ.ಮೀ ಅಗಲ ಹಾಗೂ 1,555 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 825 ಕೆಜಿ ತೂಕವಿದೆ.

ಈ ಕಾರು ಶಕ್ತಿಯುತವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀ. ಪೆಟ್ರೋಲ್ ಎಂಜಿನ್, 68.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.97 ರಿಂದ 26 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

Maruti Celerio October 2025 Sales Details

ಮತ್ತೊಂದು 1-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್, 57 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 34.43 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 313 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಐಡಲ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಸೆಂಟ್ರಲ್ ಲಾಕಿಂಗ್ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಸೆಲೆರಿಯೊ' ಸುರಕ್ಷತೆಯ ವಿಚಾರದಿಂದಲೂ ಮನೆ ಮಾತಾಗಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್‌, 3-ಪಾಯಿಂಟ್ ಸೀಟ್‌ಬೆಲ್ಟ್ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Tuesday, November 18, 2025, 10:59 [IST]
English summary
Maruti celerio october 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+