ಶೋರೂಂ ಎಡತಾಕಿದ ಗ್ರಾಹಕರು! 33 ಕಿ.ಮೀ ಮೈಲೇಜ್.. 6.26 ಲಕ್ಷ, ಈ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್!
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಮುಖ ಸೆಡಾನ್ ಆಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಡಿಜೈರ್' ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿದೆ. ಬರೋಬ್ಬರಿ 20,791 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 12,698 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 64% ಪ್ರಗತಿಯಾಗಿದೆ.
ಇದೇ ಅಕ್ಟೋಬರ್‌ನಲ್ಲಿ 'ಮಾರುತಿ ಡಿಜೈರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಳ್ಳಲು ಸಾಕಷ್ಟು ಕಾರಣಗಳಿವೆ. ವಿಶೇಷವಾಗಿ ಸೆ.22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ಬೆಲೆಯು ಇಳಿಕೆಯಾಗಿದೆ. ಹಾಗೆಯೇ ದೀಪಾವಳಿ ಹಬ್ಬಕ್ಕೂ ಹೆಚ್ಚಿನ ಗ್ರಾಹಕರು 'ಡಿಜೈರ್'ನ್ನೇ ಖರೀದಿ ಮಾಡಿದ್ದಾರೆ. ಇದರಿಂದಾಗಿ ಮಾರಾಟವು ಅಧಿಕಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

ಮಾರುತಿ ಡಿಜೈರ್ ವಿಶೇಷತೆಗಳೇನು:
ಈ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಹೊಂದಿದೆ. ಸಾಮಾನ್ಯರಿಂದ ಹಿಡಿದು ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.
ಇದು ನೋಡಲು ಸಹ ಚೆನ್ನಾಗಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಬ್ಲ್ಯೂಯಿಶ್ ಬ್ಲ್ಯಾಕ್, ಗ್ಯಾಲಂಟ್ ರೆಡ್ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಡಿಜೈರ್' ಹೆಚ್ಚು ವಿಶಾಲ ಗಾತ್ರದಲ್ಲಿದೆ. 3,995 ಮಿ.ಮೀ ಉದ್ದ, 1,735 ಮಿ.ಮೀ ಅಗಲ ಹಾಗೂ 1515 ಮಿ.ಮೀ ಎತ್ತರವಿದೆ. ಜೊತೆಗಿದು 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1435 ಕೆಜಿ ತೂಕವಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.79 ರಿಂದ 25.71 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 70 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 33.73 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ. 160 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








